Asia Cup 2023: ಭಾರತ - ಪಾಕಿಸ್ತಾನ ಪಂದ್ಯ ನಡೆಯೋದೆ ಅನುಮಾನ! ಇಲ್ಲಿದೆ ಕಾರಣ

ಏಷ್ಯಾಕಪ್ 2023ರ ಬಹುನಿರೀಕ್ಷಿತ ಭಾರತ - ಪಾಕಿಸ್ತಾನ ಪಂದ್ಯ ಸೆಪ್ಟೆಂಬರ್ 2 (ಶನಿವಾರ) ನಡೆಯಲಿದೆ. ಉಭಯ ತಂಡಗಳು ಈಗಾಗಲೇ ಶ್ರೀಲಂಕಾ ತಲುಪಿದ್ದು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕ್ಯಾಂಡಿಯಲ್ಲಿ ಈ ಪಂದ್ಯ ನಡೆಯಲಿದೆ, ಕೆಲವೇ ನಿಮಿಷಗಳಲ್ಲಿ ಪಂದ್ಯದ ಟಿಕೆಟ್‌ಗಳು ಮಾರಾಟವಾಗಿದ್ದು, ಭರ್ತಿಯಾದ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆದರೆ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯ ನಡೆಯುವದೇ ಅನುಮಾನ ಎನ್ನುವಂತಾಗಿದೆ. ಹೌದು, ಬಾಲಗೊಲ್ಲ ಚಂಡಮಾರುತ ಕ್ಯಾಂಡಿಯನ್ನು ಹಾದುಹೋಗಲು ಸಜ್ಜಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಪಂದ್ಯ ರದ್ದಾದರೂ ಅಚ್ಚರಿ ಪಡುವಂತಿಲ್ಲ ಎಂದು ಈಗಾಗಲೇ ಹವಾಮಾನ ವರದಿಗಳು ಹೇಳಿವೆ.

asia-cup-2023

ಏಷ್ಯಾಕಪ್‌ನ ಸೂಪರ್ 4 ಹಂತ ಮತ್ತು ಫೈನಲ್‌ಗೆ ಪ್ರವೇಶಿಸಿದರೆ ಭಾರತ ಮತ್ತು ಪಾಕಿಸ್ತಾನವು ಒಮ್ಮೆ ಮಾತ್ರವಲ್ಲದೆ ಇನ್ನೂ ಮೂರು ಬಾರಿ ಮುಖಾಮುಖಿಯಾಗಬಹುದು. ಈ ಎರಡು ತಂಡಗಳು ಏಷ್ಯಾ ಕಪ್ ಮತ್ತು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಮುಖಾಮುಖಿಯಾಗುವ ಕಾರಣ, ಅಭಿಮಾನಿಗಳು, ತಜ್ಞರು ಮತ್ತು ವಿಮರ್ಶಕರು ಈ ಪಂದ್ಯವನ್ನು ವೀಕ್ಷಿಸಲು ಕಾತರರಾಗಿದ್ದಾರೆ. ಒಂಬತ್ತು ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಪಾಕಿಸ್ತಾನದಲ್ಲಿ ಕೂಡ 4 ಪಂದ್ಯಗಳು ನಡೆಯಲಿವೆ.

ಮಳೆ ಬೀಳುವ ಸಾಧ್ಯತೆ ಹೆಚ್ಚು

70% ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2.30ರ ವೇಳೆಗೆ ಕ್ಯಾಂಡಿಯಲ್ಲಿ ಮಳೆ ಬೀಳು ಸಾಧ್ಯತೆ 70 ಪ್ರತಿಶತ ಇರಲಿದೆ ಎಂದು ಯುಕೆ ಮೂಲದ ಹವಾಮಾನ ಇಲಾಖೆ ವರದಿ ಮಾಡಿದೆ. 3 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಸಂಜೆ 5:30 ರ ವೇಳೆಗೆ ಮಳೆಯ ಸಾಧ್ಯತೆ 60% ಕ್ಕೆ ಇಳಿಯುವ ನಿರೀಕ್ಷೆಯಿದೆ. ಶ್ರೀಲಂಕಾದ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳಲ್ಲಿ ದೇಶದ ಹಲವಾರು ಪ್ರಾಂತ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಕ್ಯಾಂಡಿಯು ಮಧ್ಯ ಪ್ರಾಂತ್ಯದ ಅಡಿಯಲ್ಲಿ ಬರುತ್ತದೆ, ಶುಕ್ರವಾರ ಮತ್ತು ಶನಿವಾರ ಮಳೆ ಬೀಳುವ ಸಾಧ್ಯತೆ ಇದೆ.

"ಪಶ್ಚಿಮ, ಸಬರಗಾಮುವಾ, ಮಧ್ಯ ಮತ್ತು ವಾಯುವ್ಯ ಪ್ರಾಂತ್ಯಗಳು ಮತ್ತು ಗಾಲೆ ಮತ್ತು ಮಾತಾರಾ ಜಿಲ್ಲೆಗಳಲ್ಲಿ ಕೆಲವೊಮ್ಮೆ ತುಂತುರು ಮಳೆಯಾಗುತ್ತದೆ" ಎಂದು ಹವಾಮಾನ ಇಲಾಖೆ ಬುಧವಾರ ಶ್ರೀಲಂಕಾ ಸುದ್ದಿಗೆ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ. "ಪಶ್ಚಿಮ ಮತ್ತು ಸಬರಗಾಮುವಾ ಪ್ರಾಂತ್ಯಗಳಲ್ಲಿ ಮತ್ತು ಗಾಲೆ ಮತ್ತು ಮಾತಾರಾ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ 75 ಮಿಮೀ ಗಿಂತ ಹೆಚ್ಚು ಭಾರೀ ಮಳೆಯನ್ನು ನಿರೀಕ್ಷಿಸಬಹುದು." ಎಂದು ವರದಿಯಲ್ಲಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+