India vs Pakistan: ಭಾರತ - ಪಾಕಿಸ್ತಾನ ಪಂದ್ಯಕ್ಕೆ ಮೀಸಲು ದಿನ: ಮಳೆ ಬಂದ್ರು ನೋ ಟೆನ್ಷನ್!

ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಪಂದ್ಯ ಮಳೆಯಿಂದ ರದ್ದಾದ ಬಳಿಕ ಅಭಿಮಾನಿಗಳು ನಿರಾಶರಾಗಿದ್ದರು. ಈಗ ಸೂಪರ್ 4 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮತ್ತೆ ಮುಖಾಮುಖಿಯಾಗಲಿದ್ದು, ಮಳೆ ಅಡ್ಡಿಯಾಗುವ ಆತಂಕ ಎದುರಾಗಿದೆ.

ಮಹತ್ವದ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇರುವ ಕಾರಣ ಸೆಪ್ಟೆಂಬರ್ 10 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನದ ಸೂಪರ್ 4 ಪಂದ್ಯಕ್ಕೆ ಮೀಸಲು ದಿನ ಇರಲಿದೆ ಎಂದು ಎಸಿಸಿ ದೃಢಪಡಿಸಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್ 4 ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ ಎಂದು ಬಹಿರಂಗಪಡಿಸಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮೂಲತಃ ನಿಗದಿತ ದಿನದಂದು ಪೂರ್ಣ ಪಂದ್ಯವನ್ನು ಪೂರ್ಣಗೊಳಿಸಲು ಅಡ್ಡಿಯಾಗಬಹುದು ಎಂಬ ನಿರೀಕ್ಷೆಯೊಂದಿಗೆ ಮೀಸಲು ದಿನ ನಿಗದಿಮಾಡಲಾಗಿದೆ.

asia-cup-2023

ಕೊಲಂಬೋದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

"ಏಷ್ಯಾ ಕಪ್ 2023 ರ ಸೂಪರ್ 4 ಪಂದ್ಯಕ್ಕಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮೀಸಲು ದಿನವನ್ನು 10 ನೇ ಸೆಪ್ಟೆಂಬರ್ 2023 ರಂದು ಕೊಲಂಬೊದ ಆರ್. ಪ್ರೇಮದಾಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ" ಎಂದು ಎಸಿಸಿ ಹೇಳಿದೆ.

ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಸಮಯದಲ್ಲಿ ಪ್ರತಿಕೂಲ ಹವಾಮಾನದಿಂದ ಪಂದ್ಯ ಸಂಪೂರ್ಣವಾಗಿ ನಡೆಯದಿದ್ದರೆ, ಪಂದ್ಯವನ್ನು ನಿಲ್ಲಿಸಿದ ಹಂತದಿಂದ ಸೆಪ್ಟೆಂಬರ್ 11, 2023 ರಂದು ಮುಂದುವರಿಯುತ್ತದೆ. ಮಳೆಯಿಂದ ಪಂದ್ಯ ನಿಂತರೆ ಅಭಿಮಾನಿಗಳು ಟಿಕೆಟ್ ತಮ್ಮ ಬಳಿ ಇಟ್ಟುಕೊಂಡು ಮರುದಿನ ಕ್ರೀಡಾಂಗಣಕ್ಕೆ ಬಂದು ವೀಕ್ಷಿಸಲು ಅವಕಾಶ ನೀಡಲಾಗಿದೆ.

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಾತ್ರ ಮೀಸಲು ದಿನ

ಅಚ್ಚರಿ ಎಂದರೆ, ಭಾರತ - ಪಾಕಿಸ್ತಾನ ನಡುವಿನ ಸೂಪರ್ 4 ಪಂದ್ಯಕ್ಕೆ ಮಾತ್ರ ಮೀಸಲು ದಿನ ನಿಗದಿ ಮಾಡಲಾಗಿದೆ. ಉಳಿದ ಸೂಪರ್ 4 ಪಂದ್ಯಗಳಿಗೆ ಎಸಿಸಿ ಯಾವುದೇ ಮೀಸಲು ದಿನ ನಿಗದಿ ಮಾಡಿಲ್ಲ. ಕೊಲಂಬೋದಲ್ಲಿ ಮಳೆ ಮುನ್ಸೂಚನೆ ಇರುವ ಕಾರಣ ಸೂಪರ್ 4 ಹಂತದ ಪಂದ್ಯಗಳನ್ನು ಹಂಬನ್‌ತೋಟಕ್ಕೆ ಸ್ಥಳಾಂತರಿಸುವ ಬಗ್ಗೆ ಮಾತುಗಳು ಕೇಳಿಬಂದಿತ್ತಾದರೂ, ನಂತರ ಕೊಲಂಬೋದಲ್ಲಿ ಪಂದ್ಯಗಳು ನಡೆಯಲಿವೆ ಎಂದು ಎಸಿಸಿ ಹೇಳಿದೆ.

ಉಭಯ ತಂಡಗಳಿಗೆ ಮಹತ್ವದ ಪಂದ್ಯ

ಭಾರತ ಮತ್ತು ಪಾಕಿಸ್ತಾನ ನಡುವಿನ ಲೀಗ್ ಹಂತದ ಪಂದ್ಯ ಮಳೆಯಿಂದ ರದ್ದಾಗಿತ್ತು. ಭಾರತ 266 ರನ್ ಗಳಿಸಿತ್ತು ಆದರೆ ನಿರಂತರ ಮಳೆಯಿಂದಾಗಿ ಪಾಕಿಸ್ತಾನ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ.

ಭಾನುವಾರ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯದ ಮೇಲೆ ಮಳೆಯ ಅಪಾಯವಿದೆ, ಶೇ.90 ರಷ್ಟು ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಗಳು ಹೇಳಿವೆ.

ಭಾರತ ಪಾಕಿಸ್ತಾನದ ಪಂದ್ಯದ ನಂತರ ಮುಂಬೈಗೆ ಮರಳಿದ್ದ ವೇಗಿ ಬುಮ್ರಾ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಕೆಎಲ್ ರಾಹುಲ್ ಕೂಡ ಭಾರತ ತಂಡವನ್ನು ಸೇರಿಕೊಂಡಿದ್ದು ಭಾನುವಾರ ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+