Asia Cup 2023: ಈ ದೇಶದಲ್ಲಿ ಭಾರತ-ಪಾಕಿಸ್ತಾನ ಪಂದ್ಯ: ಸಮಸ್ಯೆ ಬಹುತೇಕ ಅಂತ್ಯ?

ಏಷ್ಯಾಕಪ್ 2023 ಪಂದ್ಯಾವಳಿ ಆಯೋಜನೆ ವಿವಾದ ಬಹುತೇಕ ಬಗೆಹರಿದಿದೆ. ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಹಠ ಮಾಡಿದ ನಂತರ, ಏಷ್ಯಾಕಪ್ ಪಂದ್ಯಾವಳಿ ಆಯೋಜನೆ ಪಾಕಿಸ್ತಾನಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿತ್ತು. ಆರಂಭದಲ್ಲಿ ಭಾರತ ಇಲ್ಲದೆ ಏಷ್ಯಾಕಪ್ ಆಡುವುದಾಗಿ ಹೇಳಿತ್ತು, ನಂತರ ತಾನು ಏಕದಿನ ವಿಶ್ವಕಪ್ ಆಡಲು ಭಾರತಕ್ಕೆ ಬರಲ್ಲ ಎಂದು ಬೆದರಿಕೆ ಹಾಕಿತ್ತು.

ಆದರೆ, ಬಿಸಿಸಿಐ ಒತ್ತಡಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮಣಿದಿದೆ, ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಪಂದ್ಯಾವಳಿ ಆಯೋಜನೆ ಮಾಡಲು ಮುಂದಾಗಿದೆ. ಅದರಂತೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಏಷ್ಯಾಕಪ್ ಪಂದ್ಯಗಳು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಶ್ರೀಲಂಕಾ ಆಯೋಜನೆ ಮಾಡಲಿದೆ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ಕೂಡ ಶ್ರೀಲಂಕಾದಲ್ಲಿ ನಡೆಯಲಿವೆ. ಈ ಪ್ರಸ್ತಾಪವನ್ನು ಐಸಿಸಿ ಮುಂದಿಟ್ಟಿದೆ.

 Asia Cup 2023: Srilanka will Host India vs Pakistan Match, Pakistan Will Host 4 Matches

ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ಕೂಡ ನಡೆಯಲಿದ್ದು, ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನದ ಪಂದ್ಯಗಳು ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಬಗೆಹರಿಯಿತು ಪ್ರಮುಖ ಸಮಸ್ಯೆ

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಈ ನಿರ್ಧಾರದಿಂದ ಪ್ರಮುಖ ಸಮಸ್ಯೆಯೊಂದು ಬಗಹರಿದಂತಾಗಿದೆ. ಏಷ್ಯಾಕಪ್ ಆಯೋಜನೆ ವಿಚಾರದಲ್ಲಿ ಬಿಸಿಸಿಐ ಮತ್ತು ಪಿಸಿಬಿ ನಡುವೆ ಬಿಕ್ಕಟ್ಟು ಏರ್ಪಟ್ಟಿತ್ತು, ಐಸಿಸಿ ಕೂಡ ಬಿಸಿಸಿಐ ನಡೆಯಿಂದ ಆತಂಕಗೊಂಡಿತ್ತಾದರೂ, ಸದ್ಯ ಶ್ರೀಲಂಕಾದಲ್ಲಿ ಭಾರತ ಪಾಕಿಸ್ತಾನ ಪಂದ್ಯ ಆಯೋಜನೆ ಆಗುತ್ತಿರುವುದರಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಹೈಬ್ರಿಡ್ ಮಾದರಿ ಎಂದರೇನು?

ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜನೆ ಮಾಡಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯೋಜನೆ ರೂಪಿಸಿದೆ. ಅದರಂತೆ ಭಾರತ ಆಡುವ ಎಲ್ಲಾ ಪಂದ್ಯಗಳು, ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ಶ್ರೀಲಂಕಾದಲ್ಲಿ ಆಯೋಜನೆಯಾದರೆ, ಉಳಿದ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ.

ಯುಎಇಯಲ್ಲಿ ಎರಡನೇ ಹಂತದ ಪಂದ್ಯಾವಳಿ ನಡೆಯಬೇಕೆಂದು ಪಾಕಿಸ್ತಾನ ಬಯಸಿತ್ತಾದರೂ, ಬಿಸಿಸಿಐ ಭಯದಿಂದ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಿಸಿಬಿ ನಿರ್ಧಾರವನ್ನು ವಿರೋಧಿಸಿವೆ. ಒಂದು ವೇಳೆ ಭಾರತ ಫೈನಲ್ ತಲುಪುವಲ್ಲಿ ವಿಫಲವಾದರೂ ಕೂಡ ಫೈನಲ್ ಪಂದ್ಯವನ್ನು ಶ್ರೀಲಂಕಾ ಆಯೋಜನೆ ಮಾಡಲಿದೆ.

ಬಿಸಿಸಿಐ ಕಾರ್ಯದರ್ಶಿಯಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲ್ಲ ಎಂದು ಖಚಿತವಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ ಭಾರತ ಪಾಕಿಸ್ತಾನಕ್ಕೆ ಬರದೇ ಇದ್ದರೆ ಏಕದಿನ ವಿಶ್ವಕಪ್ ಬಹಿಷ್ಕರಿಸುವುದಾಗಿ ಹೇಳಿದ್ದರು.

ಐಸಿಸಿ ಒಪ್ಪಿಗೆ ನೀಡುವ ವಿಶ್ವಾಸ

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಂ ಸೇಥಿ ಮಾತನಾಡಿ, "ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜನೆ ಮಾಡುವ ನಮ್ಮ ಯೋಜನೆಯನ್ನು ಐಸಿಸಿಗೆ ತಿಳಿಸಲಾಗಿದೆ. ಐಸಿಸಿ ನಮ್ಮ ಯೋಜನೆಯನ್ನು ವಿರೋಧಿಸುವುದಿಲ್ಲ ಎಂದು ನಂಬಿದ್ದೇವೆ." ಎಂದು ಹೇಳಿದ್ದಾರೆ.

ಏಷ್ಯಾಕಪ್ ಪಂದ್ಯಾವಳಿ ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ಟಿ20 ಮಾದರಿಯಲ್ಲಿ ಏಷ್ಯಾಕಪ್ ಪಂದ್ಯಾವಳಿ ನಡೆದರೆ, ಈ ಬಾರಿ ಏಕದಿನ ಮಾದರಿಯಲ್ಲಿ ಪಂದ್ಯಾವಳಿ ನಡೆಸಲು ನಿರ್ಧರಿಸಲಾಗಿದೆ. ಏಕದಿನ ವಿಶ್ವಕಪ್‌ಗೆ ಮೊದಲು ಏಷ್ಯಾಕಪ್ ನಡೆಯುವುದರಿಂದ, ಸಿದ್ದತೆಯ ಭಾಗವಾಗಿ ಈ ನಿರ್ಧಾರ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+