ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ತಂಡ ಏಷ್ಯಾಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲ್ಲ: ಖಚಿತಪಡಿಸಿದ ಜಯ್ ಶಾ

|
Google Oneindia Kannada News

ಮುಂಬೈ, ಅಕ್ಟೋಬರ್ 18: ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎನ್ನುವ ವದಂತಿ ನಡುವೆ 2023ರ ಏಷ್ಯಾಕಪ್‌ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವುದಿಲ್ಲ, ಅದರ ಬದಲಾಗಿ ತಟಸ್ಥ ಸ್ಥಳದಲ್ಲಿ ಆಯೋಜಿಸಲು ಒತ್ತಾಯಿಸುತ್ತದೆ ಎಂದು ಏಷ್ಯನ್ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಜಯ್‌ ಶಾ ಮಂಗಳವಾರ ಖಚಿತಪಡಿಸಿದ್ದಾರೆ.

ಭಾರತದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ಗೂ ಮುನ್ನ 50 ಓವರ್‌ಗಳ ಏಷ್ಯಾಕಪ್‌ ಆಯೋಜನೆಯ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನಗಳ ನಡುವೆ ರಾಜ ತಾಂತ್ರಿಕ ವ್ಯವಸ್ಥೆ ಸರಿಯಿಲ್ಲದ ಕಾರಣ ಭಾರತ ಕ್ರೀಡಾ ತಂಡಗಳು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ಭಾರತ ಸರಕಾರ ಅನುಮತಿಸುತ್ತಿಲ್ಲ. ಹಾಗಾಗಿ ಏಷ್ಯಾಕಪ್‌ಗೂ ಕೂಡ ಟೀಮ್ ಇಂಡಿಯಾ ತೆರಳುವುದು ಅನುಮಾನ ಎನ್ನಲಾಗಿತ್ತು.

ಕೊನೆಗೂ ಕನ್ನಡಿಗನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ; ಬಿಸಿಸಿಐ ನೂತನ ಅಧ್ಯಕ್ಷ ರೋಜರ್ ಬಿನ್ನಿ ಯಾರು?ಕೊನೆಗೂ ಕನ್ನಡಿಗನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ; ಬಿಸಿಸಿಐ ನೂತನ ಅಧ್ಯಕ್ಷ ರೋಜರ್ ಬಿನ್ನಿ ಯಾರು?

ಬಿಸಿಸಿಐ ವಾರ್ಷಿಕ ಸಭೆಯ ಬಳಿಕ ಮಾತನಾಡಿದ ಭಾರತೀಯ ಕ್ರಿಕೆಟ್‌ ಮಂಡಳಿಯ ಕಾರ್ಯದರ್ಶಿ ಜಯ್ ಶಾ, "ನಾವು 2023ರ ಏಷ್ಯಾಕಪ್‌ಗಾಗಿ ಪಾಕಿಸ್ತಾನಕ್ಕೆ ತೆರಳದಿರಲು ನಿರ್ಧರಿಸಿದ್ದೇವೆ. ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಾವು ನಿರ್ಧರಿಸಿದ್ದೇವೆ. ಪಾಕಿಸ್ತಾನಕ್ಕೆ ಭೇಟಿ ನೀಡಲು ನಮ್ಮ ತಂಡಕ್ಕೆ ಅನುಮತಿ ನೀಡುವುದನ್ನು ಸರಕಾರ ನಿರ್ಧರಿಸುತ್ತದೆ, ಆದ್ದರಿಂದ ನಾವು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಏಷ್ಯಾಕಪ್‌ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸಲಾಗುತ್ತದೆ" ಎಂದು ಎಸಿಸಿ ಮುಖ್ಯಸ್ಥರಾಗಿರುವ ಶಾ ಖಚಿತಪಡಿಸಿದ್ದಾರೆ.

Asia Cup 2023 To be Held at Neutral venue, Confirmed by ACC Chief Jay Shah

ಮುಂದಿನ ಏಷ್ಯಾಕಪ್‌ ಆಯೋಜನೆಯ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ರಾಜ ತಾಂತ್ರಿಕ ಕಾರಣಗಳಿಂದ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂಬ ಊಹಾಪೋಹ ಹರಿದಾಡಿತ್ತು. ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣಿಸದ ಕಾರಣ , ಮುಂದಿನ ಆವೃತ್ತಿಯ ಏಷ್ಯಾಕಪ್‌ಗಾಗಿ ಭಾರತ ತಂಡ ಕೂಡ ಪಾಕಿಸ್ತಾನಕ್ಕೆ ಪ್ರವಾಸ ಮಾಡುವುದಿಲ್ಲ ಎಂದು ಶಾ ಹೇಳಿದ್ದಾರೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರಿಗೆ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತಿಳಿಸಲಾಗಿದೆ, ಇದರ ಮುಂದಿನದು ಸರಕಾರದ ಸಲಹೆಯ ಮೇಲೆ ಅವಲಂಬಿಸಿರುತ್ತದೆ ಎಂದು ತಿಳಿಸಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ ಭಾರತ 2023 ರ ವಿಶ್ವಕಪ್‌ಗೆ ಆತಿಥ್ಯವಹಿಸಲಿದೆ. ಹಾಗೆಯೇ, ಪಾಕಿಸ್ತಾನ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತದೆ. ಇದರ ಪರಿಸ್ಥಿತಿ ಏನೂ ಬಿಸಿಸಿಐ ಪದಾಧಿಕಾರಿಗಳು ಪರಿಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ''ಇದಕ್ಕೆ ಈಗಲೇ ಪ್ರತಿಕ್ರಿಯೆ ನೀಡುವುದಕ್ಕಾಗಲ್ಲ, ಸರ್ಕಾರವು ಅಂತಿಮ ಕರೆಯನ್ನು ತೆಗೆದುಕೊಳ್ಳುತ್ತದೆ ಮತ್ತು ನಾವು ಅದನ್ನು ಪಾಲಿಸುತ್ತೇವೆ" ಎಂದು ಶುಕ್ಲಾ ಹೇಳಿದರು.

Asia Cup 2023 To be Held at Neutral venue, Confirmed by ACC Chief Jay Shah

ಇನ್ನು ಮುಂಬೈನಲ್ಲಿ ನಡೆದ 91ನೇ ವಾರ್ಷಿಕ ಸಭೆಯಲ್ಲಿ ಮಂಗಳವಾರ ಕರ್ನಾಟಕದ ರೋಜರ್ ಬಿನ್ನಿರನ್ನು ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಘೋಷಿಸಲಾಗಿದೆ. ಇದರ ಜೊತೆಗೆ ಸಭೆಯಲ್ಲಿ ಮುಂಬರುವ ಆವೃತ್ತಿಯಿಂದ ಮಹಿಳಾ ಐಪಿಎಲ್ ಆಯೋಜಿಸಲು ಕೂಡ ಅನುಮೋದನೆ ನೀಡಲಾಗಿದೆ. ಒಟ್ಟು 5 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.

English summary
Jay Shah, President of Asian Cricket Council confirmed on Tuesday that the Asia Cup 2023 will be held at a neutral venue. He said after BCCI Annual General Meeting held in Mumbai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X