ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟ ಕನ್ನಡತಿ ಶ್ರೇಯಾಂಕಾ ಪಾಟೀಲ್, ಸ್ಮೃತಿ, ಶಫಾಲಿ, ದೀಪ್ತಿ

Asian Games 2026: ಜಪಾನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಮಂಗಳವಾರ (ಸೆಪ್ಟೆಂಬರ್ 22) ಏಷ್ಯನ್ ಗೇಮ್ಸ್ 2026ರ ಕ್ರಿಕೆಟ್‌ನ ಫೈನಲ್‌ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಈ ಗೆಲುವಿಗೆ ಪ್ರಮುಖ ಕಾರಣಕರ್ತೆಯರಾಗಿದ್ದು ಆರ್‌ಸಿಬಿ ಸ್ಟಾರ್ ಆಟಗಾರ್ತಿಯರು.

ಏಷ್ಯನ್ ಗೇಮ್ಸ್ 2026ರ ಮಹಿಳಾ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ 147 ರನ್‌ಗಳ ಬೃಹತ್ ಅಂತರದ ಐತಿಹಾಸಿಕ ಗೆಲುವು ಸಾಧಿಸಿ, ಸತತ ಎರಡನೇ ಬಾರಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಟೀಮ್ ಇಂಡಿಯಾವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 216 ರನ್‌ಗಳನ್ನ ಬೃಹತ್ ಮೊತ್ತ ಪೇರಿಸಿತು. ಆದರೆ ಲಂಕಾ ಪಡೆ 15.4 ಓವರ್‌ಗಳಿಗೆ ಕೇವಲ 69 ರನ್‌ ಗಳಿಸಿ ಆಲ್‌ಔಟ್‌ ಆಯಿತು.

Asian Games 2026 Royal Challengers Bengaluru Stars Shine as India Women Beat Sri Lanka to Win Gold

ಮಿಂಚಿದ ಸ್ಮೃತಿ, ಶಫಾಲಿ, ರಿಚಾ ಘೋಷ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಭರ್ಜರಿ ಆರಂಭ ನೀಡಿದರು. ಈ ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ ಕೇವಲ 9.3 ಓವರ್‌ಗಳಲ್ಲಿ 99 ರನ್‌ಗಳ ಜಂಟಿ ಕೊಡುಗೆ ನೀಡಿತು. ಶಫಾಲಿ ವರ್ಮಾ 29 ಎಸೆತಗಳಲ್ಲಿ 48 ರನ್ ಬಾರಿಸಿ ಔಟಾದರು.

ನಂತರ ಅದ್ಭುತ ಫಾರ್ಮ್‌ನಲ್ಲಿದ್ದ ಸ್ಮೃತಿ ಮಂಧಾನ ಕೇವಲ 45 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 79 ರನ್‌ಗಳನ್ನು ಕಲೆಹಾಕಿದರು. ಕೊನೆಯ ಓವರ್‌ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಕೇವಲ 22 ಎಸೆತಗಳಲ್ಲಿ ಅಜೇಯ 49 ರನ್ ಬಾರಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 216 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಇದು ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ದಾಖಲಾದ ಗರಿಷ್ಠ ತಂಡದ ಮೊತ್ತವಾಗಿದೆ.

ಭಾರತದ ಬೌಲರ್‌ಗಳಿಂದ ಮಾರಕ ಬೌಲಿಂಗ್ ದಾಳಿ

217 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ ಕೇವಲ 15.4 ಓವರ್‌ಗಳಲ್ಲಿ 69 ರನ್‌ಗಳಿಗೆ ಆಲ್ಔಟ್ ಆಯಿತು. ಶ್ರೀಲಂಕಾದ ಪರ ನಾಯಕಿ ಚಾಮರಿ ಅತಪತ್ತು (29 ರನ್) ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್‌ಗಳು 15 ರನ್‌ಗಳ ಗಡಿ ದಾಟಲಿಲ್ಲ.

ಟೀಮ್ ಇಂಡಿಯಾ ಪರ ಮಾರಕ ಬೌಲಿಂಗ್ ದಾಳಿ ನಡೆದಿಸಿದ ದೀಪ್ತಿ ಶರ್ಮಾ 3 ವಿಕೆಟ್‌ ಕಬಳಿಸಿದರೆ, ಕನ್ನಡತಿ ಶ್ರೇಯಾಂಕಾ ಪಾಟೀಲ್, ಶ್ರೀ ಚರಣಿ ಹಾಗೂ ಶಫಾಲಿ ವರ್ಮಾ ತಲಾ 2 ವಿಕೆಟ್‌ಗಳನ್ನು ಪಡೆಯುವ ಮೂಲಕ ಶ್ರೀಲಂಕಾದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಮತ್ತೆ ಚಿನ್ನದ ಪದಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

ಭಾರತ ತಂಡವು ಕಳೆದ ಆವೃತ್ತಿಯಲ್ಲೂ ಚಿನ್ನ ಗೆದ್ದಿದ್ದು, ಈ ಬಾರಿಯೂ ತನ್ನ ಚಾಂಪಿಯನ್ ಪಟ್ಟವನ್ನು ಕಾಯ್ದುಕೊಂಡಿದೆ. ಇನ್ನೂ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಜಂಟಿಯಾಗಿ 4,000 ರನ್‌ಗಳ ಗಡಿಯನ್ನು ದಾಟಿದ ವಿಶ್ವದ ಮೊದಲ ಆರಂಭಿಕ ಜೋಡಿ ಎಂಬ ಇತಿಹಾಸ ನಿರ್ಮಿಸಿದೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಈ ಅದ್ಭುತ ಪ್ರದರ್ಶನವು ಏಷ್ಯನ್ ಗೇಮ್ಸ್ 2026ರಲ್ಲಿ ಭಾರತಕ್ಕೆ ಕ್ರಿಕೆಟ್ ವಲಯದಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದೆ. ವಿಶೇಷ ಅಂದ್ರೆ ಈ ತಂಡಲ್ಲಿ ಆರ್‌ಸಿಬಿಯ ಮೂವರು ಆಟಗಾರ್ತಿಯರಾದ ಸ್ಮೃತಿ ಮಂಧಾನ, ಕನ್ನಡತಿ ಶ್ರೇಯಾಂಕಾ ಪಾಟೀಲ್ ಹಾಗೂ ರಿಚಾ ಘೋಷ್ ಅವರು ಅದ್ಭುತ ಪ್ರದರ್ಶನ ತೊರಿದ್ದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+