AUS vs IND ODI 2025: ಟೀಂ ಇಂಡಿಯಾ ತಂಡಕ್ಕೆ ಮರಳಿದ ರೋಹಿತ್, ಕೊಹ್ಲಿ, ನಿತೀಶ್ ರೆಡ್ಡಿ ಚೊಚ್ಚಲ ಪಂದ್ಯಕ್ಕೆ ಪಾದಾರ್ಪಣೆ
AUS vs IND: ಪರ್ತ್‌ನಲ್ಲಿ ಇಂದು (ಅಕ್ಟೋಬರ್ 19) ಭಾರತ-ಆಸ್ಟ್ರೇಲಿಯಾ ನಡುವೆ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮರಳಿದ್ದಾರೆ. ಜೊತೆಗೆ ನಿತೀಶ್ ರೆಡ್ಡಿ ಚೊಚ್ಚಲ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.
ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್ ಆರಂಭಿಸಿದೆ. ಈ ಪಂದ್ಯಕ್ಕೆ ಭಾರತದ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮರಳಿದ್ದಾರೆ. ಜೊತೆಗೆ ಹಾರ್ದಿಕ್ ಪಾಂಡ್ಯ ಗೈರು ಕಾರಣ ಅವರ ಜಾಗಕ್ಕೆ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಪದಾರ್ಪಣೆ ಮಾಡಿದರು.

ಅನುಭವಿ ಬ್ಯಾಟರ್ಗಳು ಮತ್ತು ಮಾಜಿ ನಾಯಕರಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಮೊದಲ ಬಾರಿ ಭಾರತ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಇವರು ಇದೀಗ ನಡೆಯುತ್ತಿರುವ ಏಕದಿನ ಕ್ರಿಕೆಟ್‌ನ ಪ್ರಮುಖ ರೂವಾರಿಗಳು ಆಗಿದ್ದಾರೆ. ಅಲ್ಲದೆ, ವಿಶ್ವಕಪ್ವರೆಗೆ ಸ್ಥಾನ ಉಳಿಸಿಕೊಳ್ಳುವ ದೃಷ್ಟಿಯಿಂದ ಅವರಿಬ್ಬರಿಗೆ ಇದು ಮಹತ್ವದ ಸರಣಿ ಆಗಿದೆ. ಮತ್ತೊಂದೆಡೆ, ಶುಭಮಾನ್ ಗಿಲ್ಗೆ ಏಕದಿನ ತಂಡದ ನಾಯಕರಾಗಿ ಮೊದಲ ಸವಾಲಾಗಿದೆ.
ಶುಭ್‌ಮನ್ ಗಿಲ್ ಅವರು ಮೊದಲ ಏಕದಿನ ಪಂದ್ಯದೊಂದಿಗೆ ಎಲ್ಲಾ 3 ಕ್ರಿಕೆಟ್ ಮಾದರಿಯಲ್ಲಿ ಭಾರತವನ್ನು ಮುನ್ನಡೆಸಿದ 7ನೇ ನಾಯಕ ಎಂಬ ಕೀರ್ತಿಗೆ ಪಾತ್ರರಾದವರು. ಈ ಹಿಂದೆ ಈ ಸ್ಥಾನಗಳನ್ನು ತುಂಬಿದವರ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್, ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ಕೆಎಲ್ ರಾಹುಲ್ ಇದ್ದಾರೆ.
ಇದೀಗ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ 30 ರನ್‌ಗಳ ಒಳಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಾಯಕ ಶುಭ್‌ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರು ವಿಕೆಟ್ ಒಪ್ಪಿಸಿದ್ದು, ಇದರಿಂದ ತಂಡಕ್ಕೆ ಆರಂಭಿಕ ಹೊಡೆತ ಬಿದ್ದಂತಾಗಿದೆ.
ಆರಂಭಿಕರಾಗಿ ಬ್ಯಾಟಿಂಗ್‌ಗೆ ಇಳಿದ ರೋಹಿತ್ ಶರ್ಮಾ ಒಂದು ಬೌಂಡರಿ ಸಹಿತ 14 ಬಾಲ್‌ಗಳಿಗೆ ಕೇವಲ 8 ಕಲೆಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ವಿರಾಟ್ ಕೊಹ್ಲಿ 8 ಬಾಲ್‌ಗೆ ಶೂನ್ಯ ಸುತ್ತಿದ್ದರೆ, ಇನ್ನೂ ರೋಹಿತ್ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಶುಭ್‌ಮನ್ ಗಿಲ್ ಅವರು 18 ಬಾಲ್‌ಗೆ ಎರಡು ಬೌಂಡರಿ ಸಹಿತ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದೀಗ ಅಕ್ಸರ್ ಪಟೇಲ್, ಶ್ರೇಯಸ್ ಅಯ್ಯರ್ ಆಟ ಮುಂದುವರೆಸಿದ್ದಾರೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಫಿಲಿಪ್ (ವಿ.ಕೀ), ಮ್ಯಾಟ್ ರೆನ್ಶಾ, ಕೂಪರ್ ಕೊನೊಲಿ, ಮಿಚೆಲ್ ಓವನ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಝಲ್ವುಡ್.












Click it and Unblock the Notifications