Maxwell: ಏಕದಿನ ವಿಶ್ವಕಪ್‌ನಲ್ಲಿ ವೇಗದ ಶತಕ ಗಳಿಸಿ ಅಬ್ಬರಿಸಿದ ಮ್ಯಾಕ್ಸ್‌ವೆಲ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮ್ಯಾಕ್ಸ್‌ವೆಲ್ ಸುನಾಮಿಗೆ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ವಿಶ್ವಕಪ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿ ದಾಖಲೆ ನಿರ್ಮಿಸಿದರು.

ಈ ಬಾರಿ ಏಕದಿನ ವಿಶ್ವಕಪ್‌ನ ಮೊದಲ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ ಆಸ್ಟ್ರೇಲಿಯಾ ನಂತರ ಉತ್ತಮ ಪ್ರದರ್ಶನ ನೀಡುತ್ತಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ನಂತರ ಎರಡು ಪಂದ್ಯಗಳನ್ನು ಗೆದ್ದ ಆಸ್ಟ್ರೇಲಿಯಾ, ಐದನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದೆ.

 Aus vs Ned: Maxwell Smashes Fastest World Cup Century in Australias 399/8

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 399 ರನ್ ಗಳಿಸಿದೆ. ಆರಂಭದಲ್ಲಿ ಡೇವಿಡ್ ವಾರ್ನರ್ ಅಬ್ಬರಿಸಿದರೆ, ಕೊನೆಯಲ್ಲಿ ಮ್ಯಾಕ್ಸ್‌ವೆಲ್ ಬೌಂಡರಿಗಳ ಸುರಿಮಳೆಗೈದರು.

ಹಲವು ದಾಖಲೆಗಳು ನಿರ್ಮಾಣ

ಆರಂಭದಲ್ಲೇ ಮಿಚೆಲ್ ಮಾರ್ಷ್ ಅವರ ವಿಕೆಟ್ ಕಳೆದುಕೊಂಡ ಬಳಿಕ ಡೇವಿಡ್ ವಾರ್ನರ್ ಮತ್ತು ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾಗೆ ಭದ್ರ ಬುನಾದಿ ಹಾಕಿದರು. ಸ್ಮಿತ್ 68 ಎಸೆತಗಳಲ್ಲಿ 71 ರನ್ ಗಳಿಸಿದರೆ, ಡೇವಿಡ್ ವಾರ್ನರ್ 93 ಎಸೆತಗಳಲ್ಲಿ 11 ಬೌಂಡರಿ 3 ಸಿಕ್ಸರ್ ನೆರವಿನಿಂದ 104 ರನ್ ಗಳಿಸಿದರು.

ಏಕದಿನ ವಿಶ್ವಕಪ್‌ನಲ್ಲಿ ಆರನೇ ಶತಕ ಗಳಿಸಿದ ಡೇವಿಡ್ ವಾರ್ನರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದರು. 7 ಶತಕ ಸಿಡಿಸಿರುವ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮಾರ್ನಸ್ ಲ್ಯಾಬುಸ್ಚಾಗ್ನೆ ಕೂಡ 47 ಎಸೆತಗಳಲ್ಲಿ 62 ರನ್ ಗಳಿಸಿ ರನ್ ಗಳಿಕೆಗೆ ವೇಗ ನೀಡಿದರು.

ಮ್ಯಾಕ್ಸ್‌ವೆಲ್ ಅಬ್ಬರ

ನಂತರ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಅಕ್ಷರಶಃ ಅಬ್ಬರಿಸಿದರು. ಕೇವಲ 44 ಎಸೆತಗಳಲ್ಲಿ 9 ಬೌಂಡರಿ 8 ಭರ್ಜರಿ ಸಿಕ್ಸರ್ ಸಹಿತ 106 ರನ್ ಗಳಿಸುವ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದರು. 40 ಎಸೆತಗಳಲ್ಲಿ ಶತಕವನ್ನು ಪೂರೈಸಿದ ಅವರು, ಏಕದಿನ ವಿಶ್ವಕಪ್‌ನಲ್ಲಿ ಅತಿ ವೇಗದ ಶತಕದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.

ಇದೇ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಂ 49 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಮಾಡಿದ್ದರು, ಈಗ ಆ ದಾಖಲೆಯನ್ನು ಮ್ಯಾಕ್ಸ್‌ವೆಲ್ ಮುರಿದರು. 46.2ನೇ ಓವರ್ ನಲ್ಲಿ ಅರ್ಧಶತಕ ಪೂರೈಸಿದ ಅವರು ನಂತರ 48.4 ಓವರ್ ಗಳಲ್ಲಿ ಶತಕ ಪೂರೈಸಿದರು, ಅಂದರೆ ಕೇವಲ 2.2 ಓವರ್ ಗಳಲ್ಲಿ 50 ರನ್ ಸಿಡಿಸಿ ಅಬ್ಬರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+