Ind vs Aus: 337 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್; ಭಾರತಕ್ಕೆ ಆರಂಭಿಕ ಆಘಾತ
ಅಡಿಲೇಡ್‌ನಲ್ಲಿ ನಡೆಯುತ್ತಿರುವ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಭಾರತವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್‌ಗಳಿಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ ಬಳಿಕ ಮೊದಲ ಇನ್ನಿಂಗ್ಸ್‌ನಲ್ಲಿ 337 ರನ್ ಗಳಿಸುವ ಮೂಲಕ 157 ರನ್ ಮುನ್ನಡೆ ಪಡೆದುಕೊಂಡಿದೆ. ಟ್ರಾವಿಸ್ ಹೆಡ್ ಅಮೋಘ ಶತಕದ ನೆರವಿನಿಂದ ಕಾಂಗರೂ ಪಡೆ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.
ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು, ಮಿಚೆಲ್ ಸ್ಟಾರ್ಕ್ ವೇಗದ ಬೌಲಿಂಗ್ ದಾಳಿಗೆ ಸಿಲುಕಿದ ಭಾರತ 180 ರನ್‌ಗಳಿಗೆ ಆಲೌಟ್ ಆಗಿತ್ತು. ಕೆಎಲ್ ರಾಹುಲ್ 37 ರನ್, ಶುಭಮನ್ ಗಿಲ್ 31 ರನ್, ಅಶ್ವಿನ್ 22 ರನ್ ಗಳಿಸಿದರೆ, ನಿತೀಶ್ ರೆಡ್ಡಿ 42 ರನ್ ಗಳಿಸಿದ್ದರು. ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆದು ಭಾರತಕ್ಕೆ ಆಘಾತ ನೀಡಿದ್ದರು. ಪಾಟ್ ಕಮ್ಮಿನ್ಸ್ ಮತ್ತು ಸ್ಕಾಟ್ ಬೊಲ್ಯಾಂಡ್ ತಲಾ ಎರಡು ವಿಕೆಟ್ ಪಡೆದುಕೊಂಡಿದ್ದರು.

ಭಾರತಕ್ಕೆ ತಲೆನೋವಾದ 'ಹೆಡ್'
ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ದಿನದಾಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 86 ರನ್ ಗಳಿಸಿತ್ತು. ಎರಡನೇ ದಿನ ಆಸ್ಟ್ರೇಲಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಟ್ರಾವಿಸ್ ಹೆಡ್ ಮತ್ತೊಮ್ಮೆ ಭಾರತವನ್ನು ಇನ್ನಿಲ್ಲದಂತೆ ಕಾಡಿದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ಕಡೆ ನಿಂತು ಆಡಿದ ಅವರು, 141 ಎಸೆತಗಳಲ್ಲಿ 140 ರನ್ ಗಳಿಸಿದರು. ಮಾರ್ನಸ್ ಲ್ಯಾಬುಷಾನೆ 64 ರನ್ ಗಳಿಸಿ ಆಸರೆಯಾದರು. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ತಲಾ 4 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ನಿತೀಶ್ ರೆಡ್ಡಿ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದು ವಿಕೆಟ್ ಪಡೆದುಕೊಂಡರು.
157 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ 7 ರನ್ ಗಳಿಸಿ ಔಟಾದರು. ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಕ್ರೀಸ್‌ನಲ್ಲಿದ್ದು ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ.












Click it and Unblock the Notifications