T20 World Cup: IPL ಸ್ಟಾರ್ ಆಟಗಾರರಿಂದಲೇ ತುಂಬಿಕೊಂಡಿದೆ ಆಸ್ಟ್ರೇಲಿಯಾ ಟೀಮ್: RCB ತಂಡದ ಇಬ್ಬರಿಗೆ ಚಾನ್ಸ್
ಇದೇ ವರ್ಷದ ಜೂನ್‌ನಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲ ತಂಡಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸಿವೆ. ಭಾರತ ಸಹ ಮಂಗಳವಾರ ತನ್ನ ತಂಡವನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೆ, ಆಸ್ಟ್ರೇಲಿಯಾ ಸಹ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಐಪಿಎಲ್‌ನಲ್ಲಿ ಆಡುತ್ತಿರುವ ಆಟಗಾರರೇ ತುಂಬಿಕೊಂಡಿರುವುದು ವಿಶೇಷ..
ಭಾರತದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಆಟಗಾರರಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮಣೆ ಹಾಕಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಪರ ಅಮೋಘ ಆಟವನ್ನು ಆಡುತ್ತಿರುವ ಜಾಕ್ ಫ್ರೇಸರ್ ಮೆಕ್ ಗುರ್ಕ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಕಡೆಗಣಿಸಿದೆ. ಅಲ್ಲದೆ ಆಸೀಸ್ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಅವರಿಗೂ ಗೇಟ್ ಪಾಸ್ ನೀಡಿದೆ.

ಆಸೀಸ್ ತಂಡದಲ್ಲಿ ಐಪಿಎಲ್ ಸ್ಟಾರ್ಸ್
ಪ್ರಸಕ್ತ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿರುವ ವಿಶ್ವಕಪ್ ವಿಜೇತ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರಿಗೆ ಆಸೀಸ್ ತಂಡದಲ್ಲಿ ರೆಡ್ ಕಾರ್ಪೆಟ್ ಹಾಕಿದೆ. ಇದೇ ತಂಡದ ಪರ ಬ್ಯಾಟ್ ಮಾಡುವ ಆರಂಭಿಕ ಆಟಗಾರ ಟಿಮ್ ಡೇವಿಡ್ ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಆರ್‌ಸಿಬಿ ತಂಡದ ಪರ ಆಡುತ್ತಿರುವ ಕ್ಯಾಮರೂನ್ ಗ್ರೀನ್, ಗ್ಲೇನ್ ಮ್ಯಾಕ್ಸ್‌ವೆಲ್ ಆಟ ಆಯ್ಕೆದಾರರ ಗಮನ ಸೆಳೆಯುವಲ್ಲಿ ಸಫಲವಾಗಿದೆ.
ಕ್ಯಾಮರೂನ್ ಗ್ರೀನ್ ಆಸ್ಟ್ರೇಲಿಯನ್ ಕ್ರಿಕೆಟ್‌ಗೆ ಬಹು ದಿನಗಳ ಬಳಿಕ ಮರಳಲಿದ್ದಾರೆ. ಅವರು ನವೆಂಬರ್ 2022 ರಲ್ಲಿ ಕಾಂಗರೂ ತಂಡಕ್ಕಾಗಿ ತಮ್ಮ ಕೊನೆಯ T20 ಪಂದ್ಯವನ್ನು ಆಡಿದ್ದರು. ಇದು 2022 T20 ವಿಶ್ವಕಪ್ ಪಂದ್ಯವಾಗಿತ್ತು.
ಗ್ಲೇನ್‌ಗೆ ಚಾನ್ಸ್
ಆರ್‌ಸಿಬಿ ತಂಡದ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರು ಪ್ರಸಕ್ತ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ, ಹಿಂದಿನ ಅವರ ಪ್ರದರ್ಶನವನ್ನು ಪರಿಗಣಿಸಿ ತಂಡದಲ್ಲಿ ಸ್ಥಾನ ನೀಡಲಾಗಿದೆ.

ದುಬಾರಿ ವೇಗಿಗೂ ಅವಕಾಶ
ಐಪಿಎಲ್ ಇತಿಹಾಸದ ದುಬಾರಿ ಆಟಗಾರ ಎಂಬ ಹಣೆ ಪಟ್ಟೆಯನ್ನು ಹೊತ್ತಿರುವ ಆಸೀಸ್ ತಂಡದ ಮಿಚೆಲ್ ಸ್ಟಾರ್ಕ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇವರನ್ನು ಐಪಿಎಲ್ ಹರಾಜಿನಲ್ಲಿ ಕೆಕೆಆರ್ 24.75 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಇವರು ಸ್ಥಿರ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಆದರೂ ಇವರಿಗೂ ಚಾನ್ಸ್ ನೀಡಲಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿರುವ ಮಾರ್ಕಸ್ ಸ್ಟೊಯಿನಿಸ್ ಕೂಡ ಆಸ್ಟ್ರೇಲಿಯಾ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟೊಯಿನಿಸ್ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಅನುಭವಿ ಎಡಗೈ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಕೂಡ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಾರ್ನರ್ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ.

ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ಸಿ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್‌ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications