Champions Trophy 2025: ಭಾರತಕ್ಕೆ ಕಾಟ ಕೊಟ್ಟಿದ್ದ ಇಬ್ಬರು ಆಟಗಾರರು ಆಸ್ಟ್ರೇಲಿಯಾ ತಂಡದಿಂದ ಔಟ್!
ಭಾರತದ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಿರುವ ಆಸ್ಟ್ರೇಲಿಯಾ, ಅದಕ್ಕೂ ಮುನ್ನ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವ ಗೆಲ್ಲುವ ವಿಶ್ವಾಸದಲ್ಲಿದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಇನ್ನು ಕೆಲವೇ ದಿನಗಳಿರುವಾಗ ದೊಡ್ಡ ಆಘಾತ ಎದುರಾಗಿದ್ದು ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಗಾಯಗೊಂಡಿದ್ದು ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಇವರಿಬ್ಬರು ಗಾಯಗೊಳ್ಳುವ ಜೊತೆಗೆ ಆಸ್ಟ್ರೇಲಿಯಾ ತಂಡದಲ್ಲಿ ಒಟ್ಟು ನಾಲ್ಕು ಬದಲಾವಣೆಗಳನ್ನು ಮಾಡಿದಂತಾಗಿದೆ.

ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಲಭ್ಯತೆಯ ಬಗ್ಗೆ ಅನುಮಾನಗಳಿದ್ದವು. ಆದರೆ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಇವರಿಬ್ಬರೂ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಮುನ್ನ ಫಿಟ್ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಮಾರ್ಕಸ್ ಸ್ಟೊಯಿನಿಸ್ ಏಕದಿನ ಮಾದರಿಯಿಂದ ನಿವೃತ್ತಿಯಾಗಿದ್ದು ತಂಡಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಆಸ್ಟ್ರೇಲಿಯಾ ತಂಡದಲ್ಲಿ ನಾಲ್ಕು ಬದಲಾವಣೆ
ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್‌ಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿವೃತ್ತಿ ಘೋಷಣೆ ಮಾಡಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್‌ವುಡ್ ಇಬ್ಬರೂ ವೇಗಿಗಳು ಪಂದ್ಯಾವಳಿಯಿಂದ ಹೊರಗುಳಿದಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿದೆ. ಮತ್ತೊಬ್ಬ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಬೆನ್ನುನೋವಿನಿಂದ ತಂಡದಿಂದ ಹೊರಗುಳಿದಿದ್ದರು, ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ಪ್ಯಾಟ್ ಕಮ್ಮಿನ್ಸ್ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಆಡಲಿಲ್ಲ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ಅವರು ಪಾದದ ಗಾಯಕ್ಕೆ ತುತ್ತಾಗಿದ್ದು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ತಮ್ಮ ತಾತ್ಕಾಲಿಕ ತಂಡದಲ್ಲಿ 4 ಬದಲಾವಣೆಗಳನ್ನು ಮಾಡಲೇಬೇಕಾಗಿದೆ. ಫೆಬ್ರವರಿ 12 ರಂದು ಅಂತಿಮ ತಂಡ ಸಲ್ಲಿಕೆ ಕೊನೆಯ ದಿನವಾಗಿದ್ದು. ಆಸ್ಟ್ರೇಲಿಯಾ ಬದಲೀ ಆಟಗಾರರನ್ನು ಹೆಸರಿಸಲಿದೆ.












Click it and Unblock the Notifications