Champions Trophy Ind vs Aus: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; ತಂಡದಲ್ಲಿ ಬದಲಾವಣೆ!
ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಟಾಸ್ ಸೋಲಿನ ಸರಣಿ ಮುಂದುವರೆದಿದೆ. ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದ ತಂಡವನ್ನೇ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಭಾರತ ಉಳಿಸಿಕೊಂಡಿದ್ದರೆ, ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿದೆ.
ಎರಡೂ ತಂಡಗಳು ಲೀಗ್ ಹಂತದ ಪಂದ್ಯಗಳಲ್ಲಿ ಸೋಲು ಕಂಡಿಲ್ಲ, ಭಾರತ ಆಡಿರುವ ಮೂರು ಪಂದ್ಯಗಳನ್ನು ಗೆದ್ದು ಮೊದಲ ಸ್ಥಾನದೊಂದಿಗೆ ಸೆಮಿಫೈನಲ್‌ಗೆ ಬಂದಿದ್ದರೆ. ಆಸ್ಟ್ರೇಲಿಯಾ ಆಡಿದ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದಿದ್ದು ಉಳಿದ ಎರಡು ಪಂದ್ಯಗಳು ಮಳೆಗೆ ಸಿಲುಕಿದ್ದವು. ಇದರಿಂದ ಎರಡೂ ಪಂದ್ಯಗಳಲ್ಲಿ ತಲಾ ಒಂದೊಂದು ಅಂಕ ಪಡೆದು 4 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಸೆಮಿಫೈನಲ್ ಪ್ರವೇಶಿಸಿದೆ.

ದುಬೈನಲ್ಲಿ ಭಾರತ ಈವರೆಗೂ ಮೂರು ಪಂದ್ಯಗಳನ್ನು ಆಡಿದ್ದು ಇಲ್ಲಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಆಡಿದ ವರುಣ್ ಚಕ್ರವರ್ತಿ 5 ವಿಕೆಟ್ ಪಡೆದಿದ್ದು ಆಸ್ಟ್ರೇಲಿಯಾಗೆ ಸವಾಲೊಡ್ಡುವ ವಿಶ್ವಾಸದಲ್ಲಿದ್ದಾರೆ. ಆಸ್ಟ್ರೇಲಿಯಾ ಕೂಡ ಭಾರತದ ಸ್ಪಿನ್ ಬಲದ ಬಗ್ಗೆ ಗೊತ್ತಿದ್ದು ಅದನ್ನು ಯಾವ ರೀತಿ ಎದುರಿಸುತ್ತದೆ ಎಂದು ಕಾದು ನೋಡಬೇಕಿದೆ.
ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು ನಾಥನ್ ಎಲ್ಲಿಸ್ ಬದಲಾಗಿ ಸ್ಪಿನ್ನರ್ ತನ್ವೀರ್ ಸಂಘಾರನ್ನು ಕಣಕ್ಕಿಳಿಸಿದ್ದು, ಮ್ಯಾಥ್ಯೂ ಶಾರ್ಟ್ ಬದಲಾಗಿ ಕೂಪರ್ ಕಾನೋಲಿಗೆ ಅವಕಾಶ ಸಿಕ್ಕಿದೆ.
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಆಸ್ಟ್ರೇಲಿಯಾ: ಕೂಪರ್ ಕಾನೊಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘ.












Click it and Unblock the Notifications