IPL 2025: ನಾಯಕತ್ವ ಬೇಡವೆಂದ ಕನ್ನಡಿಗ: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ನಾಯಕ

ಐಪಿಎಲ್ 2025ರ ಆವೃತ್ತಿಯ ಆರಂಭಕ್ಕೆ ಇನ್ನು ಕೆಲವೇ ದಿನಗಳಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ನಾಯಕನ ನೇಮಕ ಮಾಡಿದೆ. ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವದ ಆಫರ್ ಕೊಟ್ಟಿದ್ದರೂ, ಅವರು ನಾಯಕತ್ವದ ಹೊರೆ ಬೇಡ, ಬ್ಯಾಟಿಂಗ್ ಕಡೆ ಗಮನ ಕೊಡುತ್ತೇನೆ ಎಂದು ನಾಯಕತ್ವ ನಿರಾಕರಿಸಿದ್ದರು. ಈ ಬೆನ್ನಲ್ಲೇ ಆಲ್‌ರೌಂಡರ್ ಗೆ ನಾಯಕತ್ವದ ಹೊಣೆ ನೀಡಲಾಗಿದೆ.

ಆಲ್‌ರೌಂಡರ್ ಅಕ್ಷರ್ ಪಟೇಲ್‌ ಈ ಬಾರಿ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಬಾರಿ ಐಪಿಎಲ್‌ನಲ್ಲಿ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು, ಆದರೆ ಮೆಗಾ ಹರಾಜಿಗೆ ಮುನ್ನ ಅವರು ಡೆಲ್ಲಿ ಕ್ಯಾಪಿಟಲ್ಸ್ ತೊರೆದು ಹರಾಜಿಗೆ ಹೆಸರು ನೊಂದಾಯಿಸಿಕೊಂಡಿದ್ದರು.

Axar patel appointed delhi capitals captain ipl 2025

ಐಪಿಎಲ್ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂಪಾಯಿಗೆ ರಿಷಬ್‌ ಪಂತ್‌ರನ್ನು ಖರೀದಿ ಮಾಡಿತ್ತು. ಎಲ್‌ಎಸ್‌ಜಿ ನಾಯಕರಾಗಿದ್ದ ಕೆಎಲ್ ರಾಹುಲ್‌ರನ್ನು ಡೆಲ್ಲಿ ಕ್ಯಾಪಿಟಲ್ಸ್ 14 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೆಎಲ್ ರಾಹುಲ್‌ ನಾಯಕರಾಗುತ್ತಾರೆ ಎನ್ನಲಾಗಿತ್ತು, ಆದರೆ ಬ್ಯಾಟಿಂಗ್‌ ಮೇಲೆ ಗಮನಹರಿಸಲು ನಾಯಕತ್ವ ನಿರಾಕರಿಸಿದ್ದರು.

ಇದೀಗ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ನಾಯಕತ್ವ ನೀಡಲಾಗಿದೆ. ಭಾರತ ತಂಡದಲ್ಲಿ ಪ್ರಮುಖ ಆಲ್‌ರೌಂಡರ್ ಆಗಿ ಸ್ಥಾನ ಭದ್ರಪಡಿಸಿಕೊಂಡಿರುವ ಅಕ್ಷರ್ ಪಟೇಲ್‌ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಈವರೆಗೂ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ ಮೊದಲ ಬಾರಿ ಚಾಂಪಿಯನ್ ಆಗಲು ಬಲಿಷ್ಠ ತಂಡವನ್ನು ಕಟ್ಟಿದ್ದಾರೆ. ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಫಾಫ್ ಡುಪ್ಲೆಸಿಸ್‌ರಂತಹ ಅನುಭವಿ ಆಟಗಾರರು ತಂಡದಲ್ಲಿದ್ದಾರೆ.

2025ರ ಐಪಿಎಲ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ

ಅಕ್ಷರ್ ಪಟೇಲ್ (ನಾಯಕ), ಕೆಎಲ್ ರಾಹುಲ್, ಮಿಚೆಲ್ ಸ್ಟಾರ್ಕ್, ಮುಕೇಶ್ ಕುಮಾರ್, ಟಿ.ನಟರಾಜನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಸಮೀರ್ ರಿಜ್ವಿ, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಮ ವಿಜಯಯ್, ಮಾಧವ್ ತಿವಾರಿ, ಕರುಣ್ ನಾಯರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+