SMAT 2024: 20 ಓವರ್, 37 ಸಿಕ್ಸ್, 349 ರನ್; ಆರ್‌ಸಿಬಿ ಆಟಗಾರನ ಸಾರಥ್ಯದಲ್ಲಿ ವಿಶ್ವದಾಖಲೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಬರೋಡಾ ತಂಡ ಹೊಸ ವಿಶ್ವದಾಖಲೆ ಬರೆದಿದೆ. ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ 20 ಓವರ್ ಗಳಲ್ಲಿ ಬರೋಬ್ಬರಿ 349 ರನ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ಮೊತ್ತ ಕಲೆಹಾಕಿದ ಸಾಧನೆ ಮಾಡಿದೆ. ಅಕ್ಟೋಬರ್ ತಿಂಗಳಿನಲ್ಲಿ ನೈರೋಬಿಯಲ್ಲಿ ಗ್ಯಾಂಬಿಯಾ ವಿರುದ್ಧ ಜಿಂಬಾಬ್ವೆ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್‌ ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು, ಬರೋಡಾ ಇದೀಗ ಜಿಂಬಾಬ್ಬೆ ದಾಖಲೆಯನ್ನು ಮುರಿದು ಅಧಿಕ ಮೊತ್ತ ಗಳಿಸಿದ ತಂಡ ಎನಿಸಿಕೊಂಡಿದೆ.

ಇಂದೋರ್ ನ ಎಮರೆಲ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಬರೋಡಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 5.1 ಓವರ್ ಗಳಲ್ಲಿ ಮೊದಲ ವಿಕೆಟ್‌ಗೆ 92 ರನ್ ಗಳಿಸುವ ಮೂಲಕ ಸ್ಪೋಟಕ ಆರಂಭ ಪಡೆದುಕೊಂಡಿತು. ಶಶ್ವತ್ ರಾವತ್ 16 ಎಸೆತಗಳಲ್ಲಿ 43 ರನ್ ಗಳಿಸಿದರು. ಅಭಿಮನ್ಯು ಸಿಂಗ್‌ 17 ಎಸೆತಗಳಲ್ಲಿ 4 ಬೌಂಡರಿ 5 ಸಿಕ್ಸರ್ ಸಹಿತ 53 ರನ್ ಗಳಿಸಿದರು.

baroda highest t20 total record 349 for 5 37 sixes rcb krunal pandya

ಅಬ್ಬರಿಸಿದ ಭಾನು ಪನಿಯಾ

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾನು ಪನಿಯಾ ಅಬ್ಬರಕ್ಕೆ ಸಿಕ್ಕಿಂ ನಲುಗಿಹೋಯಿತು. 51 ಎಸೆತಗಳಲ್ಲಿ 5 ಬೌಂಡರಿ 15 ಭರ್ಜರಿ ಸಿಕ್ಸರ್ ಸಹಿತ 262.75 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 134 ರನ್ ಗಳಿಸಿ ಮಿಂಚಿದರು. ಶಿವಾಲಿಕ್ ಶರ್ಮಾ 17 ಎಸೆತಗಳಲ್ಲಿ 3 ಬೌಂಡರಿ 6 ಸಿಕ್ಸರ್ ಸಹಿತ 55 ರನ್ ಗಳಿಸಿದರು. ವಿ ಸೋಲಂಕಿ 16 ಎಸೆತಗಳಲ್ಲಿ 2 ಬೌಂಡರಿ 6 ಸಿಕ್ಸರ್ ಸಹಿತ 50 ರನ್ ಗಳಿಸಿ ಮಿಂಚಿದರು. ಅಂತಿಮವಾಗಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 349 ರನ್ ಗಳಿಸಿತು.

ಒಂದೇ ಇನ್ನಿಂಗ್ಸ್‌ನಲ್ಲಿ 37 ಸಿಕ್ಸರ್

ಬರೋಡಾ ಬ್ಯಾಟಿಂಗ್ ಅಬ್ಬರಕ್ಕೆ ಹಲವು ದಾಖಲೆಗಳು ನಿರ್ಮಾಣವಾಗಿವೆ. ಟಿ20 ಇನ್ನಿಂಗ್ಸ್‌ನಲ್ಲಿ 37 ಸಿಕ್ಸರ್ ದಾಖಲಾಗಿದ್ದು ಅತಿ ಹೆಚ್ಚು ಸಿಕ್ಸರ್ ದಾಖಲಾದ ಇನ್ನಿಂಗ್ಸ್ ಎನ್ನುವ ದಾಖಲೆ ಬರೆದಿದೆ.

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್ ಸಿಬಿ ತಂಡದ ಪಾಲಾಗಿರುವ ಕೃನಾಲ್ ಪಾಂಡ್ಯ ಬರೋಡಾ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಬೌಲಿಂಗ್‌ನಲ್ಲಿ ಮಿಂಚಿದ ಅವರು 4 ಓವರ್ ಗಳಲ್ಲಿ 8 ರನ್ ನೀಡಿ ಒಂದು ವಿಕೆಟ್ ಪಡೆದರು. ಸಿಕ್ಕಿಂ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 86 ರನ್ ಗಳಿಸುವ ಮೂಲಕ 263 ರನ್‌ಗಳ ಹೀನಾಯ ಸೋಲು ಕಂಡಿತು. ಈ ಗೆಲುವಿನೊಂದಿಗೆ ಬರೋಡಾ ಬಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು ಕ್ವಾರ್ಟರ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+