• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಿವೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಟಿ20 ತಂಡಕ್ಕೆ ಹಾರ್ದಿಕ್ ನಾಯಕ, ಮಲಿಕ್‌ಗೆ ಅವಕಾಶ

|
Google Oneindia Kannada News

ಮುಂಬೈ, ಅಕ್ಟೋಬರ್ 31:ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್‌ ಮುಗಿಯುತ್ತಿದ್ದಂತೆ ಭಾರತ ತಂಡ ನ್ಯೂಜಿಲ್ಯಾಂಡ್‌ ಪ್ರವಾಸ ಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಟಿ20 ತಂಡವನ್ನು ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಹಾಗೂ ಏಕದಿನ ತಂಡವನ್ನು ಶಿಖರ್ ಧವನ್‌ ಮುನ್ನಡೆಸಲಿದ್ದಾರೆ.

ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್‌ ಕೊಹ್ಲಿ ಕಿವೀಸ್‌ ಪ್ರವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಆದರೆ ಈ ಮೂವರು ಸ್ಟಾರ್‌ಗಳು ಬಾಂಗ್ಲಾದೇಶ ಪ್ರವಾಸಕ್ಕೆ ಟೀಮ್‌ ಇಂಡಿಯಾಗೆ ಮರಳಲಿದ್ದಾರೆ.

T20 world cup:6 ವರ್ಷಗಳ ನಂತರ ಕಮ್‌ಬ್ಯಾಕ್, ಸತತ 2 ಸತಕ ಸಿಡಿಸಿದ ದಾಖಲೆ ಬರೆದ ರೋಸೋT20 world cup:6 ವರ್ಷಗಳ ನಂತರ ಕಮ್‌ಬ್ಯಾಕ್, ಸತತ 2 ಸತಕ ಸಿಡಿಸಿದ ದಾಖಲೆ ಬರೆದ ರೋಸೋ

ಭಾರತದ ಭರವಸೆಯ ವೇಗಿ ಉಮ್ರಾನ್ ಮಲಿಕ್ ಏಕದಿನ ಮತ್ತು ಟಿ20 ಎರಡೂ ತಂಡಗಳಲ್ಲೂ ಅವಕಾಶ ಪಡೆದಿದ್ದಾರೆ. ಜೊತೆಗೆ ಡೊಮೆಸ್ಟಿಕ್‌ ಕ್ರಿಕೆಟ್‌ನ ಸ್ಟಾರ್ ಕುಲದೀಪ್ ಸೇನ್, ಯಶ್ ದಯಾಳ್ ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ.

ಗಮನಿಸಬೇಕಾದ ಅಂಶವೆಂದರೆ ಗಾಯದಿಂದ ವಿಶ್ವಕಪ್ ಆಡುವ ಅವಕಾಶ ಕಳೆದುಕೊಂಡಿದ್ದ ಆಲ್‌ರೌಂಡರ್ ರವೀಂದ್ರ ಜಡೇಜಾ ಬಾಂಗ್ಲಾದೇಶ ಪ್ರವಾಸದ ವೇಳೆ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ.

ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಟಿ20 ತಂಡ; ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ವಿಕೀ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೀ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಏಕದಿನ ತಂಡ; ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ/ವಿಕೀ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೀ), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್ , ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

BCCI Announces announces squads for NZ and Bangladesh tour, Hardik Lead for T20I, Dhawan for ODI

ಬಾಂಗ್ಲಾದೇಶ ಪ್ರವಾಸಕ್ಕೆ ಏಕದಿನ ತಂಡ; ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೀ), ಇಶಾನ್ ಕಿಶನ್ (ವಿಕೀ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್‌ ಸುಂದರ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್

ಬಾಂಗ್ಲಾದೇಶ ಪ್ರವಾಸಕ್ಕೆ ಟೆಸ್ಟ್ ತಂಡ; ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೀ), ಕೆಎಸ್ ಭರತ್ (ವಿಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

English summary
The All-India Senior Selection Committee has picked the squads for India’s upcoming series against New Zealand and Bangladesh. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X