Team India: ಶ್ರೇಯಸ್ ಅಯ್ಯರ್, ಇಶಾನ್ ಕಿಶನ್‌ಗೆ ಬಿಸಿಸಿಐ ಶಾಕ್! ಬಿಸಿಸಿಐ ಒಪ್ಪಂದ ಪಟ್ಟಿಯಲ್ಲಿ ಯಾರಿಗೆಲ್ಲಾ ಸ್ಥಾನ?
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 2023-24ರ ಋತುವಿನ (ಅಕ್ಟೋಬರ್ 1, 2023 ರಿಂದ ಸೆಪ್ಟೆಂಬರ್ 30, 2024 ರವರೆಗೆ) ಭಾರತ ತಂಡದ ವಾರ್ಷಿಕ ಆಟಗಾರರ ಒಪ್ಪಂದಗಳನ್ನು ಬುಧವಾರ ಪ್ರಕಟಿಸಿದೆ.
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಜೋಡಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಕೈಬಿಟ್ಟಿದ್ದು ಶಾಕ್ ನೀಡಿದೆ. "ಈ ಸುತ್ತಿನ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ" ಎಂದು ಬಿಸಿಸಿಐ ಹೇಳಿದೆ.

ಇವರಿಬ್ಬರನ್ನು ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಸಾಕಷ್ಟು ಊಹಾಪೋಹಗಳು ಹಬ್ಬಿದ್ದವು. ಇಶಾನ್ ಕಿಶನ್ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯದಲ್ಲಿ ವಿರಾಮ ತೆಗೆದುಕೊಂಡಿದ್ದರು. ಬಳಿಕ ರಣಜಿಯಲ್ಲಿ ಆಡುವಂತೆ ಕೇಳಿದ್ದರೂ ಅವರು ಆಡದ ಕಾರಣ ಈಗ ಬೆಲೆ ತೆತ್ತಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ರಣಜಿಯಲ್ಲಿ ಆಡದ ಕಾರಣ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಬಿಸಿಸಿಐ ಒಪ್ಪಂದ ಪಡೆದ ಆಟಗಾರರು
ಗ್ರೇಡ್ A+
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.
ಗ್ರೇಡ್ ಎ
ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.
ಗ್ರೇಡ್ ಬಿ
ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.
ಗ್ರೇಡ್ ಸಿ
ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.
ಆಯ್ಕೆ ಸಮಿತಿಯು ವೇಗದ ಬೌಲರ್ ಗಳಿಗೆ ಒಪ್ಪಂದಗಳನ್ನು ಶಿಫಾರಸು ಮಾಡಿದೆ. ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.












Click it and Unblock the Notifications