Team India Players Salary: ಬಿಸಿಸಿಐ ಒಪ್ಪಂದ; ಆಟಗಾರರ ಸಂಬಳ ಎಷ್ಟು ಕೋಟಿ ಗೊತ್ತಾ?

2024-25ರ ಸಾಲಿನ ಬಿಸಿಸಿಐ ಕೇಂದ್ರ ಒಪ್ಪಂದದ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ರಣಜಿ ಟ್ರೋಫಿಯಲ್ಲಿ ಆಡದೆ ಬಿಸಿಸಿಐ ಸೂಚನೆ ನಿರ್ಲಕ್ಷಿಸಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಬಿಸಿಸಿಐ ಒಪ್ಪಂದವನ್ನು ಕಳೆದುಕೊಂಡಿದ್ದಾರೆ.

"ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ" ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. ದೇಶೀಯ ಪಂದ್ಯಾವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಬಿಸಿಸಿಐ ಆದ್ಯತೆ ನೀಡಿದೆ.

BCCI central contract: Team India Players Salary All you need to know

ಎಲ್ಲಾ ಕ್ರೀಡಾಪಟುಗಳು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಭಾಗವಹಿಸಲು ಆದ್ಯತೆ ನೀಡುವಂತೆ ಬಿಸಿಸಿಐ ಶಿಫಾರಸು ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಈ ವರ್ಷ ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಗ್ರೇಡ್ ಎ ಗೆ ಬಡ್ತಿ ಪಡೆದಿದ್ದಾರೆ. ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್ ಅವರನ್ನು ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ

ಆಟಗಾರರ ಸಂಬಳ ಎಷ್ಟು?

ಬಿಸಿಸಿಐ ಆಟಗಾರರನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಈ ಬಾರಿ ಒಪ್ಪಂದಕ್ಕೆ ಆಟಗಾರರ ಸಂಭಾವನೆಯನ್ನು ಬಿಸಿಸಿಐ ಬಹಿರಂಗಪಡಿಸಿಲ್ಲ. ಆದರೆ ಕಳೆದ ವರ್ಷದ ಒಪ್ಪಂದದ ಪ್ರಕಾರ ಎ ಪ್ಲಸ್ ವಿಭಾಗದ ಆಟಗಾರರು ವಾರ್ಷಿಕ ₹ 7 ಕೋಟಿ ಸಂಭಾವನೆ ಪಡೆಯಲಿದ್ದಾರೆ.

ಎ ಶ್ರೇಣಿ ಆಟಗಾರರು ವಾರ್ಷಿಕ ₹5 ಕೋಟಿ ಪಡೆದುಕೊಂಡಿದ್ದರು. ಬಿ ಶ್ರೇಣಿಯ ಆಟಗಾರರು ವಾರ್ಷಿಕ ₹3 ಕೋಟಿ, ಸಿ ಶ್ರೇಣಿಯ ಆಟಗಾರರು ವಾರ್ಷಿಕ ₹1 ಕೋಟಿ ರೂ. ಪಡೆದುಕೊಂಡಿದ್ದರು. ಈ ವರ್ಷ ಇದು ಮತ್ತಷ್ಟು ಹೆಚ್ಚಿರುವ ಸಾಧ್ಯತೆ ಇದೆ.

ಒಪ್ಪಂದ ಪಡೆದ ಆಟಗಾರರ ಪಟ್ಟಿ

ಗ್ರೇಡ್ ಎ+(₹7 ಕೋಟಿ) : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

ಗ್ರೇಡ್ ಎ (₹5 ಕೋಟಿ): ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ.

ಗ್ರೇಡ್ ಬಿ (₹ 3 ಕೋಟಿ): ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್.

ಸಿ ಗ್ರೇಡ್ (₹1 ಕೋಟಿ): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ ಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ರಜತ್ ಪಾಟಿದಾರ್.

ಭಾರತವನ್ನು ಪ್ರತಿನಿಧಿಸಿದರೆ ಆಟಗಾರನು ಕೇಂದ್ರ ಒಪ್ಪಂದವನ್ನು ಪಡೆಯುತ್ತಾನೆಯೇ?

ನಿಗದಿತ ಅವಧಿಯೊಳಗೆ ಕನಿಷ್ಠ 3 ಟೆಸ್ಟ್‌ಗಳು ಅಥವಾ 8 ಏಕದಿನ ಪಂದ್ಯಗಳು ಅಥವಾ 10 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡುವ ಮಾನದಂಡವನ್ನು ಪೂರೈಸುವ ಕ್ರಿಕೆಟಿಗರನ್ನು ಸ್ವಯಂಚಾಲಿತವಾಗಿ ಅನುಪಾತದ ಆಧಾರದ ಮೇಲೆ ಗ್ರೇಡ್ ಸಿಗೆ ಸೇರಿಸಲಾಗುತ್ತದೆ.

ಉದಾಹರಣೆಗೆ, ಧ್ರುವ್ ಜುರೆಲ್ ಮತ್ತು ಸರ್ಫರಾಜ್ ಖಾನ್ ಅವರು ಇಲ್ಲಿಯವರೆಗೆ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಅವರು ಧರ್ಮಶಾಲಾ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದರೆ ಗ್ರೇಡ್ ಸಿ ಗೆ ಸೇರ್ಪಡೆಯಾಗುತ್ತಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಆಯ್ಕೆ ಸಮಿತಿಯು ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರಿಗೆ ವೇಗದ ಬೌಲಿಂಗ್ ಗುತ್ತಿಗೆಯನ್ನು ಶಿಫಾರಸು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+