Team India: ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ಕೊಟ್ಟ ಬಿಸಿಸಿಐ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆಯೋಜನೆ ವಿಚಾರದಲ್ಲಿ ಹಠ ಮಾಡಿ ಗೆದ್ದಿರುವ ಬಿಸಿಸಿಐ, ಭಾರತ ಆಡುವ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡುವಂತೆ ಮಾಡಿದೆ. ಪಂದ್ಯಾವಳಿಗೆ ಇನ್ನು ಒಂದು ತಿಂಗಳಿಗಿಂತ ಕಡಿಮೆ ಸಮಯವಿರುವಾಗಲೇ ಬಿಸಿಸಿಐ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಮತ್ತೊಂದು ಶಾಕ್ ಕೊಟ್ಟಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಧರಿಸುವ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು ಮುದ್ರಿಸಿರುವುದಕ್ಕೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೂ ಪಾಕಿಸ್ತಾನವೇ ಅತಿಥೇಯ ರಾಷ್ಟ್ರವಾಗಿದೆ. ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಲ್ಲ ಎಂದು ಬಿಸಿಸಿಐ ಹೇಳಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜಿಸಲು ಒಪ್ಪಿಕೊಂಡಿತ್ತು, ಆದರೆ ಈಗ ಜೆರ್ಸಿಯ ಹೆಸರು ಹೊಸ ವಿವಾದಕ್ಕೆ ಕಾರಣವಾಗಿದೆ.

ಕಿಡಿಕಾರಿದ ಪಿಸಿಬಿ ಅಧಿಕಾರಿಗಳು
ಟೀಂ ಇಂಡಿಯಾ ತಾನು ಧರಿಸುವ ಜೆರ್ಸಿಗಳಲ್ಲಿ ಪಾಕಿಸ್ತಾನದ ಹೆಸರನ್ನು ಮುದ್ರಿಸಲು ನಿರಾಕರಿಸುವ ಮೂಲಕ ಬಿಸಿಸಿಐ ಕ್ರಿಕೆಟ್‌ನಲ್ಲೂ ರಾಜಕೀಯ ಮಾಡಲು ಹೊರಟಿದೆ ಎಂದು ಪಿಸಿಬಿ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಮುನ್ನ ನಡೆಯುವ ತಂಡಗಳ ನಾಯಕರ ಫೋಟೊಶೂಟ್‌ಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳಿಸಲು ಬಿಸಿಸಿಐ ನಿರಾಕರಿಸಿದೆ ಎಂದು ವರದಿಯಾಗಿದೆ.
ಬಿಸಿಸಿಐ ಕ್ರಿಕೆಟ್‌ನಲ್ಲಿ ರಾಜಕೀಯವನ್ನು ಮಾಡುತ್ತಿದೆ. ಇದು ಕ್ರಿಕೆಟ್‌ಗೆ ಒಳ್ಳೆಯದಲ್ಲ, ಭಾರತ ತಂಡ ಮೊದಲು ಪಾಕಿಸ್ತಾನಕ್ಕೆ ಬರಲು ನಿರಾಕರಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ತಂಡದ ನಾಯಕನನ್ನು ಕೂಡ ಕಳಿಸಲ್ಲ ಎಂದಿದ್ದಾರೆ. ಈಗ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನದ ಹೆಸರನ್ನು ಜೆರ್ಸಿಯಲ್ಲಿ ಮುದ್ರಿಸುವುದಿಲ್ಲ ಎಂದು ಹೇಳಿದೆ. ಐಸಿಸಿ ಇದಕ್ಕೆ ಅವಕಾಶ ನೀಡುವುದಿಲ್ಲ ಈ ವಿಚಾರದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತದೆ ಎಂದು ನಾವು ಆಶಿಸಿದ್ದೇವೆ ಎಂದು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಾಗಿ ಭಾರತ ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿದ್ದು, ಬಿಸಿಸಿಐ ನಿಲುವನ್ನು ಒಪ್ಪಿಕೊಂಡಿದೆ. ಆದರೆ ಭವಿಷ್ಯದಲ್ಲಿ ಭಾರತದಲ್ಲಿ ಆಯೋಜಿಸುವ ಐಸಿಸಿ ಪಂದ್ಯಾವಳಿಗಳಲ್ಲಿ ಪಾಕಿಸ್ತಾನ ಕೂಡ ಭಾರತಕ್ಕೆ ತಂಡವನ್ನು ಕಳಿಸಲ್ಲ ಎಂದು ಹೇಳಿದ್ದು, ತಟಸ್ಥ ಸ್ಥಳದಲ್ಲಿ ಪಂದ್ಯಗಳನ್ನು ನಡೆಸುವಂತೆ ಬೇಡಿಕೆ ಇಟ್ಟಿದೆ.
ಫೆಬ್ರವರಿ 18 ರಿಂದ ಪಂದ್ಯಾವಳಿ
ಫೆಬ್ರವರಿ 18ರಿಂದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದ್ದು ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಭಾರತ ಈಗಾಗಲೇ ಪಂದ್ಯಾವಳಿಗೆ ತಂಡವನ್ನು ಘೋಷಣೆ ಮಾಡಿದೆ.












Click it and Unblock the Notifications