Duleep Trophy: ದುಲೀಪ್ ಟ್ರೋಫಿ ತಂಡಗಳಲ್ಲಿ ಬದಲಾವಣೆ; ಭಾರತ ಎ ತಂಡಕ್ಕೆ ಮಯಾಂಕ್ ಅಗರ್ವಾಲ್ ನಾಯಕ
ದುಲೀಪ್ ಟ್ರೋಫಿ ಪಂದ್ಯಾವಳಿಯ ಎರಡನೇ ಸುತ್ತಿನ ಪಂದ್ಯಗಳಿಗೆ ಪರಿಷ್ಕೃತ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಲು ಹಲವು ಆಟಗಾರರು ಭಾರತ ತಂಡವನ್ನು ಸೇರಿಕೊಳ್ಳುವ ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡುವ ತಂಡಗಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಸೆಪ್ಟೆಂಬರ್ 12ರಿಂದ ದುಲೀಪ್ ಟ್ರೋಫಿಯ ಎರಡನೇ ಸುತ್ತಿನ ಪಂದ್ಯಗಳು ಆರಂಭವಾಗಲಿದೆ.
ಬಾಂಗ್ಲಾದೇಶ ವಿರುದ್ಧದ ಸರಣಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದುಲೀಪ್ ಟ್ರೋಫಿಯಲ್ಲಿ ಆಡುತ್ತಿರುವ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್, ಧ್ರುವ್ ಜುರೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಆಕಾಶ್ ದೀಪ್ ಮತ್ತು ಯಶ್ ದಯಾಳ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು ಅಭ್ಯಾಸ ಆರಂಭಿಸಲು ಚೆನ್ನೈಗೆ ತೆರಳಿದ್ದಾರೆ.

ಮೊದಲ ಪಂದ್ಯದಲ್ಲಿ ಭಾರತ ಎ ತಂಡಕ್ಕೆ ಶುಭಮನ್ ಗಿಲ್ ನಾಯಕತ್ವ ವಹಿಸಿಕೊಂಡಿದ್ದರು, ಅವರು ಈಗ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ಕಾರಣ ಮುಂದಿನ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಭಾರತ ಎ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.
ಭಾರತ ಸಿ ತಂಡದಲ್ಲಿ ಇರುವ ಯಾವ ಆಟಗಾರರು ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆಯಾಗದ ಕಾರಣ, ತಂಡದಲ್ಲಿ ಯಾವ ಬದಲಾವಣೆ ಮಾಡಿಲ್ಲ ಉಳಿದಂತೆ ಮೂರು ತಂಡಗಳಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ.
ದುಲೀಪ್ ಟ್ರೋಫಿ ಪರಿಷ್ಕೃತ ತಂಡಗಳು
ಭಾರತ ಎ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ರಿಯಾನ್ ಪರಾಗ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ಕುಮಾರ್ ಕುಶಾಗ್ರಾ, ಶಾಶ್ವತ್ ರಾವತ್, ಪ್ರಥಮ್ ಸಿಂಗ್, ಅಕ್ಷಯ್ ವಾಡ್ಕರ್, ಎಸ್‌ಕೆ ರಶೀದ್, ಶಮ್ಸ್ ಮುಲಾನಿ, ಆಕಿಬ್ ಖಾನ್.
ಭಾರತ ಬಿ ತಂಡ: ಅಭಿಮನ್ಯು ಈಶ್ವರನ್ (ನಾಯಕ), ಸರ್ಫರಾಜ್ ಖಾನ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೀಸನ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ರಿಂಕು ಸಿಂಗ್ , ಹಿಮಾಂಶು ಮಂತ್ರಿ (ವಿಕೆಟ್ ಕೀಪರ್)
ಭಾರತ ಡಿ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ತ್ ಪಡಿಕ್ಕಲ್, ರಿಕಿ ಭುಯಿ, ಸರನ್ಶ್ ಜೈನ್, ಅರ್ಷ್‌ದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ಆಕಾಶ್ ಸೇನ್ ಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್), ಸೌರಭ್ ಕುಮಾರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿಶಾಂತ್ ಸಿಂಧು, ವಿದ್ವತ್ ಕಾವೇರಪ್ಪ.












Click it and Unblock the Notifications