ಕ್ರಿಕೆಟ್ ಆಟಗಾರರ ನಿಜವಾದ ವಯಸ್ಸು ಪತ್ತೆಗೆ ಬಿಸಿಸಿಐ ಮಹತ್ವದ ನಿರ್ಧಾರ
BCCI: ಕ್ರಿಕೆಟ್ ಆಟಗಾರರು ಹುಟ್ಟಿದ ದಿನಾಂಕವನ್ನು ಮುಂದಕ್ಕೆ ಹಾಕಿಸಿ ಕಡಿಮೆ ವಯಸ್ಸು ತೋರಿಸುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಈ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಮಹತ್ವದ ನಿರ್ಧಾರವೊಂದರಲ್ಲಿ, ವಯೋವರ್ಗ ಕ್ರಿಕೆಟ್ ಟೂರ್ನಿಗಳಲ್ಲಿ ಆಟಗಾರರ ವಯಸ್ಸು ಪತ್ತೆ ಹಚ್ಚಲು ಹೆಚ್ಚುವರಿಯಾಗಿ ಮೂಳೆ ಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಜೂನಿಯರ್ ಮಟ್ಟದಲ್ಲಿ ಹೊಸದಾಗಿ ಬೆಳೆಯುತ್ತಿರುವ ಕ್ರಿಕೆಟಿಗರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳಲು ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಈಗಿರುವ ನಿಯಮದ ಪ್ರಕಾರ, ವಯೋವರ್ಗ ಹಂತದಲ್ಲಿ ವಯಸ್ಸು ನಿರ್ಧಾರಕ್ಕೆ ಆಟಗಾರ/ಆಟಗಾರ್ತಿಗೆ ಟಿಡಬ್ಲ್ಯು3 ಪರೀಕ್ಷೆ ನಡೆಸಲಾಗುತ್ತಿತ್ತು. ಮುಂದಿನ ವರ್ಷ ಅದೇ ವಯೋವರ್ಗದಲ್ಲಿ ಆಟಲು +1 ವಯಸ್ಸನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ನಿಯಮಗಳ ಪ್ರಕಾರ, ಮರು ವರ್ಷ ಮತ್ತೊಮ್ಮೆ ಮೂಳೆ ಪರೀಕ್ಷೆ ಮಾಡಿ, ಆಟಗಾರ ಅದೇ ವಯೋಮಿತಿಯಲ್ಲಿ ಆಡಲು ಅರ್ಹರೇ ಎಂದು ತಿಳಿದುಕೊಳ್ಳಲಾಗುತ್ತದೆ. ಆಟಗಾರರು ನಿಜವಾದ ವಯಸ್ಸು ತಿಳಿದುಕೊಳ್ಳಲು ಹೀಗೆ ಮಾಡಲಾಗುತ್ತಿದೆ ಎಂದು ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ.
ಹೊಸ ಮಾರ್ಗಸೂಚಿಗಳ ಬಿಡುಗಡೆಗೆ ನಿರ್ಧಾರ: ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಅಂದೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡರು. ಈ ಸಂಬಂಧ ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ, ಆರ್‌ಸಿಬಿ ಹಾಗೂ ಕೆಎಸ್‌ಸಿಎ ವಿರುದ್ಧರೂ ಎಫ್‌ಐಆರ್ ದಾಖಲಿಸಲಾಗಿದ್ದು, ವಿರಾಟ್ ಕೊಹ್ಲಿ ಮೇಲೂ ದೂರು ನೀಡಿದ್ದರು.
ಬಳಿಕ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆದೇಶ ಹೊರಡಿಸಿತ್ತು. ಈ ನಡುವೆಯೇ ಇದೀಗ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ನಿಯಂತ್ರಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮುಂದಿನ ದಿನಗಳಗಳಲ್ಲಿ ಈ ರೀತಿಯ ದುರಂತಗಳು ಸಂಭವಿದಂತೆ ಬಿಸಿಸಿಐ ಹೊಸ ನೀತಿಯನ್ನು ರೂಪಿಸುವುದಾಗಿ ಘೋಷಣೆ ಮಾಡಿದೆ. ಇದಕ್ಕಾಗಿ, ಮಂಡಳಿಯು ಹೊಸ ಸಮಿತಿಯನ್ನು ರಚಿಸಿದ್ದು, ಸಂಭ್ರಮಾಚರಣೆಯ ಮೆರವಣಿಗೆಯ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದೆ. ಶನಿವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಹೊಸ ಮಾರ್ಗಸೂಚಿಯನ್ನು ರೂಪಿಸುವ ಜವಾಬ್ದಾರಿಯನ್ನು 3 ಸದಸ್ಯರ ಸಮಿತಿಗೆ ವಹಿಸಲಾಗಿದೆ.
ಶನಿವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇದರಲ್ಲಿ ಪ್ರಮುಖ ನಿರ್ಧಾರ ಎಂದರೆ ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿದೆ. ಸಭೆಯ ಬಳಿಕ ಬಿಸಿಸಿಐ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಮೊದಲನೆಯದಾಗಿ ಬೆಂಗಳೂರು ಕಾಲ್ತುಳಿತ ಮತ್ತು ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದೆ. ಜೊತೆಗೆ ಬೆಂಗಳೂರು ಕಾಲ್ತುಳಿತದಂತಹ ದುರಂತಗಳು ಮುಂದಿನ ದಿನಗಳಲ್ಲಿ ನಡೆಯದಂತೆ ನೋಡಿಕೊಳ್ಳಲು ಹಿರಿಯ ಅಧಿಕಾರಿಗಳ ಸಮಿತಿಯನ್ನ ರಚಿಸಿದೆ.












Click it and Unblock the Notifications