Get Updates
Get notified of breaking news, exclusive insights, and must-see stories!

ಭಾರತದ ವಿರುದ್ಧದ ಟಿ20 ಸರಣಿಗೆ ಈ ಸ್ಟಾರ್ ಆಟಗಾರ ಅಲಭ್ಯ!

ಲಂಡನ್, ಜುಲೈ 1: ಪ್ರವಾಸಿ ಟೀಂ ಇಂಡಿಯಾ ವಿರುದ್ಧ ಮೂರು ಪಂದ್ಯಗಳ ಟಿ20ಐ ಸರಣಿಯಿಂದ ಇಂಗ್ಲೆಂಡಿನ ಸ್ಟಾರ್ ಆಟಗಾರ ಹೊರ ನಡೆದಿದ್ದಾರೆ. ಆದರೆ, ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಲಭ್ಯರಾಗಿರುವುದಾಗಿ ಹೇಳಿದ್ದಾರೆ.

ಸ್ಫೋಟಕ ವಿಕೆಟ್ ಕೀಪರ್ ಬ್ಯಾಟರ್‌ ಜಾಸ್ ಬಟ್ಲರ್‌ ಇಂಗ್ಲೆಂಡ್‌ ಸೀಮಿತ ಓವರ್‌ಗಳ ನಾಯಕರಾಗಿ ಆಯ್ಕೆಯಾದ ಬಳಿಕ ಈ ಬೆಳವಣಿಗೆ ನಡೆದಿದೆ. ಅದ್ಭುತ ಫಾರ್ಮ್‌ನಲ್ಲಿರುವ ಬಟ್ಲರ್‌ ಬ್ಯಾಟಿಂಗ್, ವಿಕೆಟ್‌ ಕೀಪಿಂಗ್ ಜವಾಬ್ದಾರಿಯಗಳ ಜೊತೆಗೆ ಇದೀಗ ನಾಯಕತ್ವದ ಹೊರೆಯನ್ನು ಹೊರಿಸಲಾಗಿದೆ

ಬೆನ್ ಸ್ಟೋಕ್ ಸದ್ಯ ಇಂದಿನಿಂದ ಆರಂಭವಾದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕರಾಗಿದ್ದಾರೆ. ಆದರೆ, ಜುಲೈ 7ರಿಂದ ಆರಂಭವಾಗುವ ಟಿ20ಐ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

Ben Stokes to skip Englands T20 series vs India, will return for ODIs, check full squads

ಟಿ20ಐ ಸರಣಿಗೆ ಭಾರತ ತಂಡ:
ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮ ಅಲಭ್ಯರಾಗಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿರುವ ರೋಹಿತ್ ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ20ಐ ಸರಣಿಗೂ ಅಲಭ್ಯರಾಗಬಹುದು ಎಂಬ ಸುದ್ದಿಯೂ ಹಬ್ಬಿತ್ತು. ಮೂರು ಪಂದ್ಯಗಳ ಟಿ20ಐ ಸರಣಿಗೆ ರೋಹಿತ್ ಶರ್ಮರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಜೂನ್ 30ರಂದು ಸಂಜೆ ತಂಡವನ್ನು ಪ್ರಕಟಿಸಿದೆ.

ಈ ನಡುವೆ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ ಪ್ರೀತ್ ಬೂಮ್ರಾ ಮೊದಲ ಟಿ20ಐ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಉಳಿದೆರಡು ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಇತ್ತೀಚೆಗೆ ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಗೆದ್ದ ಸಂಭ್ರಮದಲ್ಲಿದೆ.

ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಅವರು ಮೆಕ್ಕಾಗೆ ಹಜ್ ಯಾತ್ರೆ ಮಾಡಲು ಇಸಿಬಿ ಅನುಮತಿ ನೀಡಿದ ನಂತರ ಏಕದಿನ ಸರಣಿಯಲ್ಲಿ ಭಾಗಿಯಾಗುವುದಿಲ್ಲ.

1ನೇ ಟಿ20ಐಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

2ನೇ ಮತ್ತು 3ನೇ ಟಿ20ಐಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (WK), ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ಮೋಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್ ಸ್ಟೋನ್, ಡೇವಿಡ್ ಮಲಾನ್, ಟೈಮಲ್ ಮಿಲ್ಸ್, ಮ್ಯಾಥ್ಯೂ ಪಾರ್ಕಿನ್ಸನ್, ಜಾಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟಾಪ್ಲಿ, ಡೇವಿಡ್ ವಿಲೇ

ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಮೋಯಿನ್ ಅಲಿ, ಜೋನಾಥನ್ ಬೈರ್ಸ್ಟೋ, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ ಸ್ಟೋನ್, ಕ್ರೇಗ್ ಓವರ್ಟನ್, ಮ್ಯಾಥ್ಯೂ ಪಾರ್ಕಿಸನ್, ಜೋ ರೂಟ್, ಜಾಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಚ್ ಟಾಪ್ಲೆ, ಡೇವಿಡ್ ವೀಲೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+