IPL 2025 Final: ಆರ್‌ಸಿಬಿ ಫೈನಲ್‌ಗೆ ಪ್ರವೇಶಿಸುತ್ತಿದ್ದಂತೆ ಬೆಂಗಳೂರು-ಅಹಮದಬಾದ್ ಫ್ಲೈಟ್ ಟಿಕೆಟ್ ದರ ದುಪ್ಪಟ್ಟು
IPL 2025 Final Match RCB: ಐಪಿಎಲ್ 2025 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆದ್ದು ಫೈನಲ್ ಪ್ರವೇಶ ಮಾಡಿದೆ. ಫೈನಲ್ ಮ್ಯಾಚ್ ಅಹಮದಾಬಾದ್‌ನಲ್ಲಿ ಜೂನ್ 3ರಂದು ನಡೆಯಲಿದ್ದು, ಈ ಹಿನ್ನೆಲೆ ಬೆಂಗಳೂರಿನಿಂದ ಇಲ್ಲಿಗೆ ವಿಮಾನ ಟಿಕೆಟ್ ದರ ಎರಡು ಪಟ್ಟು ಹೆಚ್ಚಳ ಆಗಿದೆ. ಹಾಗಾದ್ರೆ ಎಷ್ಟು ಎನ್ನುವ ಅಂಕಿಅಂಶಗಳ ಸಹಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮೇ 29ರಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು ಹೀನಾವಾಗಿ ಸೋಲಿಸಿ ನೇರವಾಗಿ ಫೈನಲ್ ಪ್ರವೇಶಿಸಿದೆ. ಇನ್ನೂ ಪಂಜಾಬ್ ತಂಡಕ್ಕೆ ಮತ್ತೊಂದು ಅವಕಾಶ ಇದ್ದು, ಇಂದು (ಜೂನ್ 1) ಮುಂಬೈ ಇಂಡಿಯನ್ಸ್ ವಿರುದ್ಧ ಕ್ವಾಲಿಫೈಯರ್-2 ಪಂದ್ಯವನ್ನು ಆಡಲಿದೆ. ಇದರಲ್ಲಿ ಗೆದ್ದ ತಂಡವು ಆರ್‌ಸಿಬಿ ವಿರುದ್ಧ ಜೂನ್ 3ರಂದು ಫೈನಲ್ ಆಡಲಿದೆ.

ಈಗಾಗಲೇ ಮೇ 30ರಂದು ನಡೆದ ಎಲಿಮೆನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದ್ದು, ಇಂದು (ಜೂನ್ 1) ಕ್ವಾಲಿಫೈಯರ್-2 ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಇದರಲ್ಲಿ ಯಾವುದೇ ತಂಡ ಗೆದ್ದರೂ ಅದು ಆರ್‌ಸಿಬಿ ಜೊತೆ ಫೈನಲ್ ಆಡಲಿದ್ದು, ಸೋತ ಟೀಂ ನೇರವಾಗಿ ಟೂರ್ನಿಯಿಂದ ಹೊರನಡೆಯಲಿದೆ.
ವಿಮಾನ ಟಿಕೆಟ್ ದರ ದುಬಾರಿ: ಇಂದು ಆರ್‌ಸಿಬಿ ಜೊತೆ ಯಾವ ತಂಡ ಫೈನಲ್ ಆಡಲಿದೆ ಎಂದು ನಿರ್ಧಾರ ಆಗಲಿದೆ. ಫೈನಲ್ ಮ್ಯಾಚ್ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆಯಲಿದ್ದು, ಬೆಂಗಳೂರಿನಿಂದ ಇಲ್ಲಿಗೆ ಫ್ಲೈಟ್ ಟಿಕೆಟ್ ದರ ದುಪ್ಪಾಟ್ಟಾಗಿದೆ. ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಫೈನಲ್ ಪ್ರವೇಶ ಪಡೆಯುತ್ತಿದ್ದಂತೆ ಬೆಂಗಳೂರು-ಅಹಮದಾಬಾದ್ ಫ್ಲೈಟ್ ಟಿಕೆಟ್ ದರ ಹೆಚ್ಚಳವಾಗಿದೆ. 4,000-10,000 ರೂಪಾಯಿಗೆ ಹೆಚ್ಚಳವಾಗಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ ಇಡುತ್ತಿದ್ದಂತೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲೇ ತೇಲಾಡಿದ್ದರು. ಫೈನಲ್ ಪಂದ್ಯ ಗುಜರಾತ್‌ನ ಅಹಮದಬಾದ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆ ಅಹಮದಬಾದ್ ಕಡೆಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆ ಬೆಂಗಳೂರು-ಅಹಮದಬಾದ್ ವಿಮಾನ ಟಿಕೆಟ್ ದರವನ್ನು 10,000 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿಯು ಪಂಜಾಬ್ ಕಿಂಗ್ಸ್ ವಿರುದ್ಧ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೇ 29ರಂದು ಗೆದ್ದು ಬೀಗಿತು. ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್ 14.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 101 ರನ್‌ಗಳನ್ನು ಕಲೆಹಾಕುವ ಮೂಲಕ ಬೆಂಗಳೂರು ತಂಡಕ್ಕೆ 102 ರನ್‌ಗಳ ಸಾಧಾರಣ ಗುರಿ ನೀಡಿತು.
ಈ ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿ ಕೇವಲ 10 ಓವರ್‌ಗೆ 2 ವಿಕೆಟ್ ಕಳೆದುಕೊಂಡು 106 ರನ್‌ಗಳನ್ನು ಕಲೆಹಾಕಿ ಭರ್ಜರಿ ಗೆಲುವು ಸಾಧಿಸಿತು. ಆರ್‌ಸಿಬಿ ಪರ ಬೌಲಿಂಗ್ ಮಾಡಿದ ಜೋಶ್ ಹೇಜಲ್‌ವುಡ್, ಸುಯೇಶ್ ಶರ್ಮಾ ತಲಾ 3 ವಿಕೆಟ್ ಪಡೆದುಕೊಂಡರೆ, ಯಶ್ ದಯಾಲ್ 2, ಭುವನೇಶ್ವರ್ ಕುಮಾರ್ ಹಾಗೂ ರೊಮಾರಿಯೋ ಶೆಫರ್ಡ್ ತಲಾ 1 ವಿಕೆಟ್ ಪಡೆದು ಪಂಜಾಬ್ ಕಿಂಗ್ಸ್ ತಂಡವನ್ನು 101 ರನ್‌ಗಳಿಗೆ ಕಟ್ಟಿಹಾಕಿ ಮಿಂಚಿದರು.
ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿ ಅರ್ಧಶತಕದೊಂದಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಕೇವಲ 27 ಬಾಲ್‌ಗಳಿಗೆ 6 ಬೌಂಡರಿ, 3 ಸಿಕ್ಸರ್ ಸಹಿತ 56 ರನ್ ಬಾರಿಸಿ ಔಟಾಗದೇ ಉಳಿದರು. ವಿರಾಟ್ ಕೊಹ್ಲಿ 12, ಮಯಂಕ್ ಅಗರ್ವಾಲ್ 19 ರನ್ ಗಳಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್‌ನತ್ತ ನಡೆದರೆ, ನಾಯಕ ರಜತ್ ಪಾಟೀದಾರ್ 15 ರನ್ ಗಳಿಸಿ ನಾಟ್ ಔಟ್ ಆಗಿ ಉಳಿದು ವಿನ್ನಿಂಗ್ ಶಾಟ್ ಮಾಡಿ ತಂಡವನ್ನ ಗೆಲ್ಲಿಸೇಬಿಟ್ರು. ಇನ್ನೂ ಫೈನಲ್ ಪಂದ್ಯ ಅಹಮದಬಾದ್‌ನಲ್ಲಿ ಜೂನ್ 3ರಂದು ನಡೆಯಲಿದೆ.












Click it and Unblock the Notifications