M.Chinnaswamy Stadium: ಮಾರ್ಗಸೂಚಿಗಳೊಂದಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ: ಇಲ್ಲಿದೆ ಮಾಹಿತಿ
Bengaluru M.Chinnaswamy Stadium: ಆರ್ಸಿಬಿ ಐಪಿಎಲ್ 2025 ಟ್ರೋಫಿ ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ಜೂನ್ 4ರಂದು ವಿಯಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು. ಆಗಿನಿಂದ ಇಲ್ಲಿಯವರೆಗೆ ಇಲ್ಲಿ ಯಾವುದೇ ಪಂದ್ಯಗಳನ್ನು ಆಡಿಸಂತೆ ನಿಷೇಧ ಹೇರಲಾಗಿತ್ತು. ಆದರೆ, ಇದೀಗ ಮಾರ್ಗಸೂಚಿಗಳೊಂದಿಗೆ ಪಂದ್ಯಗಳನ್ನು ನಡೆಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರು ನಗರ ಪೋಲಿಸರು 17 ಅಂಶಗಳ ಷರತ್ತುಬದ್ಧ ಮಾರ್ಗಸೂಚಿಯೊಂದಿಗೆ ಕೆಎಸ್ಸಿಎ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾದ್ರೆ, ಅವುಗಳು ಯಾವುವು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕಾಲ್ತುಳಿತ ದುರಂತ ಹಿನ್ನೆಲೆ ಚಿನ್ನಸ್ವಾಮಿಯಲ್ಲಿ ಯಾವುದೇ ಪಂದ್ಯಗಳನ್ನು ಆಡಿಸಬಾರದು ಎಂದು ನಿಷೇಧ ಹೇರಲಾಗಿತ್ತು. ಆದರೆ, ಇದೀಗ ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸರ್ಕಾರದಿಂದ ಅನುಮತಿ ಪಡೆದಿದ್ದಾರೆ. ಈ ಮೂಲಕ ಇಲ್ಲಿ ಪಂದ್ಯಗಳ ಆಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಅದು ಮಾರ್ಗಸೂಚಿಗಳೊಂದಿಗೆ ಪಂದ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ.
ಗೃಹ ಇಲಾಖೆ ಸಿದ್ಧಪಡಿಸಿರುವ ಈ ಷರತ್ತುಗಳ ಕುರಿತು ಕೆಎಸ್ಸಿಎ ಪದಾಧಿಕಾರಿಗಳು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ತಂಡ ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮಾತನಾಡಲಿದೆ. ಪೊಲೀಸ್ ಕಮಿಷನರ್ ಅವರು ನ್ಯಾ. ಮೈಕಲ್ ಡಿ ಕುನ್ಹಾ ಸಮಿತಿ ವರದಿಯ ಶಿಫಾರಸುಗಳನ್ನು ಆಧರಿಸಿ, ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ 17 ಷರತ್ತುಗಳನ್ನು ವಿಧಿಸಿದ್ದಾರೆ. ಕೆಎಸ್ಸಿಎ ಈ ಷರತ್ತುಗಳನ್ನು ಈಡೇರಿಸಿದ ಬಳಿಕವೇ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾರ್ಗಸೂಚಿಯಲ್ಲಿ ಯಾವೆಲ್ಲಾ ಅಂಶಗಳಿವೆ?
* ಕ್ರೀಡಾಂಗಣದ ಒಳಗೆ ಒಳಗೆ ಮತ್ತು ಹೊರಗೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳ ಸುಧಾರಣೆ.
* ಟಿಕೆಟ್ ವಿತರಣೆ ಮತ್ತು ಪ್ರೇಕ್ಷಕರ ಕ್ಯೂಗಳು ಫುಟ್ಪಾತ್ಗಳ ಮೇಲೆ ನಡೆಯದಂತೆ ಎಚ್ಚರಿಕೆ ಕ್ರಮ ವಹಿಸಬೇಕು.
* ಟಿಕೆಟ್ ವಿತರಣೆಗಾಗಿ ಪ್ರತ್ಯೇಕ ಸ್ಥಳಗಳನ್ನು ಗುರುತಿಸಬೇಕು.
* ಸಾರ್ವಜನಿಕರ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು.
* ಸ್ಟೇಡಿಯಂನ ಎಲ್ಲಾ ಗೇಟ್ಗಳ ಅಗಲವನ್ನು ಕನಿಷ್ಠ 6 ಅಡಿ ವಿಸ್ತರಿಸಬೇಕು.
* ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು.
* ಅಗ್ನಿಶಾಮಕ ಸುರಕ್ಷತೆಗಾಗಿ ಪ್ರತ್ಯೇಕ ನಿರ್ಗಮನ ದ್ವಾರಗಳನ್ನು ಕಡ್ಡಾಯಗೊಳಿಸಲಾಗಿದೆ.
* ಮಹಿಳೆಯರು ಮತ್ತು ಮಕ್ಕಳಿಗೆ ಸ್ಟೇಡಿಯಂ ಒಳಗೆ ಪ್ರತ್ಯೇಕ ಸೌಲಭ್ಯಗಳನ್ನು ಕಲ್ಪಿಸಬೇಕು.
* ಸ್ಟೇಡಿಯಂ ಒಳಗೆ ಪ್ರೇಕ್ಷಕರ ಪ್ರವೇಶಕ್ಕೆ ನಿರ್ದಿಷ್ಟ ಸಮಯ ನಿಗದಿಪಡಿಸಬೇಕು.
* ಸ್ಟೇಡಿಯಂ ಸುತ್ತಲಿನ ಪಾರ್ಕಿಂಗ್, ಪಿಕ್ಅಪ್ ಮತ್ತು ಡ್ರಾಪ್ ವ್ಯವಸ್ಥೆಗಳನ್ನು ಸುಧಾರಿಸಬೇಕು.
ಈಗಾಗಲೇ ಐಪಿಎಲ್ 19ನೇ ಆವೃತ್ತಿಯು ಮುಂಬರುವ ಮಾರ್ಚ್ 26, 2026ರಿಂದ ಆರಂಭ ಆಗಲಿದ್ದು, ಮೇ 31ರವರೆಗೆ ನಡೆಯಲಿದೆ. ಇದರೊಳಗೆ ಮಾರ್ಗಸೂಚಿಯಲ್ಲಿ ನೀಡಲಾಗಿರುವ ಕೆಲಸ ಕಾಮಗಾರಿಗಳು ಮುಕ್ತಾಯವಾಗುವ ಸಾಧ್ಯತೆಯಿದೆ. ಒಂದು ವೇಳೆ ಮುಕ್ತಾಯ ಆದ್ರೆ, ಐಪಿಎಲ್ ಉದ್ಘಾಟನಾ ಪಂದ್ಯವನ್ನು ಇಲ್ಲಿ ಆಡಿಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
-
Virat Kohli: ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಬಳಿಕ ತನ್ನ ಆಟದ ಯಶಸ್ಸಿನ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಹೆಸರಿಗೆ ಅವಮಾನ: ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ 'ತುದಿ' ಪದ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
ಸಿಎಸ್ಕೆ ಕಪ್ 5 ರೂಪಾಯಿ, ಆರ್ಸಿಬಿ ಟ್ರೋಫಿ ಬೆಲೆ 5 ಕೋಟಿ ರೂಪಾಯಿ: ಪುಟ್ಟ ಬಾಲಕನ ಹೇಳಿಕೆ ಭಾರೀ ವೈರಲ್ -
Who is Jacob Duffy?: ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಪರ ಮಿಂಚಿದ ಜೇಕಬ್ ಡಫಿ ಯಾರು? -
Vaibhav Suryavanshi: ಸಂಜು ಟೀಂ ವಿರುದ್ಧವೇ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ -
IPL 2026: ಸಂಜು ಸ್ಯಾಮ್ಸನ್ 'ಓಪನಿಂಗ್ ಮ್ಯಾಚ್' 'ಮ್ಯಾಜಿಕ್' ದಾಖಲೆಗೆ ಬಿತ್ತು ಬ್ರೇಕ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
MI Vs KKR: 14 ವರ್ಷಗಳ ಬಳಿಕ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್; ಕೆಕೆಆರ್ ವಿರುದ್ಧ ಭರ್ಜರಿ ಜಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications