Bengaluru New Stadium: ಬೆಂಗಳೂರಿನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

Bengaluru New Stadium: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ ಇಂದು (ಮೇ 23) ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸೂರ್ಯನಗರ ಮಹತ್ವದ ಯೋಜನೆಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು

ದೇಶದ ಕ್ರೀಡಾ ಲೋಕದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಇಂದು (ಮೇ 23) ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಉನ್ನತ ಅಧಿಕಾರಿಗಳು ಸಾಕ್ಷಿಯಾದರು.

Bengaluru New Stadium Foundation Stone Laid for India s Second Largest Cricket Stadium Today

ಕರ್ನಾಟಕ ಗೃಹ ಮಂಡಳಿಯಿಂದ ನಿರ್ಮಾಣ

ಈ ಅತ್ಯಾಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಒಟ್ಟು 100 ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 900 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗುತ್ತಿದೆ. ಇದು ಜಾಗತಿಕ ಮಟ್ಟದ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ. ಕರ್ನಾಟಕ ಗೃಹ ಮಂಡಳಿ ಈ ಪ್ರತಿಷ್ಠಿತ ಕ್ರೀಡಾಂಗಣದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿರುವುದು ವಿಶೇಷವಾಗಿದೆ.

80,000 ಆಸನಗಳ ಸಾಮರ್ಥ್ಯದ ಸ್ಟೇಡಿಯಂ

ವಿಶ್ವದ ಅತೀ ದೊಡ್ಡ ಕ್ರೀಡಾಂಗಣಗಳ ಸಾಲಿಗೆ ಸೇರಲಿರುವ ಈ ಮೈದಾನವು ಬರೋಬ್ಬರಿ 80,000 ಆಸನಗಳ ಸಾಮರ್ಥ್ಯವನ್ನು ಹೊಂದಿರಲಿದೆ. ಪ್ರಸ್ತುತ ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕಿಂತಲೂ ಇದು ತುಂಬಾ ದೊಡ್ಡದಿರಲಿದೆ. ಪಂದ್ಯ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳಿಗೆ ಜಾಗತಿಕ ಮಟ್ಟದ ವೀಕ್ಷಣಾ ಅನುಭವ ಹಾಗೂ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇದರ ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ.

ಈ ಕ್ರೀಡಾಂಗಣ ನಿರ್ಮಾಣ ಆಗುತ್ತಿರುವುದರಿಂದ ಬೆಂಗಳೂರಿನ ಹೊರವಲಯದ ಆರ್ಥಿಕ ಚಿತ್ರಣವೇ ಬದಲಾಗುವ ನಿರೀಕ್ಷೆಯಿದೆ. ಈ ಬೃಹತ್ ಯೋಜನೆಯಿಂದಾಗಿ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಅಷ್ಟೇ ಅಲ್ಲದೆ ಭವಿಷ್ಯದಲ್ಲಿ ವಿಶ್ವಕಪ್ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಾವಳಿಗಳಿಗೆ ಆತಿಥ್ಯ ವಹಿಸಲು ಬೆಂಗಳೂರಿಗೆ ಮತ್ತೊಂದು ಅತ್ಯುತ್ತಮ ವೇದಿಕೆ ಸಿಕ್ಕಂತಾಗಲಿದೆ. ರಾಜ್ಯದ ಕ್ರೀಡಾ ಪ್ರವಾಸೋದ್ಯಮಕ್ಕೆ ಇದು ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡಲಿದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿದ್ದವರು ಹರ್ಷ ವ್ಯಕ್ತಪಡಿಸಿದರು.

ಇದರ ವಿಶೇಷತೆ ಏನು?

* ಈ ಬೃಹತ್ ಕ್ರೀಡಾಂಗಣವು ಸುಮಾರು 100 ಎಕರೆ ವಿಶಾಲವಾದ ಪ್ರದೇಶದಲ್ಲಿ ತಲೆಯೆತ್ತಲಿದೆ.

* ಈ ಮಹತ್ವಾಕಾಂಕ್ಷೆಯ ಯೋಜನೆಗಾಗಿ ಸುಮಾರು 900 ಕೋಟಿ ರೂಪಾಯಿಗಳ ಬಜೆಟ್ ಮೀಸಲಿಡಲಾಗಿದೆ.

* ಏಕಕಾಲದಲ್ಲಿ 80,000 ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸಬಹುದಾದ ಸೌಲಭ್ಯವನ್ನು ಇದು ಹೊಂದಿರಲಿದೆ. ಇದು ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತಲೂ ಅತಿ ದೊಡ್ಡದಾಗಿರಲಿದೆ.

* ಕರ್ನಾಟಕ ಗೃಹ ಮಂಡಳಿಯು ಈ ಪ್ರತಿಷ್ಠಿತ ಕ್ರೀಡಾ ಸಂಕೀರ್ಣದ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

* ಸ್ಟೇಡಿಯಂ ನಿರ್ಮಾಣದ ಹಂತದಿಂದ ಹಿಡಿದು ಕಾರ್ಯಾಚರಣೆಯವರೆಗೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಸಿಗಲಿವೆ.

* ವಿಶ್ವದರ್ಜೆಯ ಸೌಲಭ್ಯಗಳು ಇಲ್ಲಿ ಲಭ್ಯವಿರುವುದರಿಂದ ಭವಿಷ್ಯದಲ್ಲಿ ಐಪಿಎಲ್ ಮತ್ತು ವಿಶ್ವಕಪ್‌ನಂತಹ ದೊಡ್ಡ ಪಂದ್ಯಗಳಿಗೆ ಇದು ಅತಿಥ್ಯ ವಹಿಸಲಿದೆ.

* ಈ ಯೋಜನೆಯಿಂದಾಗಿ ಸುತ್ತಮುತ್ತಲ ರಸ್ತೆಗಳು ಮತ್ತು ಮೂಲಸೌಕರ್ಯಗಳು ಮೇಲ್ದರ್ಜೆಗೇರಲಿದ್ದು, ಬೆಂಗಳೂರಿನ ಹೊರವಲಯದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+