ಆರ್‌ಸಿಬಿಗೆ ಹೊಸ ತವರು ಮೈದಾನ: ಬೆಂಗಳೂರಿನ ಈ ಪ್ರದೇಶದಲ್ಲಿ ₹16,500,000,000 ವೆಚ್ಚದ ನೂತನ ಕ್ರೀಡಾಂಗಣ..
Bengaluru New Stadium: ಐಪಿಎಲ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿಯಾಗಿ ಗೆದ್ದು 17 ವರ್ಷಗಳ ಬಳಿಕ ಮೊದಲ ಟ್ರೋಫಿಗೆ ಮುತ್ತಿಟಿತು. ಈ ಹಿನ್ನೆಲೆ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಾದ ಬಳಿಕ ಹಲವು ಬದಲಾವಣೆಗಳಾದ್ವು. ಇದರ ಬೆನ್ನಲ್ಲೇ ಇದೀಗ 16,500,000,000 ರೂಪಾಯಿ ವೆಚ್ಚದಲ್ಲಿ ಹೊಸ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿದ 17 ಆವೃತ್ತಿಗಳಲ್ಲಿ ಒಂದೇ ಒಂದು ಐಪಿಎಲ್ ಟ್ರೋಫೀ ಗೆದ್ದಿರಲಿಲ್ಲ. ಆದರೆ, 18ನೇ ಆವೃತ್ತಿಯಲ್ಲಿ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗಲುವು ಸಾಧಿಸುವ ಮೂಲಕ ಟ್ರೋಫಿ ಇಲ್ಲ ಎನ್ನುವ ಕೊರಗನ್ನ ಮರೆಸಿತು. ಆದರೆ, ಬಳಿಕ ಆರ್‌ಸಿಗೆ ಕಾಲ್ತುಳಿತ ಪ್ರಕರಣ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು.

ಹೌದು.. ಐಪಿಎಲ್ 2025 ಫೈನಲ್ ಪಂದ್ಯ ಜೂನ್ 3ರಂದು ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ವೇಳೆ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಮಣಿಸುವ ಮೂಲಕ ಚೊಚ್ಚಲ ಟ್ರೋಫಿಗೆ ಮುಟ್ಟಿಟ್ಟಿತು. ಅಂದು ಬರೀ ಕರ್ನಾಟಕ ಅಷ್ಟೇ ಅಲ್ಲದೆ, ಇಡೀ ದೇಶವೇ ರಾಯಲ್ ತಂಡದ ಗೆಲುವನ್ನು ಸಂಭ್ರಮಿಸಿತು.
ಅದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಆರ್‌ಸಿಬಿಗೆ ದೊಡ್ಡ ಕಪ್ಪುಚುಕ್ಕೆಯಾಯಿತು. ಬಳಿಕ ಹಲವು ಬೆಳೆವಣಿಗೆಗಳು ಆದ್ವು. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಆರ್‌ಸಿಬಿ ಹಾಗೂ ಕೆಎಸ್‌ಸಿಎ ವಿರುದ್ಧ ಎಫ್‌ಐಆರ್ ದಾಖಲಿಸಿತು. ಅಷ್ಟೇ ಸಾಲದೆಂಬಂತೆ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಯಿತು.
ದುರಂತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಕೈಹಾಕಿದ್ದು, ಬೆಂಗಳೂರಿನ ಹೊರ ವಲಯದಲ್ಲಿ ಹೊಸ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲು ಮುಂದಾಗಿದೆ. ಬೊಮ್ಮಸಂದ್ರದಲ್ಲಿ ಇರುವ ಸೂರ್ಯ ಸಿಟಿಯ 100 ಹೆಕ್ಟೇರ್ ಪ್ರದೇಶದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅತ್ಯಾಧುನಿಕ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿಯ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಆಗಸ್ಟ್ 8 ರಂದು ಅನುಮೋದನೆ ನೀಡಿದ್ದಾರೆ.
ಇನ್ನು ಈ ಕ್ರೀಡಾಂಗಣಕ್ಕೆ ಅಂದಾಜು ₹1,650 ಕೋಟಿ ವೆಚ್ಚ ಆಗಲಿದ್ದು, ರಾಜ್ಯ ಸರ್ಕಾರದಿಂದ ಯಾವುದೇ ಹಣ ಸಹಾಯವನ್ನು ಪಡೆಯದೆ ನಿರ್ಮಾಣ ಮಾಡಲು ಕರ್ನಾಟಕ ಹೌಸಿಂಗ್ ಬೋರ್ಡ್ ತೀರ್ಮಾನ ಮಾಡೊದೆ ಎಂದು ತಿಳಿದುಬಂದಿದೆ. ಪ್ರಸ್ತಾವಿತ ಕ್ರೀಡಾ ಕೇಂದ್ರವು ಕ್ರಿಕೆಟ್ ಸೇರಿ ಎಂಟು ಒಳಾಂಗಣ ಮತ್ತು ಎಂಟು ಹೊರಾಂಗಣ ಕ್ರೀಡೆಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ.
ಇದು ಅತ್ಯಾಧುನಿಕ ಜಿಮ್‌ಗಳು, ತರಬೇತಿ ಸೌಲಭ್ಯಗಳು, ಈಜುಕೊಳ, ಅತಿಥಿ ಗೃಹಗಳು, ಹಾಸ್ಟೆಲ್‌ಗಳು, 3 ಸ್ಟಾರ್ ಮತ್ತು 5 ಸ್ಟಾರ್ ಹೋಟೆಲ್‌ಗಳು ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ಆಯೋಜಿಸಬಹುದಾದ ಸಮಾವೇಶ ಸಭಾಂಗಣವನ್ನು ಸಹ ಹೊಂದಿರಲಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ರಾಜ್ಯದಲ್ಲಿ ನಿರ್ಮಾಣ ಆಗುತ್ತಿರುವ ಈ ಕ್ರೀಡಾಂಗಣ ದೇಶದ ಎರಡನೇ ಅತೀ ದೊಡ್ಡ ಕ್ರೀಡಾಂಗಣ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಇದೀಗ 1,32,000 ಆಸನ ಸಾಮರ್ಥ್ಯ ಹೊಂದಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣ ದೇಶದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಆಗಿದೆ.
ಕಾಲ್ತುಳಿತ ದುರಂತ ಹಿನ್ನೆಲೆ ಕೆಲವೇ ದಿನಗಳಲ್ಲಿ ಆರಂಭ ಆಗಬೇಕಿದ್ದ ಮಹಾರಾಜ ಟಿ-20 ಟೂರ್ನಿ ಸಹ ಇದೀಗ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರ ಆಗಿದೆ. ಅಷ್ಟೇ ಅಲ್ಲದೆ, ಮುಂಬರುವ ಮಹಿಳಾ ಏಕದಿನ ವಿಶ್ವಕಪ್ನ ಉದ್ಘಾಟನಾ ಪಂದ್ಯ ಸೇರಿದಂತೆ ಸೆಮಿಫೈನಲ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ, ಆ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದು ಡೌಟ್ ಎನ್ನಲಾಗುತ್ತಿದೆ.
ಹೊಸ ಕ್ರೀಡಾಂಗಣದ ವಿವರ
* ನಿರ್ಮಾಣ ವೆಚ್ಚ: ₹1,650 ಕೋಟಿ ರೂಪಾಯಿ
* ಸ್ಥಳ: ಬೊಮ್ಮಸಂದ್ರ ಬಳಿಯ ಸೂರ್ಯ ಸಿಟಿ
* ಆಸನಗಳು: 80,000
* ಅಳತೆ: 100 ಹೆಕ್ಟೇರ್












Click it and Unblock the Notifications