RCB: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹25,00,000 ನೆರವು ಘೋಷಿಸಿದ ಆರ್‌ಸಿಬಿ
Bengaluru Stampede: ಆರ್‌ಸಿಬಿ ಐಪಿಎಲ್ 2025 ಟ್ರೋಫಿ ಗದ್ದ ಹಿನ್ನೆಲೆ ಬೆಂಗಳೂರಿನಲ್ಲಿ ಜೂನ್ 4ರಂದು ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದು ರಾಯಲ್ ತಂಡದ ಪಾಲಿಗೆ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು. ಆದರೆ, ಇದೀಗ ಪ್ರಾಂಚೈಸಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಗಳಿಗೆ ತಲಾ 25,00,000 ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆಯಲ್ಲಿ ಮನಮಿಡಿಯುವ ಸಂದೇಶವೊಂದನ್ನ ರವಾನಿಸಿದ್ದು, ಇದು ಭಾರೀ ವೈರಲ್ ಆಗುತ್ತಿದೆ.
ಐಪಿಎಲ್ 2025 ಫೈನಲ್ ಪಂದ್ಯ ಅಹಮದಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆಯಿತು. ಈ ವೇಳೆ ಆರ್‌ಸಿಬಿ ಪಂಜಾಬ್ ಕಿಂಗ್ಸ್ ಮಣಿಸುವ ಮೂಲಕ 18 ವರ್ಷಗಳ ಬಳಿಕ ಮೊಟ್ಟ ಮೊದಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಆ ದಿನ ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಮಾಡಿತು.

ಆದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದು ಆರ್‌ಸಿಬಿ ಪಾಲಿಗೆ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು. ಆದರೆ, ಇದೀಗ ಇಂದು (ಆಗಸ್ಟ್ 30) ವಿಶೇಷ ಸಂದೇಶದ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಾಂಚೈಸಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ವಿಶೇಷ ಸಂದೇಶದೊಂದಿಗೆ ತಲಾ 25 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ. ಹಾಗಾದ್ರೆ, ಅದರಲ್ಲೇನಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.
ಆರ್ಥಿಕ ನೆರವಿನ ಜೊತೆಗೆ ಆರ್‌ಸಿಬಿ ಮೃತಪಟ್ಟವರ ಕುಟುಂಬಗಳಿಗೆ ವಿಶೇಷ ಸಂದೇಶವನ್ನು ರವಾನೆ ಮಾಡಿದೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ. ಹಾಗಾದ್ರೆ, ಅದರಲ್ಲಿ ಏನಿಗೆ ಎನ್ನುವ ಕುತೂಹಲ ಬಹುತೇಕರ ತಲೆಯಲ್ಲಿ ಇರುತ್ತದೆ. ಇದಕ್ಕೆಲ್ಲ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
𝗥𝗖𝗕 𝗖𝗮𝗿𝗲𝘀: 𝗢𝗳𝗳𝗶𝗰𝗶𝗮𝗹 𝗔𝗻𝗻𝗼𝘂𝗻𝗰𝗲𝗺𝗲𝗻𝘁
— Royal Challengers Bengaluru (@RCBTweets) August 30, 2025
Our hearts broke on June 4, 2025.
We lost eleven members of the RCB family. They were part of us. Part of what makes our city, our community & our team unique. Their absence will echo in the memories of each one of… pic.twitter.com/1hALMHZ6os
"ಜೂನ್ 4, 2025- ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನಷ್ಟೇ ಅಲ್ಲ...ನಮ್ಮ ಕುಟುಂಬ ಸದಸ್ಯರನ್ನು. ಅವರು ನಮ್ಮ ಹೃದಯದ ಭಾಗ ಆಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ"
"ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ನೆರವನ್ನು ನೀಡಿದೆ. ಇದು ಕೇಲವ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿ ಭರವಸೆ"
"ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಆಗಿದೆ. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ" ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಾಂಚೈಸಿ ಸಾಮಾಜಿಕ ಜಾಲತಾಣದ ಭಾಗವಾದ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.
ಹೊಸದಾಗಿ ಪ್ರಾರಂಭ ಮಾಡಲಾಗಿದೆ ಆರ್‌ಸಿಬಿ ಕೇರ್ಸ್ ನಿಧಿಯ ಅಡಿಯಲ್ಲಿ ಈ ನೆರವವನ್ನು ಘೋಷಣೆ ಮಾಡಲಾಗಿದೆ. ಟ್ವಿಟ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫ್ರಾಂಚೈಸಿ ಶನಿವಾರ ಈ ಅಧಿಕೃತ ಘೋಷಣೆಯನ್ನು ಮಾಡಿದೆ. ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಪ್ರಶಸ್ತಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಈ ದುರಂತವು ಇಡೀ ದೇಶದ ಗಮನ ಸೆಳೆದಿತ್ತು.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್‌ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್‌ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications