Ind vs Aus: ಆಸ್ಟ್ರೇಲಿಯಾ ತಂಡಕ್ಕೆ ಮರಳಿದ ಮಾರಕ ವೇಗಿ; ಮೂರನೇ ಟೆಸ್ಟ್‌ಗೆ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಡಿಸೆಂಬರ್ 14ರಿಂದ ಬ್ರಿಸ್ಬೇನ್‌ನ ಗಬ್ಬಾದಲ್ಲಿ ಆರಂಭವಾಗಲಿರುವ ಭಾರತದ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಆಸ್ಟ್ರೇಲಿಯಾ ಆಡುವ ಬಳಗವನ್ನು ಘೋಷಿಸಿದೆ. ಗಾಯದ ಕಾರಣದಿಂದ ಎರಡನೇ ಟೆಸ್ಟ್‌ನಲ್ಲಿ ಹೊರಗುಳಿದಿದ್ದ ಜೋಶ್ ಹೇಜಲ್‌ವುಡ್ ಮೂರನೇ ಪಂದ್ಯದಲ್ಲಿ ತಂಡಕ್ಕೆ ಮರಳಿದ್ದು, ಬೌಲಿಂಗ್ ಪಡೆ ಮತ್ತಷ್ಟು ಬಲಿಷ್ಠವಾಗಿದೆ. ಅಡಿಲೇಡ್ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಸ್ಕಾಟ್ ಬೊಲ್ಯಾಂಡ್ ಮೂರನೇ ಟೆಸ್ಟ್‌ನಲ್ಲಿ ಹೊರಗುಳಿಯಬೇಕಾಗಿದೆ.

ಜೋಶ್ ಹೇಜಲ್‌ವುಡ್ ನಿರೀಕ್ಷೆಗಿಂತ ವೇಗವಾಗಿ ಚೇತರಿಸಿಕೊಂಡಿದ್ದಾರೆ. ಜೋಶ್ ವಾಪಸಾತಿ ಬಗ್ಗೆ ನಾಯಕ ಪ್ಯಾಟ್ ಕಮ್ಮಿನ್ಸ್ ಸಂತಸ ವ್ಯಕ್ತಪಡಿಸಿದ್ದು, ಹೇಜಲ್‌ವುಡ್ ವೇಗವಾಗಿ ಚೇತರಿಸಿಕೊಳ್ಳಲು ಕಾರಣವಾದ ವೈದ್ಯಕೀಯ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

bgt 3rd test Australia announce playing xi for gabba test agianst india

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ ಬದಲು ಸ್ಥಾನ ಪಡೆದಿದ್ದ ಸ್ಕಾಟ್ ಬೊಲ್ಯಾಂಡ್ ಉತ್ತಮ ಪ್ರದರ್ಶನ ನೀಡಿದ್ದರು. 5 ವಿಕೆಟ್ ಪಡೆದುಕೊಂಡಿದ್ದ ಆಸ್ಟ್ರೇಲಿಯಾ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಮೂರನೇ ಟೆಸ್ಟ್‌ನಿಂದ ಹೊರಗುಳಿಯಬೇಕಾಗಿದೆ.

ಪ್ಯಾಟ್ ಕಮ್ಮಿನ್ಸ್ ಹೇಳಿದ್ದೇನು?

ಜೋಶ್ ಹೇಜಲ್‌ವುಡ್‌ ವಾಪಸಾತಿ ಬಗ್ಗೆ ನಾಯಕ ಪ್ಯಾಟ್ ಕಮ್ಮಿನ್ಸ್ ಸಂತಸ ವ್ಯಕ್ತಪಡಿಸಿದ್ದಾರೆ. "ಜೋಶ್ ಹೇಜಲ್‌ವುಡ್‌ ಮರಳಿರುವುದು ಖುಷಿಯಾಗಿದೆ. ಅದರೆ ಅಡಿಲೇಡ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಸ್ಕಾಟ್‌ ಬೊಲ್ಯಾಂಡ್ ಅನಿವಾರ್ಯವಾಗಿ ಹೊರಗುಳಿಯಬೇಕಿದೆ. ಆತ 18 ತಿಂಗಳಿನಿಂದ ಸಾಕಷ್ಟು ಸಮಯ ಬೆಂಚ್‌ ಮೇಲೆ ಕಳೆದಿದ್ದಾರೆ. ಅವರು ಆಡಿದಾಗಲೆಲ್ಲಾ ಉತ್ತಮ ಪ್ರದರ್ಶನ ನೀಡಿದ್ದಾರೆ" ಎಂದು ಹೇಳಿದರು.

ಆಸ್ಟ್ರೇಲಿಯಾ ಪ್ಲೇಯಿಂಗ್ 11:

ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.

ಭಾರತ ತಂಡದಲ್ಲಿ ಬದಲಾವಣೆ?

ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದರೆ, ಭಾರತ ಯಾವ ಪ್ಲೇಯಿಂಗ್‌ ಇಲೆವೆನ್ ಜೊತೆ ಕಣಕ್ಕಿಳಿಯಲಿದೆ ಎನ್ನುವ ಕುತೂಹಲ ಇದೆ. ಪರ್ತ್‌ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಗೆದ್ದಿದ್ದ ಭಾರತಕ್ಕೆ ಅಡಿಲೇಡ್‌ನಲ್ಲಿ ಸೋಲಿನ ಶಾಕ್ ಸಿಕ್ಕಿತ್ತು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಭಾರತ ಗಬ್ಬಾ ಟೆಸ್ಟ್ ಗೆಲ್ಲಲೇಬೇಕಾಗಿದೆ.

ಮೂರನೇ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಅಡಿಲೇಡ್‌ ಟೆಸ್ಟ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ರವಿಚಂದ್ರನ್ ಅಶ್ವಿನ್ ಬದಲಾಗಿ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಆಡಬಹುದು ಎನ್ನಲಾಗಿದೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಳಪೆ ಫಾರ್ಮ್‌ ಭಾರತ ತಂಡಕ್ಕೆ ದೊಡ್ಡ ತಲೆನೋವಾಗಿದೆ. ಇವರಿಬ್ಬರೂ ದೊಡ್ಡ ಸ್ಕೋರ್ ಮಾಡದೇ ಇದ್ದರೆ ಭಾರತ ಗಬ್ಬಾದಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ. ಇಬ್ಬರೂ ಹೆಚ್ಚಿನ ಸಮಯ ಅಭ್ಯಾಸ ಮಾಡುತ್ತಿದ್ದು ಮೂರನೇ ಟೆಸ್ಟ್‌ನಲ್ಲಿ ರನ್ ಗಳಿಸುವ ವಿಶ್ವಾಸದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+