BPL: ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಬಿಗ್ ಗುಡ್‌ ನ್ಯೂಸ್‌

BPL Ration Card: ರಾಜ್ಯ ಸರ್ಕಾರ ಪಡಿತರ ಚೀಟಿ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಲಿರುತ್ತದೆ. ಇದೀಗ ಈಗ ಪ್ರಸ್ತುತ ಇರುವ ಬಿಪಿಎಲ್‌ ಕಾರ್ಡ್‌ದಾರರು ಹಾಗೂ ಹೊಸದಾಗಿ ಈ ಕಾರ್ಡ್‌ ಪಡೆಯುವವರಿಗೆ ಭರ್ಜರಿ ಶುಭ ಸುದ್ದಿ ಇದೆ. ಈ ಕುರಿತು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ತಿಂಗಳುಗಳಿಂದ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುಗ ಕೆಲಸವನ್ನು ಸರ್ಕಾರ ಮಾಡಿತ್ತು. ಈ ವೇಳೆ ಅರ್ಹರ ಬಳಿಯಿರುವ BPL ಪಡಿತರ ಚೀಟಿಯನ್ನು ರದ್ದುಪಡಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು.

BPL Ration Card Karnataka Government Plans to Raise Income Limit to Rs 3 Lakh Says KH Muniyappa

ಬಿಪಿಎಲ್‌ ಕಾರ್ಡುದಾರರಿಗೆ ಬಿಗ್ ಗುಡ್‌ ನ್ಯೂಸ್‌

ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ ರದ್ದಾಗಿವೆಯೋ ಅಂತಹವರು ಮತ್ತೆ ಅರ್ಜಿ ಸಲ್ಲಿಸಿ ವಾಪಾಸ್‌ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಈ ಪಡಿತರ ಚೀಟಿದಾರರಿಗೆ ಮತ್ತೊಂದು ನೆಮ್ಮದಿಯ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂಪಾಯಿ ಅಥವಾ ಅದಕ್ಕಿನ ಕೆಳಗಿರುವವರು ಮಾತ್ರ ಬಿಪಿಎಲ್‌ ಕಾರ್ಡ್‌ಗೆ ಅರ್ಹರು ಎಂದು ಹೇಳಲಾಗಿತ್ತು. ಆದರೆ ಇದೀಗ ಇದನ್ನು ಹೆಚ್ಚಳ ಮಾಡುವ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ.

ಆಹಾರ ಸಚಿವರು ಹೇಳಿದ್ದೇನು?

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಗ್ಯಾರಂಟಿ ಯೋಜನೆಗಳ‌ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ ಅವರು, 'ಬಿಪಿಎಲ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ನಿಗದಿಪಡಿಸಿದ್ದ 1.20 ಲಕ್ಷ ರೂಪಾಯಿ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತ ಸುಧಾರಣೆ ಆಯೋಗದ ಶಿಫಾರಸಿನಂತೆ 3 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ,' ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯ ಮುಖ್ಯ ಉದ್ದೇಶ ಏನು?

'ಆಹಾರ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯ ಸುಮಾರು 4.42 ಕೋಟಿ ಫಲಾನುಭವಿಗಳಿಗೆ 10 ಕೆ.ಜಿ. ಪಡಿತರ ವಿತರಣೆ ಮಾಡುತ್ತಿದ್ದೇವೆ. ಈ ಮೂಲಕ ಕರ್ನಾಟಕವನ್ನು ನಮ್ಮ ಸರ್ಕಾರವು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದೆ,' ಎಂದು ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದರು.

'ನಮ್ಮ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲು ಅನ್ನಭಾಗ್ಯ ಯೋಜನೆಯು ಒಂದಾಗಿದೆ. ಯಾರೂ ಹಸಿವಿನಿಂದ ಇರಬಾರದು ಎನ್ನುವ ಉದ್ದೇಶದಿಂದ ಅಂದಿನ ನಮ್ಮ ಯುಪಿಎ ಸರ್ಕಾರ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೊಳಿತ್ತು. ಆ ಮೂಲಕ ಈ ಮಹತ್ವದ ಯೋಜನೆ ಜಾರಿಯಾಗಿದೆ. ನಮ್ಮ ಸರ್ಕಾರವು ನುಡಿದಂತೆ ನಡೆದುಕೊಳ್ಳುತ್ತಿದೆ. ಪ್ರತಿ ಅರ್ಹ ಫಲಾನುಭವಿಗೆ 10 ಕೆ.ಜಿ ಪಡಿತರ ಧಾನ್ಯ ವಿತರಿಸುವ ಮೂಲಕ ಜನರ ಬದುಕಿಗೆ ಆಸರೆ ಆಗಿದೆ,' ಎಂದು ಹೇಳಿದರು.

ಇನ್ನೂ ಪಡಿತರ ವಿತರಣೆಯಲ್ಲಿ ಕಾಳಸಂತೆಯನ್ನು ತಡೆಗಟ್ಟಲು ಕ್ರಮ ವಹಿಸಲಾಗಿದೆ. ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ಅಳವಡಿಸಿ ನಿಗಾವಹಿಸಲು ಕಮಾಂಡ್ ಕಂಟ್ರೋಲ್ ರೂಂನ್ನು ಕೇಂದ್ರ ಕಚೇರಿಯಲ್ಲಿ ನಿರ್ಮಿಸಲಾಗುತ್ತಿದೆ. ಎಂಎಸ್‌ಪಿ ಯೋಜನೆಯಡಿ 5.60 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡಿದ್ದು, ಅದನ್ನು ಶುದ್ದೀಕರಿಸಿ ಗ್ರಾಹಕರಿಗೆ ವಿತರಿಸಲಾಗುತ್ತಿದೆ ಎಂದು ಹೇಳಿದರು. ಒಟ್ಟಿನಲ್ಲಿ ಆದಾಯ ಮಿತಿಯನ್ನು ಹೆಚ್ಚಳ ಮಾಡುವ ಕ್ರಮಕ್ಕೆ ಮುಂದಾಗಿದ್ದು, ಇದರಿಂದ ಬಿಪಿಎಲ್‌ ಕಾರ್ಡುದಾರರಿಗೆ ಬಿಗ್ ಗುಡ್‌ ನ್ಯೂಸ್‌ ಸಿಕ್ಕಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+