Team India: ಬಾಂಗ್ಲಾದೇಶದ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ; ಕೊಹ್ಲಿ, ಬುಮ್ರಾ, ಪಂತ್ ವಾಪಸ್!
ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ತಂಡಕ್ಕೆ ವಾಪಸಾಗಿದ್ದು, ಯಶ್ ದಯಾಳ್ ಮೊದಲ ಬಾರಿಗೆ ಭಾರತ ತಂಡಕ್ಕಾಗಿ ಟೆಸ್ಟ್ ಆಡಲು ಕರೆ ಬಂದಿದೆ. ದುಲೀಪ್ ಟ್ರೋಫಿ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಳಿಕ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿದೆ.
ಮೊದಲ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಲಾಗಿದ್ದು, ಬಳಿಕ ಎರಡನೇ ಟೆಸ್ಟ್‌ಗೆ ತಂಡವನ್ನು ಪ್ರಕಟಿಸಲಾಗುತ್ತದೆ. ಎರಡು ವರ್ಷಗಳ ಬಳಿಕ ರಿಷಬ್ ಪಂತ್ ಮತ್ತೆ ಭಾರತ ತಂಡಕ್ಕಾಗಿ ಟೆಸ್ಟ್ ಆಡಲು ಸಜ್ಜಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ದೀರ್ಘಕಾಲದ ವಿಶ್ರಾಂತಿ ಬಳಿಕ ಟೆಸ್ಟ್‌ಗೆ ಮರಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಮುಂದಿನ ತಿಂಗಳು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ವಾಪಸತಿ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆಯ್ಕೆಗಾರರು ಅವರಿಗೆ ವಿಶ್ರಾಂತಿಯನ್ನು ಕಡಿಮೆ ಮಾಡಿದ್ದು, ಬಾಂಗ್ಲಾದೇಶ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದಾರೆ.
ಟೆಸ್ಟ್ ತಂಡಕ್ಕೆ ಪಂತ್ ವಾಪಸಾತಿ
ಗಬ್ಬಾ ಟೆಸ್ಟ್‌ನಲ್ಲಿ ಭಾರತ ತಂಡಕ್ಕೆ ಹೀರೋ ಆಗಿದ್ದ ರಿಷಬ್ ಪಂತ್ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಗೆ ವಾಪಸಾತಿ ಮಾಡಿದ್ದಾರೆ. 2022ರ ಡಿಸೆಂಬರ್ ತಿಂಗಳ ಕೊನೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡ ಬಳಿಕ, ಸುದೀರ್ಘ ವಿಶ್ರಾಂತಿ ಪಡೆದಿದ್ದಾರೆ. ಮತ್ತೊಂದು ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಸಮಯ ಹತ್ತಿರವಾಗುತ್ತಿರುವಾಗ ಪಂತ್ ಭಾರತ ವಿರುದ್ಧ ಬಾಂಗ್ಲಾದೇಶ ಸರಣಿಯಲ್ಲಿ ವಾಪಸಾತಿ ಮಾಡಲು ಸಜ್ಜಾಗಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ರಿಷಬ್ ಪಂತ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 2 ನೇ ಇನ್ನಿಂಗ್ಸ್‌ನಲ್ಲಿ 47 ಎಸೆತಗಳಲ್ಲಿ 61 ರನ್ ಗಳಿಸಿದರು. ವಿಕೆಟ್ ಕೀಪರ್ ಆಗಿ ಫಿಟ್ ಆಗಿದ್ದಾರೆ.
ವರ್ಷದ ಮೊದಲ ಟೆಸ್ಟ್ ಸರಣಿ ಆಡಲಿರುವ ಕೊಹ್ಲಿ
ಅಕಾಯ್ ಕೊಹ್ಲಿಯ ಜನನದ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಎಂಟು ತಿಂಗಳ ಬಳಿಕ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ. ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್ ಮೇಲೆ ಹೆಚ್ಚಿನ ಗಮನ ಹರಿಸಲಿದ್ದಾರೆ.
ಯಶ್ ದಯಾಳ್ ಮೊದಲ ಬಾರಿ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಬಳಿಕ ಎಡಗೈ ವೇಗಿಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ.
ಬಾಂಗ್ಲಾದೇಶ ಟೆಸ್ಟ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.












Click it and Unblock the Notifications