ಐಪಿಎಲ್ 2021: ಚೆನ್ನೈ ಪಂದ್ಯದ ಮೇಲೆ ಬೆಟ್ಟಿಂಗ್, ಓರ್ವ ಬಂಧನ
ಬೆಂಗಳೂರು, ಏಪ್ರಿಲ್ 17: ಐಪಿಎಲ್ 2021 ಆರಂಭದೊಂದಿಗೆ ಕದ್ದುಮುಚ್ಚಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವುದು ಹೆಚ್ಚಾಗುತ್ತಿದೆ. ಬೆಟ್ಟಿಂಗ್ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ನಿರಂತರ ಮುಂದುವರೆದಿದೆ.
ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ, ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯ ಬಂಧಿಸಿದ್ದಾರೆ. ಬಂಧಿತ ಆರೊಪಿಯನ್ನು ದೀಪಕ್ ಎಂದು ಗುರುತಿಸಲಾಗಿದೆ. ಐಪಿಎಲ್ 14ರ ಮ್ಯಾಚ್ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸಿದ್ದ.
ಲೋಟಸ್ ಬುಕ್ 9 ಎಂಬ ಮೊಬೈಲ್ ಅಪ್ಲಿಕೇಷನ್ ಬಳಸಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದ ಆರೋಪವಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ದಾಳಿ ವೇಳೆ ಆರೋಪಿಯನ್ನು ಬಂಧಿಸಿ, ಆತನ ಬಳಿ ಇದ್ದ 2 ಲಕ್ಷ ನಗದು ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಎಲ್ಲಾ ರೀತಿಯ ಬೆಟ್ಟಿಂಗ್ ಮೇಲೆ ನಿಷೇಧವಿದೆ. ಆನ್‌ಲೈನ್ ಗೇಮಿಂಗ್ ಅಪ್ ಮೂಲಕ ದುಡ್ಡು ಕಟ್ಟಿ ಆಡುವ ಆಟಕ್ಕೆ ನಿರ್ಬಂಧವಿದ್ದರೂ ಸಂಪೂರ್ಣ ನಿಷೇಧ ಸಾಧ್ಯವಾಗಿಲ್ಲ. ಈ ಬಗ್ಗೆ ಆಂಧ್ರಪ್ರದೇಶ, ಕೇರಳ ಹಾಗೂ ತಮಿಳುನಾಡು ರಾಜ್ಯಗಳು ಕೂಡಾ ಕ್ರಮ ಜರುಗಿಸಿದ್ದು, ಬೆಟ್ಟಿಂಗ್ ಮೇಲೆ ನಿಷೇಧ ಹೇರಿವೆ.
ಆನ್ ಲೈನ್ ಗೇಮಿಂಗ್ ಹಾವಳಿಯಿಂದ ಅನೇಕ ಸಾಮಾಜಿಕ ಪಿಡುಗು ಆರಂಭವಾಗಿದ್ದು, ಹಣ, ಪ್ರಾಣ ಎಲ್ಲವೂ ಹೋಗಿದೆ. ಬೆಟ್ಟಿಂಗ್ ಯಾವುದೇ ಮಾದರಿಯಾದರೂ ಅದರಿಂದ ನಷ್ಟ ಹೊಂದುವವರೇ ಅಧಿಕ, ಯುವ ಜನಾಂಗ ಇದರಿಂದ ಭಾರಿ ನಷ್ಟ ಅನುಭವಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೂಗಿದ್ದರೂ ಕರ್ನಾಟಕ ಸರ್ಕಾರ ಯಾವುದೇ ಕಠಿಣ ನಿರ್ಧಾರ ಕೈಗೊಂಡಿಲ್ಲ, ಇನ್ನು ಗೇಮಿಂಗ್ ಆಪ್ ಮೇಲೆ ನಿಯಂತ್ರಣ, ನಿಷೇಧ ಎಲ್ಲವೂ ಕೇಂದ್ರ ಗೃಹ ಇಲಾಖೆ ನಿರ್ಧರಿಸಬೇಕಾಗುತ್ತದೆ.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications