CCL Karnataka Bulldozers: ಡಾರ್ಲಿಂಗ್ ಕೃಷ್ಣ ಅರ್ಧಶತಕ; ಮುಂಬೈ ವಿರುದ್ಧ ಗೆದ್ದ ಕಿಚ್ಚ ಸುದೀಪ್ ಪಡೆ
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತನ್ನ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿದೆ.
ರಿತೇಶ್ ದೇಶ್‌ಮುಖ್ ನಾಯಕತ್ವದ ಮುಂಬೈ ಹೀರೋಸ್ ವಿರುದ್ಧ ಕಿಚ್ಚ ಸುದೀಪ್ ತಂಡವು ಅಮೋಘ 38 ರನ್‌ಗಳ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. 20 ಓವರ್ ಗಳ ಪಂದ್ಯದಲ್ಲಿ ಸಿಸಿಎಲ್‌ನಲ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ ಆಡಿಸಲಾಗುತ್ತದೆ. ಪ್ರತಿ ಇನ್ನಿಂಗ್ಸ್‌ನಲ್ಲಿ 10 ಓವರ್ ಇರುತ್ತದೆ.

ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 70 ರನ್ ಮಾತ್ರ ಗಳಿಸಿತು. ಇದಕ್ಕೆ ಉತ್ತರವಾಗಿ ಮುಂಬೈ ಹೀರೋಸ್ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 76 ರನ್ ಗಳಿಸುವ ಮೂಲಕ 6 ರನ್‌ಗಳ ಮುನ್ನಡೆ ಪಡೆದುಕೊಂಡರು.
ಡಾರ್ಲಿಂಗ್ ಕೃಷ್ಣ ಅಮೋಘ ಅರ್ಧಶತಕ
ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ 5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 43 ರನ್ ಗಳಿಸುವ ಮೂಲಕ 37 ರನ್‌ಗಳ ಮುನ್ನಡೆ ಪಡೆದುಕೊಂಡಿತು.
ಈ ಹಂತದಲ್ಲಿ ಕ್ರೀಸ್‌ಗೆ ಬಂದ ಡಾರ್ಲಿಂಗ್ ಕೃಷ್ಣ ಮುಂಬೈ ಹೀರೋಸ್ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. 18 ಎಸೆತಗಳಲ್ಲಿ 6 ಸಿಕ್ಸರ್ ಸಹಿತ ಅಜೇಯ 55 ರನ್ ಗಳಿಸಿದರು. ಮತ್ತೊಂದೆಡೆ ಜೆಕೆ ಕೂಡ 27 ಎಸೆತಗಳಲ್ಲಿ 45 ರನ್ ಕಲೆಹಾಕಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 129 ರನ್ ಕಲೆಹಾಕುವ ಮೂಲಕ ಮುಂಬೈ ಹೀರೋಸ್ ತಂಡಕ್ಕೆ 124 ರನ್‌ಗಳ ಬೃಹತ್ ಗುರಿಯನ್ನು ನೀಡಿತು.
ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲು ಪರದಾಡಿದ ಮುಂಬೈ ಹೀರೋಸ್ 10 ಓವರ್ ಗಳಲ್ಲಿ ಕೇವಲ 86 ರನ್ ಗಳಿಸುವ ಮೂಲಕ 38 ರನ್‌ಗಳಿಂದ ಸೋಲನುಭವಿಸಿತು.
ಆಡಿದ ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಮುಂದಿನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 2 ರಂದು ನಡೆಯಲಿದೆ. ಸೋನಿ, ಜಿಯೋ ಸಿನಿಮಾದಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ.












Click it and Unblock the Notifications