Champions Trophy: ಮಳೆಯಿಂದಾಗಿ ದಕ್ಷಿಣ ಆಫ್ರಿಕಾ - ಆಸ್ಟ್ರೇಲಿಯಾ ಪಂದ್ಯ ರದ್ದು: ಇಂಗ್ಲೆಂಡ್‌ಗೆ ಸಂಕಷ್ಟ

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. 20 ಓವರ್ ಪಂದ್ಯವಾದರೂ ನಡೆಯುತ್ತಿದೆ ಎಂದು ನಿರೀಕ್ಷೆ ಮಾಡಲಾಗಿತ್ತಾದರೂ ಮಳೆ ಬಿಡುವ ಯಾವುದೇ ಮುನ್ಸೂಚನೆ ಇಲ್ಲದ ಕಾರಣ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಪಂದ್ಯ ರದ್ದಾಗಿದ್ದರಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಲಾ 1 ಅಂಕವನ್ನು ಹಂಚಿಕೊಂಡಿವೆ. ಈಗಾಗಲೇ ಎರಡೂ ತಂಡಗಳು ಒಂದು ಪಂದ್ಯವನ್ನು ಗೆದ್ದಿದ್ದು, ಎರಡನೇ ಪಂದ್ಯ ಮಳೆಯಿಂದ ರದ್ದಾಗಿದ್ದು ಒಂದು ಲೆಕ್ಕಾಚಾರದಲ್ಲಿ ಅನುಕೂಲವಾಗಿದ್ದರೆ, ಇಂಗ್ಲೆಂಡ್‌ ಸಂಕಷ್ಟವನ್ನು ಹೆಚ್ಚಿಸಿದೆ.

Champions trophy 2025 australia vs south africa match has been called off due to rain

ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಈಗ ತಲಾ 3 ಅಂಕಗಳನ್ನು ಹೊಂದಿದ್ದು, ಮೊದಲು ಮತ್ತು ಎರಡನೇ ಸ್ಥಾನದಲ್ಲಿವೆ. ಇಂಗ್ಲೆಂಡ್ ಮೊದಲ ಪಂದ್ಯದಲ್ಲಿ ಸೋತಿದ್ದು ಸೆಮಿಫೈನಲ್ ತಲುಪಬೇಕಾದರೆ ಅಫ್ಗಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಮಾರ್ಚ್ 26ರಂದು ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಸೋಲುವ ತಂಡ ಅಧಿಕೃತವಾಗಿ ಸೆಮಿಫೈನಲ್‌ ರೇಸ್‌ನಿಂದ ಹೊರಬೀಳಲಿದೆ.

ಬುಧವಾರ ಲಾಹೋರ್ ನಲ್ಲಿ ಇಂಗ್ಲೆಂಡ್ ಮತ್ತು ಅಫ್ಗಾನಿಸ್ತಾನ ಮುಖಾಮುಖಿಯಾಗಲಿದೆ. ಮಂಗಳವಾರ ಲಾಹೋರ್ ನಲ್ಲಿ ಭಾರಿ ಮಳೆಯಾಗಿದ್ದು ಬುಧವಾರ ಕೂಡ ಮಳೆ ಅಡ್ಡಿಪಡಿಸುವ ಭೀತಿ ಎದುರಾಗಿದೆ. ಬುಧವಾರ ಇಂಗ್ಲೆಂಡ್ -ಅಫ್ಗಾನಿಸ್ತಾನ ಪಂದ್ಯ ಮಳೆಯಿಂದ ರದ್ದಾದರೆ ಎರಡೂ ತಂಡಗಳು ಪಂದ್ಯಾವಳಿಯಿಂದ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.

ಭಾರತ, ನ್ಯೂಜಿಲೆಂಡ್‌ ಸೆಮಿಫೈನಲ್‌ಗೆ

ಎ ಗುಂಪಿನಲ್ಲಿ ಈಗಾಗಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿವೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿವೆ. ಎ ಗುಂಪಿನಲ್ಲಿ ಇನ್ನು ಎರಡು ಪಂದ್ಯ ಮಾತ್ರ ನಡೆಯಲಿದ್ದು ಎರಡೂ ಪಂದ್ಯಗಳು ಕೇವಲ ಔಪಚಾರಿಕ ಪಂದ್ಯಗಲಾಗಲಿವೆ.

ಫೆಬ್ರವರಿ 27ರಂದು ಪಂದ್ಯಾವಳಿಯಿಂದ ಹೊರಬಿದ್ದಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿದ್ದು ಮಾರ್ಚ್ 2ರಂದು ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ತಲುಪಿದ್ದು ಇದನ್ನು ಸೆಮಿಫೈನಲ್‌ಗೆ ಮುನ್ನ ಅಭ್ಯಾಸ ಪಂದ್ಯದ ರೀತಿ ಆಡಲಿವೆ.

ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡದ ಎದುರಾಳಿ ಎನ್ನುವುದು ಮಾರ್ಚ್ 2ರಂದು ನಿರ್ಧಾರವಾಗಲಿದೆ. ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಬಿ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡವನ್ನು ಸೆಮಿಫೈನಲ್‌ನಲ್ಲಿ ಎದುರಿಸಲಿದ್ದು, ಬಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಎ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡದ ವಿರುದ್ಧ ಆಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+