Champions Trophy: ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ

ಚಾಂಪಿಯನ್ಸ್ ಟ್ರೋಫಿ ವಿಚಾರದಲ್ಲಿ ಹಠ ಹಿಡಿದು ಕೂತಿದ್ದ ಪಾಕಿಸ್ತಾನ ಕೊನೆಗೂ ಭಾರತದ ದಾರಿಗೆ ಬಂದಿದೆ. ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿ ಆಯೋಜಿಸಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕೃತ ಆದೇಶವಷ್ಟೇ ಹೊರಬೀಳಬೇಕಿದ್ದು, ಭಾರತದ ಪಂದ್ಯಗಳು, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ದುಬೈನಲ್ಲಿ ನಡೆಯುವುದು ಖಚಿತವಾಗಿದೆ.

ನವೆಂಬರ್ 29ರಂದು ಶುಕ್ರವಾರ ಐಸಿಸಿ ಬೋರ್ಡ್ ಸಭೆ ನಡೆಯಲಿದೆ. ಇದಕ್ಕೂ ಮುನ್ನವೇ ಪಾಕಿಸ್ತಾನ ಹೈಬ್ರಿಡ್ ಮಾದರಿಗೆ ಒಪ್ಪಿಕೊಂಡಿದೆ ಎನ್ನುವ ವರದಿಗಳು ಬಂದಿವೆ. ಭದ್ರತೆಯ ಕಾರಣವನ್ನು ನೀಡಿರುವ ಭಾರತ ಯಾವುದೇ ಕಾರಣಕ್ಕೂ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಲ್ಲ ಎಂದು ಹೇಳಿದೆ. ಹೈಬ್ರಿಡ್ ಮಾದರಿಯನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ ಎಂದು ಹಠ ಹಿಡಿದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೊನೆಗೂ ವರಸೆ ಬದಲಿಸಿದೆ.

Champions trophy 2025 hybrid model india matches dubai

ದುಬೈನಲ್ಲಿ ಭಾರತದ ಪಂದ್ಯಗಳು?

ಭಾರತದ ಪಂದ್ಯಗಳು ದುಬೈನಲ್ಲಿ ದುಬೈನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಕೂಡ ದುಬೈನಲ್ಲೇ ನಡೆಯಲಿದೆ. ಒಂದು ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಡೆಯಲಿದ್ದು ಇನ್ನೊಂದು ಸೆಮಿ-ಫೈನಲ್ ಲಾಹೋರ್‌ನಲ್ಲಿ ನಡೆಯಲಿದೆ. ಭಾರತವು ಫೈನಲ್ ತಲುಪದಿದ್ದರೆ ಲಾಹೋರ್ ಅನ್ನು ಪರ್ಯಾಯ ಸ್ಥಳವನ್ನಾಗಿ ನಿಗದಿ ಮಾಡಲಾಗಿದೆ.

ಭಾರತ ವಿದೇಶಾಂತ ಸಚಿವಾಲಯ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಅನುಮತಿ ನೀಡಿರಲಿಲ್ಲ. ಇದು ಪಾಕಿಸ್ತಾನವನ್ನು ಕೆರಳಿಸಿತ್ತು, ಭಾರತ ಈ ಕ್ರೀಡೆಯಲ್ಲು ರಾಜಕೀಯ ಮಾಡುತ್ತಿದೆ ಎಂದು ಕೆಂಡಾಮಂಡಲವಾಗಿತ್ತು.

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಂದ್ಯಾವಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಲ್ಲೇ ನಡೆಸಬೇಕು ಎಂದು ಆಗ್ರಹಿಸಿದ್ದರು. ಆದರೆ ಇತ್ತೀಚೆಗೆ ಇಮ್ರಾನ್ ಖಾನ್ ಬೆಂಬಲಿಗರು ಪಾಕಿಸ್ತಾನದಲ್ಲಿ ಭಾರಿ ಪ್ರತಿಭಟನೆ ನಡೆಸುತ್ತಿದ್ದು ದೇಶದಲ್ಲಿ ಭದ್ರತೆಯ ಬಗ್ಗೆ ಕಾಳಜಿಯನ್ನು ಹೆಚ್ಚಿಸಿದೆ.

ಪಾಕಿಸ್ತಾನಕ್ಕೆ ಬರುವ ತಂಡಗಳಿಗೆ ಭದ್ರತೆ ಒದಗಿಸುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸದಸ್ಯ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡುವುದು ಕಷ್ಟವಾಗಿದೆ. ಸದ್ಯ ದೇಶದಲ್ಲಿ ಪ್ರಕ್ಷುಬ್ದ ವಾತಾವರಣವಿದ್ದು, ಪ್ರತಿಭಟನೆ ಯಾವಾಗ ಮುಗಿಯುತ್ತದೆ ಎನ್ನುವ ಬಗ್ಗೆ ಯಾರಿಗೂ ಗೊತ್ತಿಲ್ಲ.

ಪಾಕಿಸ್ತಾನಕ್ಕೆ ಹೆಚ್ಚಿನ ಹಣ

ಹೈಬ್ರಿಡ್ ವ್ಯವಸ್ಥೆಯನ್ನು ಸುಗಮಗೊಳಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೋಸ್ಟಿಂಗ್ ಹಕ್ಕುಗಳ ಶುಲ್ಕದಲ್ಲಿ 30% ಹೆಚ್ಚಿನ ಪಾಲನ್ನು ಪಡೆಯಲಿದೆ. ಹೈಬ್ರಿಡ್ ಮಾದರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದ್ದು ಹೊಸ ಷರತ್ತನ್ನು ಮುಂದಿಟ್ಟಿದೆ. 2026ರಲ್ಲಿ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು ಐಸಿಸಿ ಪಾಕಿಸ್ತಾನ ತಂಡಕ್ಕೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಬೇಕು ಎಂದು ಕೇಳಿದೆ. ಮಂಡಳಿಯ ಸಭೆಯಲ್ಲಿ ಐಸಿಸಿ ಈ ವಿಷಯದ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ, ಆದರೂ ನಿರ್ಧಾರವನ್ನು ಮುಂದೂಡುವ ಸಾಧ್ಯತೆಯಿದೆ.

ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆ

ಚಾಂಪಿಯನ್ಸ್ ಟ್ರೋಫಿ 2025 ರ ವೇಳಾಪಟ್ಟಿಯನ್ನು ಶನಿವಾರ (ನವೆಂಬರ್ 30) ರಾತ್ರಿ ಅಥವಾ ಸೋಮವಾರ (ಡಿಸೆಂಬರ್ 2) ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಪಂದ್ಯದ ದಿನಾಂಕಗಳು ಮತ್ತು ಸ್ಥಳಗಳ ಬಗ್ಗೆ ಸ್ಪಷ್ಟನೆ ಸಿಗಲಿದೆ. ಡಿಸೆಂಬರ್ 6ರಂದು ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದಕ್ಕೂ ಮೊದಲು ಇದು ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಕುರಿತಂತೆ ಈಗಿನ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯುವ ಕೊನೆಯ ಸಭೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+