Champions Trophy: ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವ ಸಾಧಿಸಿದ ದಕ್ಷಿಣ ಆಫ್ರಿಕಾ
ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ಶುಭಾರಂಭ ಮಾಡಿದೆ. ಶುಕ್ರವಾರ ಕರಾಚಿಯ ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ಸುಲಭ ಗೆಲುವು ಸಾಧಿಸಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದಕ್ಕೆ ತಕ್ಕಂತೆ ಆರಂಭಿಕ ಆಟಗಾರ ರಿಯಾನ್ ರಿಕಲ್ಟನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟೋನಿ ಡೆ ಜೋರ್ಝಿ 11 ರನ್ ಗಳಿಸಿ ಔಟಾದರೆ, ನಾಯಕ ತೆಂಬಾ ಬವುಮಾ ಮತ್ತು ರಿಕಲ್ಟನ್ ಎರಡನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ಆಡಿದರು.

ತಾಳ್ಮೆಯ ಆಟವಾಡಿದ ತೆಂಬಾ ಬವುಮಾ 76 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರು. ರಿಕಲ್ಟನ್ ಮಾತ್ರ ತಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡರು. 106 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 103 ರನ್ ಗಳಿಸಿ ಮಿಂಚಿದರು. ವ್ಯಾನ್ ದರ್ ದುಸೆನ್ 46 ಎಸೆತಗಳಲ್ಲಿ 52 ರನ್ ಗಳಿಸಿದರೆ, ಏಡನ್ ಮಾರ್ಕ್ರಮ್ 36 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿ ಮಿಂಚಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 315 ರನ್ ಗಳಿಸಿತು.
ಸಾಂಘಿಕ ದಾಳಿಗೆ ಕುಸಿದ ಅಫ್ಘಾನಿಸ್ತಾನ
ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ಯಾವ ಹಂತದಲ್ಲೂ ಹೋರಾಟ ನೀಡಲೇ ಇಲ್ಲ. 43.3 ಓವರ್ ಗಳಲ್ಲೇ 208 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು. ರಹಮತ್ ಶಾ 92 ಎಸೆತಗಳಲ್ಲಿ 90 ರನ್ ಗಳಿಸುವ ಮೂಲಕ ಹೋರಾಟ ನೀಡಿದರೂ ಅವರಿಗೆ ಬೇರೆ ಯಾವ ಬ್ಯಾಟರ್ ಕೂಡ ಬೆಂಬಲ ಕೊಡಲಿಲ್ಲ.
ಕಗಿಸೋ ರಬಾಡ 3 ವಿಕೆಟ್ ಪಡೆದರೆ, ಲುಂಗಿ ಎನ್‌ಗಿಡಿ ಮತ್ತು ವಿಯಾನ್ ಮುಲ್ಡರ್ ತಲಾ 2 ವಿಕೆಟ್ ಪಡೆದರು. ಮಾರ್ಕೊ ಯಾನ್ಸನ್ ಮತ್ತು ಕೇಶವ್ ಮಹಾರಾಜ್ 1 ವಿಕೆಟ್ ಪಡೆದುಕೊಂಡರು.












Click it and Unblock the Notifications