IPL CSK 2025: ಐಪಿಎಲ್ ಪಾಯಿಂಟ್ಸ್ ಟೇಬಲ್ ಅಲ್ಲಿ ಸಿಎಸ್‌ಕೆ ಅಗ್ರ ಸ್ಥಾನ: ಹೇಗೆ ಸಾಧ್ಯ?, ಇಲ್ಲಿದೆ ಅಸಲಿ ಸತ್ಯ
IPL CSK 2025: ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಟ್ರೋಫಿ ಗೆದ್ದಿರುವ ಹಾಗೂ ಪೈಪೋಟಿ ನೀಡುವ ತಂಡಗಳಲ್ಲಿ ಸಿಎಸ್‌ಕೆ ಕೂಡ ಒಂದಾಗಿದೆ. ಇದೀಗ ಈ ಬಾರಿ ಅಂದರೆ 18ನೇ ಆವೃತ್ತಿಯಲ್ಲಿ ಪಾಯಿಂಟ್ಸ್ ಟೇಬಲ್‌ನಲ್ಲಿ ಮೊದಲನೇ ಸ್ಥಾನದಲ್ಲಿದೆ. ಆದರೂ, ಪ್ಲೇ ಆಫ್ ಪ್ರವೇಶ ಸಾಧ್ಯವಿಲ್ಲ. ಯಾಕೆ ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಎಲ್ಲಾ ಆವೃತ್ತಿಗಳಲ್ಲೂ ಉತ್ತಮವಾಗಿ ಪ್ರದರ್ಶನ ತೋರುತ್ತಿದ್ದ ಸಿಎಸ್‌ಕೆ ಈ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರುತ್ತಾ ಬಂದಿದೆ. ಇದುವರೆಗೂ ಆಡಿರುವ 12 ಪಂದ್ಯಗಳಲ್ಲಿ 9ರಲ್ಲಿ ಸೋತು ಕೇವಲ ಮೂರರಲ್ಲಿ ಮಾತ್ರ ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳೊಂದಿಗೆ ಕೆಳಗಿನಿಂದ ಮೊದಲನೇ ಸ್ಥಾನ ಭದ್ರಪಡಿಸಿಕೊಂಡಿದೆ. ಇದು ಈ ಬಾರಿ ಸಿಎಸ್‌ಕೆ ಮಾಡಿದ ಅತ್ಯದ್ಭುತ ಸಾಧನೆ.

ಈಗಾಗಲೇ 9 ಪಂದ್ಯಗಳನ್ನು ಸೋತಿರುವ ಚೆನ್ನೈ ಸೂಪ್ ಕಿಂಗ್ಸ್ ತಂಡವು ಟೂರ್ನಿಯಿಂದ ಯಾವಾಗಲೋ ಹೊರ ಬಿದ್ದಿದೆ. ಇನ್ನೂ ಬಾಕಿ ಇರುವ ಎರಡು ಪಂದ್ಯಗಳಲ್ಲೂ ಗೆದ್ದರೂ, ಸೋತರೂ ಏನು ಪ್ರಯೋಜನ ಇಲ್ಲ. ಆದರೆ, ಅಂಕಪಟ್ಟಿಯಲ್ಲಿ ಮೇಲಿನಿಂದ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಅದನ್ನು ಕಳೆಗಿಳಿಸುವ ಪ್ಲಾನ್‌ನಲ್ಲಿದೆ. ಇದು ಸಾಧ್ಯವಿಲ್ಲ. ಯಾಕಂದ್ರೆ ಈಗಾಗಲೇ ಜಿಟಿ 16 ಅಂಕಗಳನ್ನು ಪಡೆದುಕೊಂಡಿದೆ.
ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಐದು ತಂಡಗಳು ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿವೆ. ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಸಿಎಸ್‌ಕೆ ಬಹುತೇಕ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿವೆ.
ಐಪಿಎಲ್ 2025ನೇ ಆವೃತ್ತಿಯ 57ನೇ ಪಂದ್ಯದಲ್ಲಿ ಚೆನ್ನೂ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ಇದುವರೆಗೂ ಆಡಿದ 12 ಪಂದ್ಯಗಳಲ್ಲಿ ಮೂರರಲ್ಲಿ ಮಾತ್ರ ಗೆದ್ದು, 9ರಲ್ಲಿ ಸೋತು ಪಾಯಿಂಟ್ಸ್ ಟೇಬಲ್‌ನಲ್ಲಿ 6 ಅಂಕಗಳೊಂದಿಗೆ ಕೊನೇ ಸ್ಥಾನವನ್ನೇ ಭದ್ರಪಡಿಸಿಕೊಂಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿಗೆ ಬಂದಿದೆ.
ಸಿಎಸ್‌ಕೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025ರ 57ನೇ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಂಡಾಂಗಣದಲ್ಲಿ ನಡೆಯಿತು. ಟಾಸ್ ಸೋತ ಸಿಎಸ್‌ಕೆ ಬೌಲಿಂಗ್ ಮಾಡಿತು. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿ 180 ರನ್‌ಗಳ ಗುರಿ ನೀಡಿತು.
ಈ ಗುರಿ ಬೆನ್ನತ್ತಿದ ಸಿಎಸ್‌ಕೆ 19.4 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 183 ರನ್ ಕಲೆಹಾಕುವ ಮೂಲಕ ಗೆದ್ದು ಬೀಗಿತು. ಆದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದ್ದು, ಈ ಗೆಲುವು ಆಟಕ್ಕುಂಟ್ಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಮೊದಲು ಬ್ಯಾಟ್ ಮಾಡಿದ ಕೆಕೆಆರ್‌ಗೆ ಉತ್ತಮ ಆರಂಭ ಸಿಗಲಿಲ್ಲ.
ಆದರೆ, ನಂತರದ ಕ್ರಮಾಂಕದಲ್ಲಿ ಬಂದ ಅಜಿಂಕ್ಯಾ ರಹಾನೆ ಸುನಿಲ್ ನರೈನ್ ಜೊತೆ ಸೇರಿ ಎರಡನೇ ವಿಕೆಟ್‌ಗೆ 58 ರನ್‌ಗಳ ಜೊತೆಯಾಟ ಆಡಿದರು. ಆದರೆ, ಸುನೀಲ್ ನರೈನ್ 26 ರನ್‌ಗೆ ಔಟ್ ಆಗಿ ಪೆವಿಲಿಯನ್‌ನತ್ತ ನಡೆದರು. ನಂತರ ರಘುವಂಶಿ 1 ರನ್‌ಗೆ ಔಟ್ ಆಗಿ ನಿರಾಸೆ ಮೂಡಿಸಿದರು. ಅಜಿಂಕ್ಯಾ ರಹಾನೆ 33 ಎಸೆತಗಳಲ್ಲಿ 48 ರನ್ ಗಳಿಸಿದರು.
ಬಳಿಕ ಅಂಡ್ರೆ ರಸೆಲ್ 38 ಸಿಡಿಸಿದರು. ಕೊನೆಯಲ್ಲಿ ಕನ್ನಡಿಗ ಮನಿಷ್ ಪಾಂಡೆ 36 ರನ್ ಗಳಿಸಿ ನಾಟೌಟ್ ಆಗಿ ಉಳಿದದರು. ಹೀಗೆ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ಆದರೆ, ಸಿಎಸ್‌ಕೆ ತಂಡವು 19.4 ಓವರ್‌ನಲ್ಲಿ 183 ಕಲೆಹಾಕುವ ಮೂಲಕ ಗೆದ್ದು ಬೀಗಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications