India vs Australia: ಭಾರತ ತಂಡಕ್ಕೆ ಮಹತ್ವದ ಸಲಹೆ ಕೊಟ್ಟ ಚೇತೇಶ್ವರ್ ಪೂಜಾರ
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್‌ನಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಇದೀಗ ಎರಡನೇ ಟೆಸ್ಟ್‌ಗೆ ಸಜ್ಜಾಗುತ್ತಿದೆ. ಎರಡನೇ ಟೆಸ್ಟ್ ಡಿಸೆಂಬರ್ 6ರಂದು ಆರಂಭವಾಗಲಿದ್ದು, ಭಾರತದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆಯಾಗಲಿದೆ. ರೋಹಿತ್ ಶರ್ಮಾ ವಾಪಸ್ ಬಂದಿದ್ದು ಎರಡನೇ ಟೆಸ್ಟ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಮತ್ತು ಬ್ಯಾಟಿಂಗ್ ಆರ್ಡರ್ ಹೇಗಿರಬೇಕು ಎನ್ನುವ ಬಗ್ಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರಾ ಮಹತ್ವದ ಸಲಹೆ ನೀಡಿದ್ದಾರೆ.
ನಾಯಕ ರೋಹಿತ್ ಶರ್ಮಾ ವಾಪಸ್ ಬಂದರೂ ಎರಡನೇ ಟೆಸ್ಟ್‌ನಲ್ಲಿ ಕೂಡ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಅವರೇ ಇನ್ನಿಂಗ್ಸ್ ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ. ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಪೂಜಾರಾ ನೀಡಿದ ಸಲಹೆ ಏನು?
ಪರ್ತ್ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಶತಕ ಸಿಡಿಸುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರೂ, ಕೆಎಲ್ ರಾಹುಲ್ ನೀಡಿದ ಕೊಡುಗೆಯನ್ನು ಮರೆಯಬಾರದು ಎಂದಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 26 ರನ್ ಗಳಿಸಿದ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ 77 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ಸಿಗುವಂತೆ ನೋಡಿಕೊಂಡರು.
ಎರಡನೇ ಮಗುನಿನ ತಂದೆಯಾಗಿರುವ ರೋಹಿತ್ ಶರ್ಮಾ ಮೊದಲ ಟೆಸ್ಟ್‌ನಲ್ಲಿ ಆಡಿರಲಿಲ್ಲ. ಇದೀಗ ಭಾರತ ತಂಡವನ್ನು ಸೇರಿಕೊಂಡಿದ್ದು ಎರಡನೇ ಟೆಸ್ಟ್‌ನಲ್ಲಿ ಆಡಲು ಸಜ್ಜಾಗಿದ್ದಾರೆ. ರೋಹಿತ್ ಶರ್ಮಾ ಸಾಮಾನ್ಯವಾಗಿ ಆರಂಭಿಕರಾಗಿ ಆಡುತ್ತಾರೆ, ಕೆಎಲ್ ರಾಹುಲ್ ಮತ್ತೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾ ಎನ್ನುವ ಪ್ರಶ್ನೆಗೆ ಪೂಜಾರಾ ಉತ್ತರ ನೀಡಿದ್ದಾರೆ.
ಮೊದಲ ಟೆಸ್ಟ್‌ನ ಬ್ಯಾಟಿಂಗ್ ಕ್ರಮಾಂಕವೇ ಮುಂದುವರೆಸಬೇಕು ಎಂದು ಸಲಹೆ ನೀಡಿರುವ ಪೂಜಾರಾ, ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಇಳಿದರೆ, ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ಹೇಳಿದ್ದಾರೆ. ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರೆ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು ಎಂದು ಸಲಹೆ ನೀಡಿದ್ದಾರೆ.
ದೇವದತ್ ಪಡಿಕ್ಕಲ್ ಅವರು ನಂ. 3 ರಲ್ಲಿ ದೊಡ್ಡ ಪ್ರಮಾಣದಲ್ಲಿ ವಿಫಲರಾಗಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ಶುಭಮನ್ ಗಿಲ್ ಆಡುವ ಬಗ್ಗೆ ಇನ್ನೂ ಯಾವುದೇ ಸುದ್ದಿ ಸಿಕ್ಕಿಲ್ಲ, ಗಿಲ್ ಫಿಟ್ ಆದರೆ ನಂಬರ್ 5ರಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಪೂಜಾರ ಹೇಳಿದರು.












Click it and Unblock the Notifications