ಎಂ.ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐನಿಂದ ಹೊರಬಿತ್ತು ಮಹತ್ವದ ನಿರ್ಧಾರ
ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು 17 ವರ್ಷಗಳ ಬಳಿಕ ಮೊದಲ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಈ ಹಿನ್ನೆಲೆ ಜೂನ್ ಅಂದಿನ ದಿನದ ರಾತ್ರಿ ಬರೀ ಕರ್ನಾಟಕ ಅಲ್ಲದೆ, ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ಮುಳುಗಿಬಿಟ್ಟಿತ್ತು. ಮಾರನೇ ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಿದ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಈ ದುರಂತ ತಂಡಕ್ಕೆ ಕಪ್ಪು ಚುಕ್ಕೆಯಾಗಿಬಿಟ್ಟಿತ್ತು. ಇನ್ನು ಇದೀಗ ಬಿಸಿಸಿಐ ಇಂತಹ ದುರಂತಗಳಿಗೆ ಕಡಿವಾಣ ಹಾಕಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಆರ್‌ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಅಂದೇ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡರು. ಈ ಸಂಬಂಧ ನಗರ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ, ಆರ್‌ಸಿಬಿ ಹಾಗೂ ಕೆಎಸ್‌ಸಿಎ ವಿರುದ್ಧರೂ ಎಫ್‌ಐಆರ್ ದಾಖಲಿಸಲಾಗಿದ್ದು, ವಿರಾಟ್ ಕೊಹ್ಲಿ ಮೇಲೂ ದೂರು ನೀಡಿದ್ದರು.

ಬಳಿಕ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆದೇಶ ಹೊರಡಿಸಿತ್ತು. ಈ ನಡುವೆಯೇ ಇದೀಗ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ನಿಯಂತ್ರಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮುಂದಿನ ದಿನಗಳಗಳಲ್ಲಿ ಈ ರೀತಿಯ ದುರಂತಗಳು ಸಂಭವಿದಂತೆ ಬಿಸಿಸಿಐ ಹೊಸ ನೀತಿಯನ್ನು ರೂಪಿಸುವುದಾಗಿ ಘೋಷಣೆ ಮಾಡಿದೆ. ಇದಕ್ಕಾಗಿ, ಮಂಡಳಿಯು ಹೊಸ ಸಮಿತಿಯನ್ನು ರಚಿಸಿದ್ದು, ಸಂಭ್ರಮಾಚರಣೆಯ ಮೆರವಣಿಗೆಯ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದೆ. ಶನಿವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಹೊಸ ಮಾರ್ಗಸೂಚಿಯನ್ನು ರೂಪಿಸುವ ಜವಾಬ್ದಾರಿಯನ್ನು 3 ಸದಸ್ಯರ ಸಮಿತಿಗೆ ವಹಿಸಲಾಗಿದೆ.
ಶನಿವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇದರಲ್ಲಿ ಪ್ರಮುಖ ನಿರ್ಧಾರ ಎಂದರೆ ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿದೆ. ಸಭೆಯ ಬಳಿಕ ಬಿಸಿಸಿಐ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಮೊದಲನೆಯದಾಗಿ ಬೆಂಗಳೂರು ಕಾಲ್ತುಳಿತ ಮತ್ತು ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದೆ. ಜೊತೆಗೆ ಬೆಂಗಳೂರು ಕಾಲ್ತುಳಿತದಂತಹ ದುರಂತಗಳು ಮುಂದಿನ ದಿನಗಳಲ್ಲಿ ನಡೆಯದಂತೆ ನೋಡಿಕೊಳ್ಳಲು ಮಂಡಳಿಯು ಹಿರಿಯ ಅಧಿಕಾರಿಗಳ ಸಮಿತಿಯನ್ನ ರಚನೆ ಮಾಡಿದೆ.
ಇನ್ನು ಸಭೆಯಲ್ಲಿ ಭಾರತ-ನ್ಯೂಜಿಲೆಂಡ್ ಸರಣಿಗೆ ಸ್ಥಳ ನಿಗದಿ ಮಾಡಲಾಯಿತು. ಮೊದಲ ಏಕದಿನ 2026ರ ಜನವರಿ11ಕ್ಕೆ ಬರೋಡಾದಲ್ಲಿ ನಡೆಯಲಿದೆ. ಜನವತಿ 14 ರಾಜ್‌ಕೋಟ್, ಜನವರಿ 18ರಂದು ಇಂದೋರ್‌ನಲ್ಲಿ ಮತ್ತೆರಡು ಪಂದ್ಯಗಳು ನಿಗದಿ ಆಗಿವೆ. ಟಿ20 ಸರಣಿಯ 5 ಪಂದ್ಯಗಳಿಗೆ ನಾಗ್ಪುರ (ಜನವರಿ 21), ರಾಯ್ಪರ (ಜನವರಿ 23), ಗುವಾಹಟಿ (ಜನವರಿ 25), ವಿಶಾಖಪಟ್ಟಣ (ಜನರಿ 28), ತಿರುವನಂತಪುರಂ (ಜನವರಿ 31) ಆತಿಥ್ಯ ವಹಿಸಲಿವೆ ಎಂದು ತಿಳಿಸಲಾಗಿದೆ.












Click it and Unblock the Notifications