ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೋಚಕ ಕ್ರಿಕೆಟ್ ಮ್ಯಾಚ್‌ ನೆನಪಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಸೆ. 09: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರೋಚಕ ಕ್ರಿಕೆಟ್‌ ಮ್ಯಾಚ್‌ಗಳನ್ನು ನೋಡಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೆನಪಿಸಿಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ಕೊಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರಿಕೆಟ್ ಕುರಿತು ತಮಗಿರುವ ಆಸಕ್ತಿಯನ್ನು ಹಂಚಿಕೊಂಡಿದ್ದಾರೆ.

ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

"ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ ಕ್ಷೇತ್ರದಲ್ಲಿ ಕೆ.ಎಸ್.ಸಿ.ಎ ತನ್ನ ಪ್ರಭಾವವನ್ನು ಬೀರಿದೆ. ಕ್ರಿಕೆಟ್ ಪ್ರಪಂಚದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಭಾರತ ಮಾತ್ರವಲ್ಲದೆ ವಿವಿಧ ದೇಶಗಳಲ್ಲಿ ವಿಶೇಷ ಸ್ಥಾನವಿದೆ. ಇದರ ಶ್ರೇಯಸ್ಸು ಕೆ.ಎಸ್.ಸಿ.ಎ ಗೆ ಸೇರಬೇಕು" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಿರೋ ಕಪ್ ನೆನಪಿಸಿಕೊಂಡ ಸಿಎಂ ಬೊಮ್ಮಾಯಿ!

ಹಿರೋ ಕಪ್ ನೆನಪಿಸಿಕೊಂಡ ಸಿಎಂ ಬೊಮ್ಮಾಯಿ!

ಕೆ.ಎಸ್.ಸಿ.ಎ ಗೆ ಬಹಳ ದೊಡ್ಡ ಇತಿಹಾಸವಿದೆ. ಕ್ರಿಕೆಟ್ ದಿಗ್ಗಜರೆಲ್ಲಾ ಇಲ್ಲಿ ಆಟ ಆಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ರೋಚಕ ಕ್ರಿಕೆಟ್ ಪಂದ್ಯಗಳನ್ನು ಈ ಹಿಂದೆ ಕೆ.ಎಸ್.ಸಿ.ಎ.ನಲ್ಲಿ ವೀಕ್ಷಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆನಪು ಮಾಡಿಕೊಂಡಿದ್ದಾರೆ.


ಇಂದು ಕ್ರೀಡಾಂಗಣದಲ್ಲಿ ಸರ್ವ ಸೌಲಭ್ಯಗಳೂ ಇವೆ. ಇಂದು ಯೂನಿಪೋಲ್ ನಿರ್ಮಿಸಿ ಅಂತರರಾಷ್ಟ್ರೀಯ ಮಟ್ಟದ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.ಹಳೇ ಚಿತ್ರಗಳನ್ನು ಪ್ರದರ್ಶಿಸಿರುವುದು ಕ್ರಿಕೆಟ್ ಚರಿತ್ರೆಯನ್ನು ಸ್ಮರಿಸಿದಂತಾಗುತ್ತದೆ. ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ಕೆ.ಎಸ್.ಸಿ.ಎ.ನಲ್ಲಿ ಆತ್ಮೀಯತೆ ಇದೆ!

ಕೆ.ಎಸ್.ಸಿ.ಎ.ನಲ್ಲಿ ಆತ್ಮೀಯತೆ ಇದೆ!

ಇದೇ ಸಂದರ್ಭದಲ್ಲಿ ಕ್ರಿಕೆಟ್ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಕೊಡುಗೆಯನ್ನು ಬಸವರಾಜ ಬೊಮ್ಮಾಯಿ ನೆನಪಿಸಿದ್ದಾರೆ. "ರೋಜರ್ ಬಿನ್ನಿ ಕ್ರಿಕೆಟ್ ಅವರು ಅವರು ಕ್ರಿಕೆಟಿಗರಾಗಿ ಹಾಗೂ ಆಡಳಿತಗಾರರಾಗಿ ಅತ್ಯುತ್ತಮ ಕೊಡುಗೆ ನೀಡಿದ್ದಾರೆ" ಎಂದು ಹೇಳಿದ್ದಾರೆ

"ಕೆ.ಎಸ್.ಸಿ.ಎ ನಲ್ಲಿ ಆತ್ಮೀಯತೆ ಇದ್ದು, ಉತ್ತಮ ವಾತಾವರಣವಿದೆ. ಮಾಜಿ ಕ್ರಿಕೆಟಿಗರ ಬಗ್ಗೆ ಗೌರವ, ಮನ್ನಣೆ ಸಹ ಇರುವುದು ಒಂದು ಅತ್ಯುತ್ತಮ ಪರಂಪರೆ ಎಂದರು. ಹುಬ್ಬಳ್ಳಿಯಲ್ಲಿ ಅತ್ಯುತ್ತಮ ಕ್ರೀಡಾಂಗಣ ನಿರ್ಮಾಣವಾಗಿದ್ದು, ಅಲ್ಲಿ ಒಂದು ಅಂತರರಾಷ್ಟ್ರೀಯ ಪಂದ್ಯವನ್ನು ಏರ್ಪಡಿಸುವುದನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದ ಮುಖ್ಯಮಂತ್ರಿ ಬೊಮ್ಮಾಯಿ, ಕೆ.ಎಸ್.ಸಿ.ಎ ಬ್ರಾಂಡ್ ಬೆಂಗಳೂರಿನ ಮೌಲ್ಯವನ್ನು ಹೆಚ್ಚಿಸುತ್ತಿದೆ ಎಂದಿದ್ದಾರೆ.

ಕೆ.ಎಸ್.ಸಿ.ಎ ಕ್ರೀಡಾಂಗಣ ವೀಕ್ಷಣೆಗೆ ಶುಲ್ಕ

ಕೆ.ಎಸ್.ಸಿ.ಎ ಕ್ರೀಡಾಂಗಣ ವೀಕ್ಷಣೆಗೆ ಶುಲ್ಕ

ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಶುಲ್ಕ ವಿಧಿಸುವ ಮಾದರಿಯಲ್ಲಿಯೇ ಕೆ.ಎಸ್.ಸಿ.ಎ ಕ್ರೀಡಾಂಗಣ ವೀಕ್ಷಣೆಗೆ ಶುಲ್ಕ ವಿಧಿಸಿದರೆ ಆದಾಯವೂ ಬರುತ್ತದೆ‌‌. ಕ್ರೀಡಾಂಗಣವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ನವೀನ ಆಲೋಚನೆಗಳನ್ನು ಕಾರ್ಯಗತ ಗೊಳಿಸುವಂತೆ ಆಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಕ್ರಮ!

ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಕ್ರಮ!

ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ಯಾಟಿರ್ ಒಲಿಂಪಿಕ್ಸ್‌ಗಾಗಿ ತಯಾರಿ ಆರಂಭಿಸಲಾಗಿದೆ ಎಂದು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕ್ರೀಡಾ ಮತ್ತು ರೇಷ್ಮೆ ಸಚಿವ ನಾರಾಯಣಗೌಡ, ಮುನಿರತ್ನ, ಕೆ.ಎಸ್.ಸಿ.ಎ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಸಂತೋಷ್ ಮೆನನ್, ವಿನಯ ಮೃತ್ಯುಂಜಯ ಮೊದಲಾದವರು ಉಪಸ್ಥಿತರಿದ್ದರು.

Recommended Video

ನೀವು ಧರ್ಮಸ್ಥಳಕ್ಕೆ ಹೋಗಬೇಕಾ ? ಹಾಗಾದ್ರೆ ಈ ಸ್ಟೋರಿ ನೋಡಿ | Oneindia Kannada

English summary
Chief Minister Basavaraj Bommai on Thursday recalled watching the exciting cricket matches at the Chinnaswamy Stadium in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X