ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ಯಡಿಯೂರಪ್ಪ ಸನ್ಮಾನ!

|
Google Oneindia Kannada News

ಬೆಂಗಳೂರು, ಜು. 14: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಕ್ರೀಡಾಪಟುಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಿದ್ದಾರೆ. ಒಲಂಪಿಕ್ಸ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಪ್ರತಿ ಕ್ರೀಡಾಪಟುವಿಗೆ 10 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಕೊಡುತ್ತಿದೆ. ಸಾಂಕೇತಿಕವಾಗಿ ಈಜು ಪಟು ಶ್ರೀಹರಿ ನಟರಾಜ್ ಅವರನ್ನು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 10 ಲಕ್ಷ ರೂಪಾಯಿಗಳ ಪ್ರೋತ್ಸಾಹಧನದ ಚೆಕ್‌ ವಿತರಿಸಿ ಶುಭ ಹಾರೈಸಿದರು.

"ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ 120 ಕ್ರೀಡಾಪಟುಗಳ ಪೈಕಿ ರಾಜ್ಯದ ಈಜು ಪಟು ಶ್ರೀಹರಿ ನಟರಾಜ್, ಈಕ್ವೆಸ್ಟ್ರಿಯನ್ ಪಟು ಫೌವಾದ್ ಮಿರ್ಜಾ ಹಾಗೂ ಗಾಲ್ಫ್‌ ಆಟಗಾರ್ತಿ ಅದಿತಿ ಅಶೋಕ್ ಸೇರಿದ್ದಾರೆ ಎಂಬುದು ಹೆಮ್ಮೆ ಪಡುವ ವಿಚಾರ. ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಜಯಶಾಲಿಯಾಗುವ ಮೂಲಕ ದೇಶದ ಕೀರ್ತಿ ಹೆಚ್ಚಿಸಲಿ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಈಜುಪಟು ಶ್ರೀಹರಿ ನಟರಾಜ್ ಹಾಗೂ ಅವರ ತಾಯಿ ಅವರನ್ನು ಸನ್ಮಾನಿಸಲಾಯಿತು.

CM Yeddyurappa Wishes State Athletes Participating in Tokyo olympics

"ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದ್ದು, ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯ ಒದಗಿಸಲು ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಿ ಅತ್ಯುತ್ತಮ ದರ್ಜೆಯ ಸವಲತ್ತುಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುವುದು. ದೇವನಹಳ್ಳಿಯಲ್ಲಿ ಫುಟ್‍ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಭೂತ ಸೌಲಭ್ಯಗಳನ್ನು ಸೃಜಿಸಿ ಮಿಷನ್ ಒಪಂಪಿಕ್ಸ್ ಗೆ ಸಿದ್ಧಗೊಳಿಸಲಾಗುವುದು, ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು" ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ವಿವರಿಸಿದರು.

CM Yeddyurappa Wishes State Athletes Participating in Tokyo olympics

ಕ್ರೀಡಾ ಸಚಿವ ನಾರಾಯಣ ಗೌಡ, ಇಂಡಿಯನ್ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.

English summary
Chief Minister BS Yeddyurappa Wishes State Athletes Participating in Tokyo olympics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X