ಕೋಚ್ ಗಂಭೀರ್, ರಿಷಭ್ ನಡುವಿನ ಮುನಿಸು ತಣ್ಣಗಾಗಿಲ್ವಾ?
ಭಾರತ ಹಾಗೂ ಇಂಗ್ಲೆಂಡ್ ನಡುವೆ ಆಂಡರ್ಸನ್-ತೆಂಡೂಲ್ಕರ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಸೋಲು ಕಂಡಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿ ಇತಿಹಾಸ ಬರೆದರು. ಟೀಮ್ ಇಂಡಿಯಾದ ಪರ 5 ಶತಕಗಳು ಈ ಪಂದ್ಯದಲ್ಲಿ ದಾಖಲಾದ್ರೂ ಪಂದ್ಯವನ್ನು ಗಿಲ್ ಪಡೆ ಕೈ ಚೆಲ್ಲಿತು. ಟೀಮ್ ಇಂಡಿಯಾ ಎರಡನೇ ಟೆಸ್ಟ್‌ಗೆ ಸಿದ್ಧತೆಯನ್ನು ನಡೆಸುತ್ತಿದೆ ಈ ವೇಳೆ ಅಭಿಮಾನಿಗಳಲ್ಲಿ ಒಂದು ಸಣ್ಣ ಪ್ರಶ್ನೆ ಹುಟ್ಟಿಕೊಂಡಿದೆ. ಕೋಚ್ ಗಂಭೀರ್, ರಿಷಭ್ ನಡುವೆ ಜಿದ್ದು ಕಡಿಮೆ ಆಗಿಲ್ವಾ?
ರಿಷಭ್ ಪಂತ್ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಸಂಬಂಧಗಳು ಸರಿಯಾಗಿಲ್ಲ ಎಂಬುದು ಹೇಳುವ ಅವಶ್ಯಕತೆ ಇಲ್ಲ. ಚಾಂಪಿಯನ್ಸ್ ಟ್ರೋಫಿಯ ವೇಳೆ ಗೌತಮ್ ಗಂಭೀರ್ ಕೆಎಲ್ ರಾಹುಲ್ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಹೇಳಿದ್ದರು. ಈ ಮೂಲಕ ರಿಷಭ್ ಪಂತ್ ಅವರನ್ನು ಚಾಂಪಿಯನ್ಸ್ ಟ್ರೋಫಿಯುದಕ್ಕೂ ಬೆಂಚ್ ಮೇಲೆ ಕೂರಿಸಿದ್ದರು. ಈ ವೇಳೆ ಪಂತ್ ಸಹ ತಮ್ಮ ಸಿಟ್ಟನ್ನು ಸಾಮಾಜಿಕ ತಾಣದಲ್ಲಿ ಹೊರ ಹಾಕಿದ್ದರು. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವುದು ಈಗ ಇತಿಹಾಸ.

ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಗಿದು ಸರಿ ಸುಮಾರು 6 ತಿಂಗಳುಗಳೇ ಕಳೆದಿವೆ. ಈಗ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ವೇಳೆ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಇಬ್ಬರೂ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಈ ಬಗ್ಗೆ ಇತ್ತೀಚಿಗೆ ಗೌತಮ್ ಗಂಭೀರ್ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ ವೇಳೆ ರಿಷಭ್ ಹಾಗೂ ಗಂಭೀರ್ ನಡುವಿನ ಮುನಿಸು ಇನ್ನು ತಣ್ಣಗೆ ಆಗಿಲ್ಲ ಎಂಬುದು ತಿಳಿಯುತ್ತದೆ.
ತಣ್ಣಗಾಗದ ಮುನಿಸು
ವೈಯಕ್ತಿಕ ಪ್ರದರ್ಶನಕ್ಕಿಂತ ತಂಡದ ಪ್ರದರ್ಶನ ಇಂಪಾರ್ಟೆಂಟ್. ಜಸ್ಪ್ರೀತ್ ಬುಮ್ರಾ ಸಹ ಈ ಪಂದ್ಯದಲ್ಲಿ ಐದು ವಿಕೆಟ್ ಕಬಳಿಸಿದರು. ಅಲ್ಲದೆ ಮೇಲ್ಪಂಕ್ತಿಯ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾದರು. ಆದರೆ ಕೊನೆಯಲ್ಲಿ ಪಂದ್ಯದ ಫಲಿತಾಂಶ ಏನಾಯಿತು ಎಂಬುದೇ ಮುಖ್ಯ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠೀಯಲ್ಲಿ ರಿಷಭ್ ಪಂತ್ ಎರಡೂ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದರು. ಏನು ಹೇಳುತ್ತೀರಿ ಎಂದು ಪ್ರಶ್ನೆ ಕೇಳಲಾಯಿತು. ಆಗ ಗಂಭೀರ್ ನೀವು ಹೀಗೆ ಹೇಳುತ್ತಿದ್ದರೆ ಅದು ಒಳ್ಳೆಯದು. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ನಾಯಕನಾಗಿ ಚೊಚ್ಚಲ ಪಂದ್ಯದಲ್ಲೇ ಶುಭಮನ್ ಗಿಲ್ ಶತಕ ಬಾರಿಸಿದರು. ಈ ಬಗ್ಗೆಯೂ ಮಾತನಾಡಬೇಕು. ನನಗೆ ಅದು ಸಹ ಇಷ್ಟವಾಗುತ್ತದೆ. ಕೆಎಲ್ ರಾಹುಲ್ ಶತಕ ಬಾರಿಸಿದ್ದಾರೆ. ನೀವು ಪ್ರಶ್ನೆಯನ್ನು ಇನ್ನು ಚೆನ್ನಾಗಿ ಕೇಳಬಹುದಿತ್ತು ಎಂದು ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications