ಟೀಮ್ ಇಂಡಿಯಾದ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್‌ಗೆ ಭಾರತ ರತ್ನ ನೀಡುವಂತೆ ಆಗ್ರಹ
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಚಾಂಪಿಯನ್ ಪಟ್ಟವನ್ನು ತೊಡಿಸುವಲ್ಲಿ ಶ್ರಮಿಸಿರುವ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಕ್ಕೆ ಈಗ ಎಲ್ಲಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. 2007ರ ಬಳಿಕ ಬ್ಲ್ಯೂ ಬಾಯ್ಸ್ ಚಾಂಪಿಯನ್ ಪಟ್ಟಕ್ಕೇರುವಂತೆ ಮಾಡಿದ ಮುಂದಾಳು ರಾಹುಲ್ ದ್ರಾವಿಡ್ ಅವರಿಗೆ ದೇಶದ ಅತ್ಯುನ್ನತ ಗೌರವವನ್ನು ನೀಡುವಂತೆ ಆಗ್ರಹ ಕೇಳಿ ಬಂದಿದೆ.
ಟೀಮ್ ಇಂಡಿಯಾದ ಕೋಚ್ ಸ್ಥಾನವನ್ನು ಅಲಂಕರಿಸಿದ ಬಳಿಕ ರಾಹುಲ್ ಗರಡಿಯಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿದೆ. ಸೋತಾಗ ತಂಡವನ್ನು ದೂಷಿಸದೇ, ಗೆದ್ದಾಗ ಮೈಮರೆಯದೇ ಮುಂದಿನ ಸರಣಿಯ ಮೇಲೆ ದಿ ವಾಲ್ ದೃಷ್ಟಿ ನೆಡುತ್ತಿದ್ದರು. ಇವರು ಈ ಕಾರ್ಯಕ್ಷಮತೆ ಈಗ ಅವರನ್ನು ಎತ್ತರಕ್ಕೆ ತಂದು ನಿಲ್ಲಿಸಿದೆ. ಟೀಮ್ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಕೋಚ್‌ಗೆ ತವರಿನಲ್ಲಿ ಅಭುತ್ ಪೂರ್ವ ಸ್ವಾಗತ ನೀಡಲಾಯಿತು. ಈ ಬೆನ್ನಲ್ಲೆ ಹಿರಿಯ ಆಟಗಾರರು ಅಭಿಮಾನಿಗಳು ರಾಹುಲ್‌ಗೆ ಸರ್ಕಾರ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದಾರೆ.

ಸರ್ಕಾರಕ್ಕೆ ಗವಾಸ್ಕರ್ ಒತ್ತಾಯ
ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ರಾಹುಲ್ ದ್ರಾವಿಡ್‌ಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿದ್ದಾರೆ. ಸರ್ಕಾರವು ರಾಹುಲ್ ದ್ರಾವಿಡ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಿದರೆ ಅದು ಸೂಕ್ತವಾಗಿರುತ್ತದೆ ಮತ್ತು ಅವರು ಅದಕ್ಕೆ ಅರ್ಹರು. ಅವರು ಶ್ರೇಷ್ಠ ಆಟಗಾರ ಮತ್ತು ನಾಯಕರಾಗಿದ್ದರು. ವೆಸ್ಟ್ ಇಂಡೀಸ್‌ನಲ್ಲಿ ಸರಣಿ ಗೆಲ್ಲುವುದು ಸುಲಭವಲ್ಲ. ಅವರು ಇಂಗ್ಲೆಂಡ್‌ಗೆ ಹೋಗಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಗೆದ್ದ ಮೂರನೇ ಭಾರತೀಯ ನಾಯಕರಾಗಿದ್ದರು ಮತ್ತು ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಹೊಸ ಪ್ರತಿಭೆಗಳನ್ನು ಪೋಷಿಸುವ ಉತ್ತಮ ಕೆಲಸ ಮಾಡಿದರು ಮತ್ತು ಹಿರಿಯ ತಂಡದ ಉತ್ತಮ ತರಬೇತುದಾರರಾಗಿದ್ದರು ಎಂದು ತಿಳಿಸಿದ್ದಾರೆ.
ಕೋಚ್ ಆಗಿ ರಾಹುಲ್ ಅನುಭವ
ಟೀಮ್ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ರಾಹುಲ್ ದ್ರಾವಿಡ್‌ಗೂ ಸ್ಥಾನ. ನಿವೃತ್ತಿಯ ನಂತರ 2014 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ಮಾರ್ಗದರ್ಶಕರಾಗಿದ್ದಾಗ ಅವರ ಕೋಚಿಂಗ್ ವೃತ್ತಿಜೀವನ ಪ್ರಾರಂಭಿಸಿದರು. 2015 ರಲ್ಲಿ, ಅವರು ಅಂಡರ್-19 ಮತ್ತು ಭಾರತ-ಎ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡರು.

ದ್ರಾವಿಡ್ ಕೋಚಿಂಗ್ ಅಡಿಯಲ್ಲಿ 19 ವರ್ಷದೊಳಗಿನವರ ತಂಡ 2016 ರ ವಿಶ್ವಕಪ್‌ನಲ್ಲಿ ಫೈನಲ್ ತಲುಪಿತು, ಆದರೆ ಗೆಲ್ಲಲು ಸಾಧ್ಯವಾಗಲಿಲ್ಲ, ಆದರೆ 2 ವರ್ಷಗಳ ನಂತರ, ಟ್ರೋಫಿ ಎತ್ತಿಹಿಡಿದ ನಂತರ ಟೀಮ್ ಇಂಡಿಯಾ ಸಂಭ್ರಮಿಸಿತು. ಈ ಅವಧಿಯಲ್ಲಿ, ಅವರು ರಿಷಬ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಇಶಾನ್ ಕಿಶನ್ ಅವರಂತಹ ಭವಿಷ್ಯದ ತಾರೆಗಳನ್ನು ಬೆಳೆಸಿದರು. ಅಂತಿಮವಾಗಿ 2019 ರಲ್ಲಿ, ಅವರು ಹಿರಿಯ ಭಾರತೀಯ ತಂಡದ ಕೋಚ್ ಆಗಿ ನೇಮಕಗೊಂಡರು.
ಕ್ರಿಕೆಟ್ ವೃತ್ತಿ
ದ್ರಾವಿಡ್ ಅವರ ವೈಯಕ್ತಿಕ ವೃತ್ತಿಜೀವನ ಅದ್ಭುತ. ಅವರು 164 ಟೆಸ್ಟ್ ಪಂದ್ಯಗಳಲ್ಲಿ 13,288 ರನ್ ಗಳಿಸಿದ್ದಾರೆ. ರಾಹುಲ್ 344 ಏಕದಿನ ಪಂದ್ಯಗಳಲ್ಲಿ 10,889 ರನ್ ಗಳಿಸಿದ್ದಾರೆ. ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಅತಿ ಹೆಚ್ಚು ನರ್ ಬಾರಿಸಿದ ವಿಶ್ವದ ಏಳನೇ ಆಟಗಾರ. ಅವರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 48 ಶತಕಗಳು ಮತ್ತು 146 ಅರ್ಧಶತಕಗಳನ್ನು ಹೊಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications