ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking : ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳೊಂದಿಗೆ ಮೋದಿ ಸಂವಾದ

|
Google Oneindia Kannada News

ನವದೆಹಲಿ, ಜುಲೈ 20: ಪ್ರಧಾನಿ ನರೇಂದ್ರ ಮೋದಿ ಬರ್ಮಿಂಗ್‌ ಹ್ಯಾಂನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ (CWG) 2022ಕ್ಕೆ ತಯಾರಾಗಿರುವ ಭಾರತೀಯ ತಂಡದೊಂದಿಗೆ ಬುಧವಾರ (ಜುಲೈ 20) ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ.

ಪ್ರಮುಖ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೊದಲು ಕ್ರೀಡಾಪಟುಗಳನ್ನು ಪ್ರೇರೇಪಿಸುವ ಕಾರಣಕ್ಕಾಗಿ ಸ್ಫರ್ಧಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಲಿದ್ದಾರೆ. ಇದು ನರೇಂದ್ರ ಮೋದಿಯವರ ನಿರಂತರ ಪ್ರಯತ್ನದ ಒಂದು ಭಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷವು, ಟೋಕಿಯೊ 2020 ರ ಒಲಿಂಪಿಕ್ಸ್‌ಗೆ ತಯಾರಾಗಿದ್ದ ಭಾರತೀಯ ಕ್ರೀಡಾಪಟುಗಳ ತಂಡ ಮತ್ತು ಟೋಕಿಯೊ 2020ರ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಹೊರಟ್ಟಿದ್ದ ಪ್ಯಾರಾ-ಅಥ್ಲೀಟ್‌ಗಳ ತಂಡದೊಂದಿಗೂ ಪ್ರಧಾನಿ ಮೋದಿ ಸಂವಾದ ನಡೆಸಿದ್ದರು.

Common wealth games 2022: Narendra modi to interact with Indian Athletes

ಕ್ರೀಡಾಕೂಟಗಳು ನಡೆಯುತ್ತಿದ್ದ ಸಂದರ್ಭದಲ್ಲೂ ಪ್ರಧಾನಮಂತ್ರಿಯವರು ಕ್ರೀಡಾಪಟುಗಳ ಪ್ರಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ, ಅವರಿಗೆ ಮತ್ತಷ್ಟು ಹುಮ್ಮಸ್ಸು ನೀಡಿದ್ದರು. ಅನೇಕ ಸಂದರ್ಭಗಳಲ್ಲಿ ವೈಯಕ್ತಿಕವಾಗಿ ಕ್ರೀಡಾಪಟುಗಳನ್ನು ಅವರ ಯಶಸ್ಸು ಮತ್ತು ಪ್ರಾಮಾಣಿಕ ಪ್ರಯತ್ನಗಳಿಗೆ ಅಭಿನಂದಿಸಿದ್ದಾರೆ. ಹಲವು ಬಾರಿ ಕ್ರೀಡಾಕೂಟಗಳಿಂದ ಹಿಂತಿರುಗಿದ ನಂತರ ಪ್ರಧಾನ ಮಂತ್ರಿ ಅವರು ಕ್ರೀಡಾಪಟುಗಳನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ 2022 ಅನ್ನು ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28 ರಿಂದ ಆಗಸ್ಟ್ 8 ರವರೆಗೆ ಆಯೋಜಿಸಲಾಗಿದೆ. 19 ಕ್ರೀಡಾ ವಿಭಾಗಗಳಲ್ಲಿ 141 ಈವೆಂಟ್‌ಗಳಲ್ಲಿ ಭಾಗವಹಿಸುವ ಒಟ್ಟು 215 ಕ್ರೀಡಾಪಟುಗಳು CWG 2022 ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಾರೆ.

ಈ ಬಾರಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹಿರಿಯ ಬಾಕ್ಸರ್ ಮೇರಿ ಕೋಂ ಹೊರ ನಡೆದಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಎಂಸಿ ಮೇರಿ ಕೋಮ್ ಅವರು ಟೂರ್ನಮೆಂಟ್ ನಿಂದ ಅನಿವಾರ್ಯವಾಗಿ ಹೊರ ಬೀಳಬೇಕಾಗಿದೆ.

Recommended Video

Jhulan Goswamiಯ ಬೆಂಕಿ ಬೌಲಿಂಗ್ ಗೆ KL Rahul ಬ್ಯಾಟ್ ಬೀಸಿದ್ದು ಫುಲ್ ವೈರಲ್ | *Cricket | OneIndia Kannada

ಈ ಮೂಲಕ ಮೇರಿ ಕೋಮ್ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಪಂದ್ಯಾವಳಿಯಲ್ಲಿ ಆಡುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. 2018ರ ಕಾಮನ್ ವೆಲ್ತ್ ಗೇಮ್ಸ್ ಆವೃತ್ತಿಯಲ್ಲಿ ಚಿನ್ನದ ಪದಕವನ್ನು ಪಡೆದ ಮೊದಲ ಭಾರತೀಯ ಮಹಿಳಾ ಬಾಕ್ಸರ್ ಆಗಿದ್ದಾರೆ.

English summary
Common wealth games 2022: Prime Minister Narendra Modi to interact with Indian Athletes today to motivate athletes , know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X