ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಮನ್‌ವೆಲ್ತ್ ಗೇಮ್ಸ್; ಚಿನ್ನ ಗೆದ್ದ ಲಕ್ಷ್ಯ ಸೇನ್

|
Google Oneindia Kannada News

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪಿ. ವಿ. ಸಿಂಧು ಚಿನ್ನಕ್ಕೆ ಮುತ್ತಿಟ್ಟ ಬೆನ್ನಲ್ಲೇ ಉದಯೋನ್ಮುಖ ಆಟಗಾರ ಲಕ್ಷ್ಯ ಸೇನ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಮಲೇಷ್ಯಾದ ತ್ಝೆ ಯೋಂಗ್ (19-21 21-9 21-16) ಅವರನ್ನು ಸೋಲಿಸುವ ಮೂಲಕ ಲಕ್ಷ್ಯ ಸೇನ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಚಿನ್ನವನ್ನು ಗೆದ್ದು ದೇಶದ ಹಿರಿಮೆ ಹೆಚ್ಚಿಸಿದ್ದಾರೆ. ಈ ಗೆಲುವಿನೊಂದಿಗೆ ಭಾರತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 20ನೇ ಚಿನ್ನವನ್ನು ತನ್ನದಾಗಿಸಿಕೊಂಡಿದೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಗೆದ್ದಿರುವ ಯುವ ಆಟಗಾರ, ಈ ಬಾರಿ ಚಿನ್ನಕ್ಕೆ ಕೊರಳೊಡ್ಡಿದ್ದಾರೆ. ಲಕ್ಷ್ಯ ಸೇನ್ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್-ಅಪ್ ಆಗಿದ್ದಾರೆ.

Commonwealth Games 2022: Lakshya Sen Wins Badminton Singles Gold Medal

ಯೂತ್ ಒಲಿಂಪಿಕ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತರಾಗಿರುವ ಲಕ್ಷ್ಯ ಈ ವರ್ಷದ ಆರಂಭದಲ್ಲಿ ಭಾರತದ ಐತಿಹಾಸಿಕ ಥಾಮಸ್ ಕಪ್ ಗೆಲುವಿನಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು.

ಸೋಮವಾರ 2022 ರ ಕಾಮನ್‌ವೆಲ್ತ್ ಗೇಮ್ಸ್‌ನ ಅಂತಿಮ ದಿನವಾಗಿದೆ.

ಇಂದು ಭಾರತಕ್ಕೆ ಇನ್ನೂ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಅವಕಾಶವಿದೆ. ಸಿಂಧು ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು ಸೋಲಿಸಿದರೆ, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮೂರು ಗೇಮ್‌ಗಳಲ್ಲಿ ಮಲೇಷ್ಯಾದ ಟ್ಜೆ ಯೋಂಗ್ ಎನ್‌ಜಿ ಅವರನ್ನು ಸೋಲಿಸಿದ್ದಾರೆ.

ಜಿ ಸತ್ಯನ್ ಅವರು ತಮ್ಮ ಟಿಟಿ ಪುರುಷರ ಸಿಂಗಲ್ಸ್ ಕಂಚಿನ ಪದಕ ಗೆದ್ದಿದ್ದಾರೆ.

ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಕೂಡ ಈಗ ತಮ್ಮ ಫೈನಲ್‌ನಲ್ಲಿ ಆಡಲಿದ್ದಾರೆ. ಸಂಜೆ ಪುರುಷರ ಹಾಕಿ ತಂಡವು ಚಿನ್ನದ ಪದಕಕ್ಕಾಗಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ.

ಟೇಬಲ್ ಟೆನಿಸ್‌ನಲ್ಲಿ ಅಚಂತ ಶರತ್ ಕಮಲ್ ಅವರು ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಡಲಿದ್ದಾರೆ. ಭಾರತವು ಪ್ರಸ್ತುತ 57 ಪದಕಗಳನ್ನು (20 ಚಿನ್ನ, 15 ಬೆಳ್ಳಿ, 22 ಕಂಚು) ಗೆದ್ದಿದೆ.

English summary
Commonwealth Games 2022: Lakshya Sen Wins Badminton Singles Gold Medal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X