ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಾಮನ್‌ವೆಲ್ತ್; ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲೂ ಚಿನ್ನ

|
Google Oneindia Kannada News

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪಿ. ವಿ. ಸಿಂಧು, ಉದಯೋನ್ಮುಖ ಆಟಗಾರ ಲಕ್ಷ್ಯ ಸೇನ್ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನದ ಪದಕಗಳನ್ನು ಗೆದ್ದರು. ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಗ್ಲೆಂಡ್‌ನ ಬೆನ್ ಲೇನ್ ಮತ್ತು ಸೀನ್ ವೆಂಡಿ ಅವರನ್ನು 21-15 ಮತ್ತು 21-13 ರಿಂದ ಸೋಲಿಸಿ ಚಿನ್ನದ ಪದಕ ಗೆದ್ದರು.

ಸೋಮವಾರ ಮಧ್ಯಾಹ್ನ ಪಿ. ವಿ. ಸಿಂಧು ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು ಸೋಲಿಸಿದರೆ, ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮೂರು ಗೇಮ್‌ಗಳಲ್ಲಿ ಮಲೇಷ್ಯಾದ ಟ್ಜೆ ಯೋಂಗ್ ಎನ್‌ಜಿ ಅವರನ್ನು ಸೋಲಿಸಿದ್ದಾರೆ.

Commonwealth Games 2022: Satwiksairaj Rankireddy and Chirag Shetty wins gold in mens doubles

ಟೇಬಲ್ ಟೆನಿಸ್‌ನಲ್ಲಿ ಅಚಂತ ಶರತ್ ಕಮಲ್ ಅವರು ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಚಿನ್ನ ಗೆದ್ದಿದ್ದಾರೆ.

ಜಿ ಸತ್ಯನ್ ಅವರು ತಮ್ಮ ಟಿಟಿ ಪುರುಷರ ಸಿಂಗಲ್ಸ್ ಕಂಚಿನ ಪದಕ ಗೆದ್ದಿದ್ದಾರೆ.

ಸೋಮವಾರ 2022 ರ ಕಾಮನ್‌ವೆಲ್ತ್ ಗೇಮ್ಸ್‌ನ ಅಂತಿಮ ದಿನವಾಗಿದೆ. ಇಂದು ಭಾರತವು ಐದು ಚಿನ್ನದ ಪದಕಗಳನ್ನು ಗೆಲ್ಲುವ ಅವಕಾಶವನ್ನು ಹೊಂದಿತ್ತು. ಇದೊಂದೆ ದಿನ ನಾಲ್ಕು ಚಿನ್ನದ ಪದಕಗಳನ್ನು ಬಾಚಿಕೊಂಡಿದೆ. ಚಿನ್ನ ಗೆದ್ದ ಆಟಗಾರರಿಗೆ ಗಣ್ಯರು, ಅಭಿಮಾನಿಗಳು ಸೇರಿದಂತೆ ದೇಶದೆಲ್ಲಡೆಯಿಂದ ಅಭಿನಂದನೆಗಳು ಹರಿದು ಬರುತ್ತಿದೆ.

ಸಂಜೆ ಪುರುಷರ ಹಾಕಿ ತಂಡವು ಚಿನ್ನದ ಪದಕಕ್ಕಾಗಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ.

ಭಾರತವು ಪ್ರಸ್ತುತ 58 ಪದಕಗಳನ್ನು (21 ಚಿನ್ನ, 15 ಬೆಳ್ಳಿ, 22 ಕಂಚು) ಗೆದ್ದಿದೆ.

English summary
Commonwealth Games 2022: Satwiksairaj Rankireddy and Chirag Shetty win gold in men's doubles.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X