ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಪಾಕಿಸ್ತಾನ ಆಟಗಾರರ ಸೇರ್ಪಡೆ
ಈಗಾಗಲೇ ಐಪಿಎಲ್ 18ನೇ ಆವೃತ್ತಿ ಮುಕ್ತಾಯವಾಗಿದೆ. ಇದೀಗ ಕೆರಿಬಿಯನ್ ಪ್ರೀಮಿಯರ್ ಲೀಗ್ ಸೀಸನ್ 14ಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ಲೀಗ್‌ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮಾಲೀಕತ್ವದ ತಂಡವೊಂದಕ್ಕೆ ಪಾಕಿಸ್ತಾನದ ಆಟಗಾರರು ಆಯ್ಕೆ ಆಗಿದ್ದಾರೆ. ಹಾಗಾದ್ರೆ ಯಾರು ಎನ್ನುವ ಮಾಹಿತಿಯನ್ನು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂಡಿಯನ್ ಪ್ರೀಮಿಯರ್ ಲೀಗ್ 2025 ಈಗಾಗಲೇ ಮುಕ್ತಾಯವಾದ ಬೆನ್ನಲ್ಲೇ ಕೆರಿಬಿಯನ್ ಪ್ರೀಮಿಯರ್ ಲೀಗ್ 14ನೇ ಸೀಸನ್‌ಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಾಮಾನ್ಯವಾಗಿ ಐಪಿಎಲ್‌ಗೆ ಪಾಕಿಸ್ತಾನ, ಆಫ್ಘಾನಿಸ್ತಾನ ಹೊರತುಪಡಿಸಿ ಎಲ್ಲಾ ದೇಶಗಳ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆದರೆ, ಸಿಪಿಎಲ್‌ನಲ್ಲಿ ಐಪಿಎಲ್ ಪ್ರಾಂಚೈಸಿಗಳೇ ತಂಡಗಳ ಆಯ್ಕೆ ಮಾಡಲಿದ್ದು, ಇದರಲ್ಲಿ ಕೆಲ ತಂಡಗಳಿಗೆ ಪಾಕ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಾಲಿಕತ್ವದ ತಂಡವೊಂದಕ್ಕೂ ಈ ದೇಶದ ಆಟಗಾರರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಸಿಪಿಎಲ್ ಆಗಸ್ಟ್ 14ರಿಂದ ಆರಂಭ ಆಗಲಿದೆ. ಈ ಟೂರ್ನಿಗಾಗಿ ಈಗಾಗಲೇ ಎಲ್ಲಾ ತಂಡಗಳು ಕೂಡ ಘೋಷಣೆ ಆಗಿವೆ. ಈ ನಡುವೆಯೇ ಕೆಕೆಆರ್ ಮಾಲಿಕತ್ವದ ತಂಡಕ್ಕೆ ಇಬ್ಬರು ಪಾಕಿಸ್ತಾನದ ವೇಗಿಗಳನ್ನು ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮಾಲೀಕತ್ವದ ಟ್ರಿನ್ಬ್ರಾಗೊ ನೈಟ್ ರೈಡರ್ಸ್ ತಂಡಕ್ಕೆ ಪಾಕಿಸ್ತಾನದ ಎಡಗೈ ವೇಗಿ ಮೊಹಮ್ಮದ್ ಅಮೀರ್ ಆಯ್ಕೆ ಆಗಿದ್ದಾರೆ. ಈ ಹಿಂದೆ ಜಮೈಕಾ ತಲ್ಲವಾಸ್ ಮತ್ತು ಆಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಅಮೀರ್ ಅವರನ್ನು ಈ ಬಾರಿ ಟ್ರಿನ್ಬ್ರಾಗೊ ನೈಟ್ ರೈಡರ್ಸ್ ಖರೀದಿ ಮಾಡಿದೆ.
2021ರಿಂದ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯುತ್ತಿರುವ ಮೊಹಮ್ಮದ್ ಅಮೀರ್ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಬರೋಬ್ಬರಿ 51 ವಿಕೆಟ್ ಕೀಳುವಲ್ಲಿ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ ಈ ಬಾರಿಯ ಡ್ರಾಫ್ಟ್ ಪ್ರಕ್ರಿಯೆಗೂ ಮುಂಚೆಯೇ ಆಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವು ಪಾಕ್ ವೇಗಿಯನ್ನು ಕೈಬಿಟ್ಟಿತ್ತು.
ಅದರಂತೆಯೇ ಡ್ರಾಫ್ಟ್ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಅಮೀರ್ ಅವರನ್ನು ಟ್ರಿನ್ಬ್ರಾಗೊ ನೈಟ್ ರೈಡರ್ಸ್ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅದೇ ರೀತಿ ಪಾಕಿಸ್ತಾನದ ಮತ್ತೋರ್ವ ವೇಗಿ ತಾರಿಖ್ ಅವರಿಗೂ ಸ್ಥಾನ ನೀಡಲಾಗಿದೆ. ಈ ಮೂಲಕ ಟಿಕೆಆರ್ ತಂಡವು ತನ್ನ ಬೌಲಿಂಗ್ ಲೈನ್ ಅಪ್ ಅನ್ನು ಮತ್ತಷ್ಟು ಬಲಿಷ್ಠಪಡಿಸಿಕೊಂಡಿದೆ.
ಟಿಕೆಆರ್ ತಂಡ ಹೀಗಿದೆ: ಕೀರನ್ ಪೊಲಾರ್ಡ್, ಸುನಿಲ್ ನರೈನ್, ಆಂಡ್ರೆ ರಸ್ಸೆಲ್, ನಿಕೋಲಸ್ ಪೂರನ್, ಅಲಿ ಖಾನ್, ಕೀಸಿ ಕಾರ್ಟಿ, ಅಕೇಲ್ ಹೋಸೇನ್, ಟೆರನ್ಸ್ ಹಿಂಡ್ಸ್, ಅಲೆಕ್ಸ್ ಹೇಲ್ಸ್, ಕಾಲಿನ್ ಮನ್ರೋ, ಮೊಹಮ್ಮದ್ ಅಮೀರ್, ಉಸ್ಮಾನ್ ತಾರಿಕ್, ಜೋಶುವಾ ಡಾ ಸಿಲ್ವಾ, ನಾಥನ್ ಎಡ್ವರ್ಡ್ಸ್, ಮೆಕೆನ್ನಿ ಕ್ಲಾರ್ಕ್, ಡ್ಯಾರೆನ್ ಬ್ರಾವೋ, ಯಾನಿಕ್ ಕ್ಯಾರಿಯಾ, ಮೊಹಮ್ಮದ್ ಅಮೀರ್.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications