ಮೈಸೂರಿಗೆ ಮರಳಿದ ಕ್ರಿಕೆಟ್ ಹಬ್ಬ, ಮಹಾರಾಜ ಟಿ20 ಟ್ರೋಫಿಯ ಡಿಟೈಲ್ಸ್ ಇಲ್ಲಿದೆ
ಮೈಸೂರು, ಆಗಸ್ಟ್ 3: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ವರ್ಷಗಳ ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ ಸಿಎ) ಮೈಸೂರಿನಲ್ಲಿ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲು ಮುಂದಾಗಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಹಿಂದಿನ ಕರ್ನಾಟಕ ಪ್ರೀಮಿಯರ್ ಲೀಗ್ ಮಾದರಿಯ ಫ್ರ್ಯಾಂಚೈಸಿ ಲೀಗ್ ಅಲ್ಲ. ಪ್ರಾಯೋಜಕತ್ವ ಆಧಾರಿತ ಟಿ20 ಟೂರ್ನಿಯಾಗಿದೆ. ಆಟಗಾರರ ಆಯ್ಕೆಯೂ ಹರಾಜು ಪ್ರಕ್ರಿಯೆ ಮೂಲಕ ನಡೆಯುವುದಿಲ್ಲ. ಡ್ರಾಫ್ಟ್ ಪದ್ಧತಿಯ ಮೂಲಕ ನಡೆಯಲಿದೆ. ಟೂರ್ನಿಯ ಆಯೋಜನೆ ಸಂಪೂರ್ಣ ಹೊಣೆಗಾರಿಕೆ ಕೆಎಸ್‌ಸಿಎ ವಹಿಸಿಕೊಂಡಿದೆ.
ಇನ್ನೂ ಕೊರೊನಾ ಕರಿ ನೆರಳಿನಿಂದಾಗಿ 2020 ಮತ್ತು 2021ನೇ ಸಾಲಿನಲ್ಲಿ ಮೈಸೂರಿನಲ್ಲಿ ಯಾವುದೇ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸದ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೆ ಒಳಗಾಗಿದ್ದರು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಪತಿವರ್ಷ ನಡೆಯುತ್ತಿದ್ದ ಟಿ-20 ಕ್ರಿಕೆಟ್ ಪಂದ್ಯಾವಳಿಯ ರೋಚಕ ಕ್ಷಣಗಳನ್ನು ಮಿಸ್ ಮಾಡಿಕೊಂಡಿದ್ದರು. ಇದೀಗ ಪ್ರಮುಖ ಕ್ರಿಕೆಟ್ ಟೂರ್ನಿಯನ್ನು ನೋಡಿ ಆನಂದಿಸುವ ಕಾಲ ಕೂಡಿಬಂದಿದೆ.
ಆಗಸ್ಟ್ ತಿಂಗಳ 7ರಂದು ನಡೆಯಲಿರುವ ಹುಬ್ಬಳ್ಳಿ ಟೈಗರ್ಸ್ ಮತ್ತು ಮಂಗಳೂರು ಯುನೈಟೆಡ್ ತಂಡಗಳ ನಡುವಿನ ಲೀಗ್ ಹಂತದ ಪಂದ್ಯದ ಮೂಲಕ ಈ ಟೂರ್ನಿಯ ಪಂದ್ಯಗಳು ಆರಂಭವಾಗಲಿದ್ದು, ಆಗಸ್ಟ್ 26ರಂದು ಫೈನಲ್ ಪಂದ್ಯ ನಡೆಯಲಿದೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಗುಲ್ಬರ್ಗಾ ಹಾಗೂ ಮಂಗಳೂರಿನ ಹೆಸರಿನಲ್ಲಿ 6 ತಂಡಗಳು ಸ್ಪರ್ಧಿಸುತ್ತಿವೆ. ಆಟಗಾರರಿಗೆ 35 ವಯೋಮಿತಿ ನಿಗದಿಪಡಿಸಿದ್ದು, ತಂಡಗಳನ್ನು ಆಟಗಾರರ ಡ್ರಾಫ್ಟ್ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಅಲ್ಲದೆ, ತಂಡದ ನಾಯಕರು, ಉಪ-ನಾಯಕರನ್ನು ಕೆಎಸ್‌ಸಿಎಯೇ ಆಯ್ಕೆ ಮಾಡುತ್ತದೆ. ಈ ಬಾರಿ ಫ್ರಾಂಚೈಸಿಗಳ ಬದಲಿಗೆ ಪ್ರಾಯೋಜಕತ್ವದಡಿ ಟೂರ್ನಿ ಆಯೋಜಿಸಲಾಗುತ್ತಿದೆ. ಮೈಸೂರು ತಂಡಕ್ಕೆ ಸೈಕಲ್ ಪ್ಯೂರ್ ಅಗರ್‌ಬತ್ತಿ ಪಾಯೋಜಕತ್ವ ವಹಿಸಿದೆ.

ಮೈಸೂರು ತಂಡಕ್ಕೆ ಕರುಣ್ ನಾಯರ್ ನಾಯಕ
ಮೈಸೂರು ವಾರಿಯರ್ಸ್ ತಂಡವನ್ನು ಕರುಣ್ ನಾಯರ್ ಮುನ್ನಡೆಸಲಿದ್ದಾರೆ. ಕರುಣ್ ನಾಯರ್ ಅತ್ಯುತ್ತಮ ಬ್ಯಾಟರ್ ಆಗಿದ್ದು, ಅವರು ಭಾರತದ ಪರ ಜಿಂಬಾಬ್ವೆ ವಿರುದ್ಧ ಸೀಮಿತ ಓವರ್‌ಗಳ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ವ್ಯಕ್ತಿ ಜೀವನ ಆರಂಭಿಸಿದರು. ವೀರೇಂದ್ರ ಸೆಹ್ವಾಗ್ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. 2016ರಲ್ಲಿ ಇಂಗ್ಲೆಂಡ್ ವಿರುದ್ಧ ಕರುಣ್ 303 ರನ್‌ಗಳಿಸಿದ್ದರು.

ಆಗಸ್ಟ್ 4ರಂದು ಟ್ರೋಫಿ ಅನಾವರಣ
ಮಹಾರಾಜ ಟ್ರೋಪಿ ಪಂದ್ಯಾವಳಿ ಟ್ರೋಫಿಯನ್ನು ಆಗಸ್ಟ್ 4ರಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಅನಾವರಣಗೊಳಿಸಲಾಗುತ್ತದೆ. ಕೆಎಸ್ ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕಿಚ್ಚ ಸುದೀಪ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಮೊದಲ ಪಂದ್ಯ ಗಂಗೋತ್ರಿ ಗ್ಲೇಡ್ ಮೈದಾನದಲ್ಲಿ ನಡೆಯಲಿದೆ. ಮಳೆ ಬಂದರೆ ಬಳಸಲು ಸೂಕ್ತ ಯಂತ್ರಗಳನ್ನು ತರಿಸಲಾಗಿದೆ ಎಂದು ಮೈಸೂರು ವಿಭಾಗದ ಸಂಚಾಲಕ ಎಸ್.ಸುಧಾಕರ್ ತಿಳಿಸಿದ್ದಾರೆ.

ಹಲವು ಸ್ಟಾರ್ ಆಟಗಾರರು ಕಣಕ್ಕಿಳಿಯುವ ಸಾಧ್ಯತೆ
ಕರ್ನಾಟಕ ಸ್ಟಾರ್ ಆಟಗಾರರಾದ ಮಯಾಂಕ್ ಆಗರ್‌ವಾಲ್, ಮನೀಷ್ ಪಾಂಡೆ, ಜೆ.ಸುಚಿತ್, ದೇವದತ್ ಪಡಿಕಲ್, ಶ್ರೇಯಸ್ ಗೋಪಾಲ್, ಕೆ.ಗೌತಮ್, ಕರುಣ್ ನಾಯರ್, ಅಭಿನವ್ ಮನೋಹರ್, ಕೆಸಿ ಕಾರ್ಯಪ್ಪ, ಪ್ರವೀಣ್ ದುಬೆ ಹಾಗೂ ಅಭಿಮನ್ಯು ಮಿಥುನ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಕ್ರಿಕೆಟ್ ಅಭಿಮಾನಿಗಳು ನೆಚ್ಚಿನ ಆಟಗಾರರನ್ನು ಹತ್ತಿರದಿಂದ ನೋಡಬಹುದಾಗಿದೆ.

ಪಂದ್ಯಗಳ ವೇಳಾಪಟ್ಟಿ
ಆಗಸ್ಟ್ 7: ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್ & ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 8: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 9: ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್
ಆಗಸ್ಟ್ 10: ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ & ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 11: ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಯುನೈಟೆಡ್ & ಮೈಸೂರು ವಾರಿಯರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್
ಆಗಸ್ಟ್ 12: ಹುಬ್ಬಳ್ಳಿ ಟೈಗರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 13: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 14: ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 15: ಮಂಗಳೂರು ಯುನೈಟೆಡ್ vs ಬೆಂಗಳೂರು ಬ್ಲಾಸ್ಟರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್
ಆಗಸ್ಟ್ 17: ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್
ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1
ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ
ಆಗಸ್ಟ್ 26: ಫೈನಲ್ ಪಂದ್ಯ












Click it and Unblock the Notifications