Ravindra Jadeja: ರವೀಂದ್ರ ಜಡೇಜಾ ಮತ್ತೊಂದು ವಿಶೇಷ ದಾಖಲೆ: ಈ ಸಾಧನೆ ಮಾಡಿದ ಮೊದಲ ಭಾರತೀಯ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಜಡೇಜಾ ನಾಯಕ ಧೋನಿ ಜೊತೆ ಸೇರಿ ಗೆಲುವಿಗಾಗಿ ಸಾಕಷ್ಟಿ ಹೋರಾಟ ನಡೆಸಿದರಾದರೂ ಕೊನೆಯ ಎಸೆತದಲ್ಲಿ ಸೋಲು ಅನುಭವಿಸಿದರು. ಆದರೆ ಈ ಪಂದ್ಯದಲ್ಲಿ ಜಡೇಜಾ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಸ್ಪಿನ್ನರ್ ಆಗಿ ಹಾಗೂ ಪವರ್ ಹಿಟ್ಟರ್ ಬ್ಯಾಟರ್ ಆಗಿ ತಂಡಕ್ಕೆ ನೆರವಾಗುತ್ತಿದ್ದಾರೆ ರವೀಂದ್ರ ಜಡೇಜಾ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಎರಡು ವಿಕೆಟ್ ಕಬಳಿಸಿದ್ದ ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿಯೂ ಮಹತ್ವದ ಪ್ರದರ್ಶನ ನೀಡಿ ಗಮನ ಸೆಳೆದರು. ಆದರೆ ಗೆಲುವು ಸಾಧ್ಯವಾಗಲಿಲ್ಲ.

34ರ ಹರೆಯದ ಆಲ್‌ರೌಂಡರ್ ರವೀಂದ್ರ ಜಡೇಜಾ ಐಪಿಎಲ್‌ನಲ್ಲಿ 2000 ರನ್ ಹಾಗೂ ಟಿ20 ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೈಲಿಗಲ್ಲು ಸಾಧಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ ರವೀಂದ್ರ ಜಡೇಜಾ. ಈ ಪಂದ್ಯಕ್ಕೂ ಮುನ್ನ ರವೀಂದ್ರ ಜಡೇಜಾ ಅದಾಗಲೇ ಐಪಿಎಲ್‌ನಲ್ಲಿ 2500 ರನ್‌ಗಳನ್ನು ಗಳಿಸಿದ್ದರು. ಆದರೆ 198 ವಿಕೆಟ್‌ಗಳನ್ನು ಪಡೆದುಕೊಂಡಿದ್ದ ಅವರು ಈ ಸಾಧನೆಗಾಗಿ ಎರಡು ವಿಕೆಟ್‌ಗಳನ್ನು ಪಡೆಯಬೇಕಿತ್ತು.
ಇನ್ನು ರವೀಂದ್ರ ಜಡೇಜಾ ಟಿ20 ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ 200 ವಿಕೆಟ್ ಪಡೆದ 9ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 2531 ರನ್‌ಗಳನ್ನು ಗಳಿಸಿರುವ ಅವರು 138 ವಿಕೆಟ್‌ಗಳನ್ನು ಕೂಡ ಪಡೆದುಕೊಂಡಿದ್ದಾರೆ.ಐಪಿಎಲ್‌ನಲ್ಲಿ ಅವರು ಎರಡು ಅರ್ಧ ಶತಕಗಳನ್ನು ಬಾರಿಸಿದ್ದು ಅವರ ಹೈಯೆಸ್ಟ್ ಸ್ಕೋರ್ 62 ಆಗಿದೆ.
CSK vs RR IPL 2023: ಎಂಎಸ್ ಧೋನಿ ಬ್ಯಾಟಿಂಗ್ ಮಾಡುವಾಗ ದಾಖಲೆ ಬರೆದ ಡಿಜಿಟಲ್ ವೀಕ್ಷಕರ ಸಂಖ್ಯೆ
ಇನ್ನು ಒಟ್ಟಾರೆ ಟಿ20 ಮಾದರಿಯಲ್ಲಿ ಜಡೇಜಾ 296 ಪಂದ್ಯಗಳನ್ನು ಆಡಿದ್ದು 3198 ರನ್‌ಗಳನ್ನು ಬಾರಿಸಿದ್ದು 25.58ರ ಸರಾಸರಿ ಹಾಗೂ 128.48ರ ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಇನ್ನು ಜಡೇಜಾ 200 ವಿಕೆಟ್‌ಗಳನ್ನು 7.54r ಎಕಾನಮಿಯಲ್ಲಿ ಪಡೆದಿದ್ದು ಒಂದು ಐದು ವಿಕೆಟ್‌ಗಳ ಗೊಂಚಲು ಹಾಗೂ ಮೂರು ನಾಲ್ಕು ವಿಕೆಟ್‌ಗಳ ಗೊಂಸಲು ಪಡೆದಿದ್ದಾರೆ.
ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಎಂಎಸ್ ಧೋನಿ ಹಾಗೂ ರವೀಂದ್ರ ಜಡೇಜಾ ಅವರ ಭರ್ಜರಿ ಬ್ಯಾಟಿಂಗ್‌ನ ಹೊರತಾಗಿಯೂ 3 ರನ್‌ಗಳ ಅಂತರದ ಸೋಲು ಕಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ತವರು ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಸಂಜು ಸ್ಯಾಮ್ಸನ್ ಪಡೆ ರೋಚಕ ಗೆಲುವು ಸಾಧಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 175/8 ರನ್‌ಗಳನ್ನು ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್ ಕಳೆದುಕೊಂಡು 172 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು. ಈ ಮೂಲಕ 3 ರನ್‌ಗಳ ಅಂತರದಿಂದ ಸಿಎಸ್‌ಕೆ ತಂಡ ಗೆಲುವು ಸಾಧಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications