CSK vs LSG IPL 2023: ಧೋನಿ vs ರಾಹುಲ್ ಸೆಣಸಾಟದಲ್ಲಿ ಗೆಲುವು ಯಾರಿಗೆ?; ಆಡುವ 11ರ ಬಳಗ; ಪಂದ್ಯದ ವಿವರ
ಸೋಮವಾರ, ಏಪ್ರಿಲ್ 3ರಂದು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ನಾಲ್ಕನೇ ಪಂದ್ಯದಲ್ಲಿ ಎಂಎಸ್ ಧೊನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಡಲಿವೆ.
ಐಪಿಎಲ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರು ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಮ್ಮ ಮೊದಲ ಗೆಲುವು ಕಾಣಲು ಎದುರು ನೋಡುತ್ತಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಮ್ಮ ಮೊದಲ ಪಂದ್ಯದಲ್ಲಿ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಜಯದ ನಾಗಾಲೋಟವನ್ನು ಮುಂದುವರೆಸಲು ಪ್ರಯತ್ನಿಸಲಿದೆ.

ಕೆಎಲ್ ರಾಹುಲ್ ಪಡೆ ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರ ಅನುಪಸ್ಥಿತಿಯಲ್ಲಿ ಮತ್ತೊಮ್ಮೆ ಕಣಕ್ಕಿಳಿಯಲಿದೆ. ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ ಆಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಎರಡನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ರಾಷ್ಟ್ರಿಯ ತಂಡದ ಪರ ಆಡುತ್ತಿರುವ ಸಿಸಂಡಾ ಮಗಾಲಾ ಅವರ ಸೇವೆಯನ್ನು ಸಿಎಸ್‌ಕೆ ತಂಡ ಕಳೆದುಕೊಳ್ಳಲಿದೆ.
ಐಪಿಎಲ್ 2022ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕಾಗಿ ಕ್ವಿಂಟನ್ ಡಿ ಕಾಕ್ ಅದ್ಭುತ ಫಾರ್ಮ್‌ನಲ್ಲಿದ್ದರು. ಕಳೆದ ವರ್ಷ ಒಂದು ಶತಕ ಮತ್ತು 3 ಅರ್ಧಶತಕಗಳೊಂದಿಗೆ 508 ರನ್ ಗಳಿಸಿದ್ದರು. ಇದೇ ವೇಳೆ ಟಿ20 ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಉತ್ತಮವಾಗಿ ಆಡುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ ಬದಲಿಗೆ ಆಡಿದ ಕೈಲ್ ಮೇಯರ್ಸ್ 73 ರನ್ ಬಾರಿಸಿರುವುದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮ್ಯಾನೇಜ್‌ಮೆಂಟ್ ಸಂತಸಗೊಂಡಿದ್ದು, ಕ್ವಿಂಟನ್ ಡಿ ಕಾಕ್ ಅವರ ಅನುಪಸ್ಥಿತಿ ಹೆಚ್ಚಿಗೆ ಕಾಡಲಾರದು. ನಾಯಕ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್ ವೈಭವವನ್ನು ಮರಳಿಸಬೇಕಿದೆ.

ಮತ್ತೊಂದರೆಡೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವುದು ಆತಂಕ ಮೂಡಿಸಿದೆ. ಗುಜರಾತ್ ಟೈಟನ್ಸ್ ವಿರುದ್ಧದ ಮೊದಲ ಪಂದ್ಯಕ್ಕೂ ಅನುಮಾನವಿತ್ತು. ಎಂಎಸ್ ಧೋನಿ ಅವರ ಗಾಯದ ಪ್ರಮಾಣದ ಮೇಲೆ ಆಡುತ್ತಾರೋ, ಇಲ್ಲವೋ ಎಂಬುದು ನಿರ್ಧರಿತವಾಗಲಿದೆ.
ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವು ಸೋಮವಾರ, ಏಪ್ರಿಲ್ 3ರಂದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಪಂದ್ಯ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುವುದು ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಮಾರ್ಕಸ್ ಸ್ಟೋನಿಸ್, ಆಯುಷ್ ಬದೊನಿ, ಕೃನಾಲ್ ಪಾಂಡ್ಯ, ಅವೇಶ್ ಖಾನ್, ರವಿ ಬಿಷ್ಣೋಯ್, ಅಮಿತ್ ಮಿಶ್ರಾ, ಮಾರ್ಕ್ ವುಡ್.












Click it and Unblock the Notifications