CSK vs MI: ಚೆಪಾಕ್‌ನಲ್ಲಿ ಗೆದ್ದ ಚೆನ್ನೈ; ಸಂಪ್ರದಾಯ ಮುಂದುವರೆಸಿದ ಮುಂಬೈ ಇಂಡಿಯನ್ಸ್‌!

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದೆ. ಐಪಿಎಲ್ ನ ಎಲ್‌ ಕ್ಲಾಸಿಕೋ ಎಂದೇ ಕರೆಸಿಕೊಂಡಿದ್ದ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗೆಲುವಿನ ಶುಭಾರಂಭ ಮಾಡಿತು.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ದಾಳಿಯ ಎದುರು ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಮಾಡಲು ಪರದಾಡಿತು.

csk win against mumbai indians ipl 2025

ತಿಲಕ್ ವರ್ಮಾ 31 ರನ್, ಸೂರ್ಯಕುಮಾರ್ ಯಾದವ್ 29 ರನ್ ಗಳಿಸಿದರೆ. ಕೊನೆಯಲ್ಲಿ ದೀಪಕ್ ಚಾಹರ್ 15 ಎಸೆತಗಳಲ್ಲಿ ಅಜೇಯ 28 ರನ್ ಗಳಿಸುವ ಮೂಲಕ ತಂಡದ ಮೊತ್ತ 150 ದಾಟುವಂತೆ ನೋಡಿಕೊಂಡರು. ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ನೂರ್ ಅಹ್ಮದ್ 4 ಓವರ್ ಗಳಲ್ಲಿ 20 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು. ಖಲೀಲ್ ಅಹ್ಮದ್ ಆರಂಭದಲ್ಲೇ ರೋಹಿತ್ ಶರ್ಮಾ, ರಿಕಲ್ಟನ್ ವಿಕೆಟ್ ಪಡೆದು ಆಘಾತ ನೀಡಿದರು.

ರಚಿನ್, ರುತುರಾಜ್ ಜವಾಬ್ದಾರಿಯುತ ಆಟ

156 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ 19.1 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 158 ರನ್ ಗಳಿಸುವ ಮೂಲಕ 4 ವಿಕೆಟ್‌ಗಳ ಗೆಲುವು ಸಾಧಿಸಿತು. ರಚಿನ್ ರವೀಂದ್ರ 45 ಎಸೆತಗಳಲ್ಲಿ ಅಜೇಯ 65 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ರುತುರಾಜ್ ಗಾಯಕ್ವಾಡ್ 26 ಎಸೆತಗಳಲ್ಲಿ 53 ರನ್ ಗಳಿಸಿ ಮಿಂಚಿದರು.

ವಿಘ್ನೇಶ್ ಪುತ್ತೂರ್ 3 ವಿಕೆಟ್ ಪಡೆಯುವ ಮೂಲಕ ಮೊದಲ ಪಂದ್ಯದಲ್ಲೇ ಭರವಸೆ ಮೂಡಿಸಿದರು. ದೀಪಕ್ ಚಾಹರ್ ಮತ್ತು ವಿಲ್‌ ಜ್ಯಾಕ್ಸ್ ತಲಾ ಒಂದು ವಿಕೆಟ್ ಪಡೆದರು. 2024ರ ಐಪಿಎಲ್‌ನಲ್ಲಿ ಮೂರು ಪಂದ್ಯಗಳಲ್ಲಿ ನಿಧಾನಗತಿಯ ಓವರ್ ರೇಟ್ ಹೊಂದಿದ್ದ ಕಾರಣ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಹೊರಗುಳಿಯಬೇಕಾಯಿತು. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇನ್ನೂ ಫಿಟ್ ಆಗದ ಕಾರಣ ಇಬ್ಬರ ಅನುಪಸ್ಥಿತಿ ಮುಂಬೈ ಇಂಡಿಯನ್ಸ್ ತಂಡವನ್ನು ಕಾಡಿತು.

ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮಾರ್ಚ್ 28ರಂದು ಚೆನ್ನೈನಲ್ಲೇ ಈ ಪಂದ್ಯ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+