RCB vs CSK: ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ: ಆರ್‌ಸಿಬಿ ಮಾರಕ ವೇಗಿಯೇ ಅಲಭ್ಯ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಆವೃತ್ತಿಯಲ್ಲಿ ಆರ್ ಸಿಬಿ ತವರಿನಲ್ಲಿ ಸತತವಾಗಿ ಐದನೇ ಬಾರಿ ಟಾಸ್ ಸೋತಿದೆ. ತವರಿನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿರುವ ಆರ್ ಸಿಬಿ ಎರಡನೇ ಗೆಲುವಿನ ವಿಶ್ವಾಸದಲ್ಲಿದೆ.
ಟಾಸ್ ಗೆದ್ದ ಬಳಿಕ ಮಾತನಾಡಿದ ಸಿಎಸ್‌ಕೆ ನಾಯಕ ಎಂಎಸ್ ಧೋನಿ, ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಕೊನೆಯ ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದ್ದೇವೆ. ನಾವು ಪಂದ್ಯಗಳನ್ನು ಗೆಲ್ಲಲು ಬಯಸುತ್ತೇವೆ ಆದರೆ ನಾಲ್ಕು ಪಂದ್ಯಗಳಲ್ಲಿ ಹೆಚ್ಚಿನ ಪಂದ್ಯಗಳಲ್ಲಿ ಗೆಲುವು ಪಡೆಯುವುದು ಮುಖ್ಯ ಎಂದಿದ್ದಾರೆ. ಇಲ್ಲಿನ ಪಿಚ್ ಸಾಕಷ್ಟು ಸಮಯದಿಂದ ಕವರ್ ಅಡಿಯಲ್ಲಿದೆ, ಅದನ್ನು ಹೊರತುಪಡಿಸಿ ಇಲ್ಲಿ ರನ್ ಗಳಿಸುವುದು ಸುಲಭ ಎಂದಿದ್ದಾರೆ.

ಇದು ಹೆಚ್ಚಿನ ಸ್ಕೋರಿಂಗ್ ಸ್ಥಳವಾಗಿದೆ ಮತ್ತು ಆರಂಭಿಕ ಆರಂಭದ ನಂತರ ಬ್ಯಾಟಿಂಗ್ ಮಾಡಲು ಸಾಕಷ್ಟು ಉತ್ತಮವಾಗಿರುತ್ತದೆ. ನೀವು ಬೌಲರ್ ಆಗಿದ್ದರೆ ಅದನ್ನು ಸರಿಯಾಗಿ ಎಕ್ಸಿಕ್ಯೂಶನ್ ಮಾಡಬೇಕು. ಯೋಜನೆ ಮಾಡಿ ಆತ್ಮವಿಶ್ವಾಸದಿಂದ ಬೌಲಿಂಗ್ ಮಾಡಬೇಕು ಕಳೆದ ಪಂದ್ಯದಲ್ಲಿ ಆಡಿದ ತಂಡವೇ ಇರಲಿದೆ ಎಂದಿದ್ದಾರೆ.
ಫಿಲ್ ಸಾಲ್ಟ್, ಜೋಶ್ ಹೇಜಲ್‌ವುಡ್ ಅಲಭ್ಯ
ಇನ್ನು ಆರ್ ಸಿಬಿ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಪಂದ್ಯಕ್ಕೆ ಅಲಭ್ಯರಾಗಿದ್ದು ಅವರ ಬದಲಾಗಿ ಲುಂಗಿ ಎಂಗಿಡಿ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದು ಜೇಕಬ್ ಬೆಥೆಲ್ ಅವರೇ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು : ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್ಗಿಡಿ, ಯಶ್ ದಯಾಳ್.
ಚೆನ್ನೈ ಸೂಪರ್ ಕಿಂಗ್ಸ್ : ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕುರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ದೀಪಕ್ ಹೂಡಾ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಾಂಬೋಜ್, ಮಥೀಶ ಪತಿರಾನ.












Click it and Unblock the Notifications