ಭಾರತ- ಪಾಕಿಸ್ತಾನ ಕ್ರಿಕೆಟ್ ಕದನ, ಟಿಕೆಟ್ ಪಡೆದವನೇ ಜಾಣ!
ನವದೆಹಲಿ, ಜುಲೈ 19: ಅನೇಕ ವರ್ಷಗಳ ಬಳಿಕ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಆಟಕ್ಕೆ ಅವಕಾಶ ಸಿಕ್ಕಿದೆ. ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸುವ ಭಾರತೀಯ ಕ್ರೀಡಾಪಟುಗಳು ಒಂದೆಡೆ ತಯಾರಿ ನಡೆಸಿದ್ದರೆ, ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತದ ಮಹಿಳಾ ಕ್ರಿಕೆಟ್ ತಂಡ ಇನ್ನೊಂದೆಡೆ ತರಬೇತಿ ಪಡೆಯುತ್ತಿದೆ.
ಇದೇ ಮೊದಲ ಬಾರಿಗೆ ಬಹು ಕ್ರೀಡೆಗಳ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟವೊಂದರಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಪಾಲ್ಗೊಳ್ಳುತ್ತಿದೆ. ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದು ಆಯೋಜಕರು ಹೇಳಿದ್ದಾರೆ. ಇಲ್ಲಿ ತನಕ ಸುಮಾರು 1.2 ಮಿಲಿಯನ್ ಟಿಕೆಟ್ ಮಾರಾಟವಾಗಿವೆ ಎಂದಿದ್ದಾರೆ.
ಜುಲೈ 31ರಂದು ಭಾರತ ಹಾಗೂ ಪಾಕಿಸ್ತಾನ ಮಹಿಳೆಯರ ಕ್ರಿಕೆಟ್ ನೋಡಲು ಎಜ್ ಬಾಸ್ಟನ್ ಮೈದಾನದಲ್ಲಿ ಭಾರತ ಉಪಖಂಡ ಮೂಲದ ನಿವಾಸಿಗಳು ಅಧಿಕ ಸಂಸ್ಥೆಯಲ್ಲಿ ಉಪಸ್ಥಿತರಿರುತ್ತಾರೆ ಎಂಬ ನಿರೀಕ್ಷೆಯಿದೆ. ಈ ಪಂದ್ಯವಲ್ಲದೆ, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದ ಟಿಕೆಟ್ ಗಾಗಿ ಬೇಡಿಕೆ ಹೆಚ್ಚಿದೆ ಎಂದು ಬರ್ಮಿಂಗ್ ಹ್ಯಾಮ್ ಗೇಮ್ಸ್ ಸಿಇಒ ಅಯಾನ್ ರೈಡ್ ಹೇಳಿದ್ದಾರೆ.
2012ರ ಲಂಡನ್ ಒಲಿಂಪಿಕ್ಸ್ ನಂತರ ಬೃಹತ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದ್ದು, 45,000 ಸ್ವಯಂಸೇವಕರು, ಕ್ರೀಡಾಸಂಸ್ಥೆಗಳ ಸಿಬ್ಬಂದಿಗಳು ಅಚ್ಚುಕಟ್ಟಾದ ಆಯೋಜನೆಗೆ ನೆರವಾಗುತ್ತಿದ್ದಾರೆ. ಸುಮಾರು 72ಕ್ಕೂ ಅಧಿಕ ಕಾಮನ್ ವೆಲ್ತ್ ರಾಷ್ಟ್ರಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿವೆ.

"ಆಸ್ಟ್ರೇಲಿಯಾ, ಬಾರ್ಬಡೋಸ್ ಮತ್ತು ಪಾಕಿಸ್ತಾನದೊಂದಿಗೆ ಭಾರತವ ತಂಡವು ಎ ಗುಂಪಿನಲ್ಲಿದೆ. ಶ್ರೀಲಂಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾವು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಆಯಾ ಪೂಲ್‌ಗಳಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯುತ್ತವೆ. ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಲು ಭಾರತ ಸಜ್ಜಾಗಿದ್ದು, ಜುಲೈ29, 2022ರಂದು ಮೊದಲ ಪಂದ್ಯವಾಡಲಿದೆ"
Here is the complete squad of 4 teams in Group A of common wealth games 2022
— WomensCricCraze🏏 (@WomensCricCraze) July 19, 2022
✅Australia
✅Barbados
✅India
✅Pakistan#TeamAustralia #TeamBarbados #TeamIndia #TeamPakistan #CricketTwitter #CWG2022 #CommonwealthGames2022 pic.twitter.com/7wWLTQFfoL
ಟೀಂ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಎಸ್. ಮೇಘನಾ, ತನಿಯಾ ಸಪ್ನಾ ಭಾಟಿಯಾ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಠಾಕೂರ್ , ಜೆಮಿಮಾ ರೋಡ್ರಿಗಸ್, ರಾಧಾ ಯಾದವ್, ಹರ್ಲೀನ್ ಡಿಯೋಲ್, ಸ್ನೇಹ ರಾಣಾ. ಸ್ಟ್ಯಾಂಡ್‌ಬೈ: ಸಿಮ್ರಾನ್ ದಿಲ್ ಬಹದ್ದೂರ್, ರಿಚಾ ಘೋಷ್, ಪೂನಂ ಯಾದವ್.
ಭಾರತದ ಕ್ರೀಡಾಪಟುಗಳು:
108 ಪುರುಷ ಮತ್ತು 107 ಮಹಿಳಾ ಕ್ರೀಡಾಪಟುಗಳನ್ನು ಒಳಗೊಂಡ 215 ಸದಸ್ಯರ ಭಾರತೀಯ ತಂಡವು ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28 ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಭಾರತದ ಕ್ರೀಡಾಪಟುಗಳು 16 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಚೊಚ್ಚಲ, ಅಕ್ವಾಟಿಕ್ಸ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಬಾಕ್ಸಿಂಗ್, ಸೈಕ್ಲಿಂಗ್, ಜಿಮ್ನಾಸ್ಟಿಕ್ಸ್, ಟ್ರಯಥ್ಲಾನ್, ಕುಸ್ತಿ, ವೇಟ್‌ಲಿಫ್ಟಿಂಗ್, ಲಾನ್ ಬೌಲ್ಸ್, ಸ್ಕ್ವಾಷ್, ಜೂಡೋ ಮತ್ತು ಪ್ಯಾರಾ ಕ್ರೀಡೆಗಳಲ್ಲಿ ಭಾರತ ಭಾಗವಹಿಸಲಿದೆ. ಭಾರತವು ಮಹಿಳಾ ಕ್ರಿಕೆಟ್‌ನಲ್ಲಿ ಕೂಡ ಭಾಗವಹಿಸಲಿದೆ.
2018 ರಲ್ಲಿ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ, ಭಾರತವು 26 ಚಿನ್ನ, 20 ಬೆಳ್ಳಿ ಮತ್ತು ಕಂಚು ಸೇರಿದಂತೆ 66 ಪದಕಗಳೊಂದಿಗೆ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಂತರದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು.(PTI)
-
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications